Yash: ಆಗಸ್ಟ್ 8ರಿಂದ ಟಾಕ್ಸಿಕ್ ಶೂಟಿಂಗ್ ಶುರು, ಸುರ್ಯ ಸದಾಶಿವ ರುದ್ರ ದೇವಾಲಯ, ಧರ್ಮಸ್ಥಳ ಮಂಜುನಾಥೇಶ್ವರ ದೇಗುಲ ದರ್ಶನ ಮಾಡಿದ ನಟ ಯಶ್
Yash visit Dharmasthala Temple: ಕೆಜಿಎಫ್ ನಟ ಯಶ್ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಇಂದು ಭೇಟಿ ನೀಡಿದ್ದಾರೆ. ಇದೇ ಆಗಸ್ಟ್ 8ರಿಂದ ಟಾಕ್ಸಿಕ್ ಸಿನಿಮಾ ಶೂಟಿಂಗ್ ಆರಂಭವಾಗುತ್ತಿದ್ದು, ಇದಕ್ಕೂ ಮುನ್ನ ಕರಾವಳಿ ದೇವಾಲಯಗಳಿಗೆ ಟೆಂಪಲ್ ರನ್ ಮಾಡುತ್ತಿದ್ದಾರೆ.
ಬೆಂಗಳೂರು: ಕನ್ನಡ ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಇದೇ ಆಗಸ್ಟ್ 8ರಿಂದ ಆರಂಭವಾಗಲಿದೆ. ಕೆಜಿಎಫ್ ಸಿನಿಮಾದ ಮೂಲಕ ದೇಶ-ವಿದೇಶದಲ್ಲಿ ಖ್ಯಾತಿ ಪಡೆದಿರುವ ಯಶ್ ಅವರ ಮುಂಬರುವ ಟಾಕ್ಸಿಕ್ ಸಿನಿಮಾದ ಕುರಿತು ಜನರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಶೂಟಿಂಗ್ ಆರಂಭಕ್ಕೂ ಮುನ್ನ ನಟ ಯಶ್ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಯಶ್ ಅವರು ಧರ್ಮಸ್ಥಳ ಮಂಜುನಾಥೇಶ್ವರ ದೇಗುಲ, ಮಣ್ಣಿನ ಹರಕೆಯ ಕ್ಷೇತ್ರವೆಂದು ಜನಪ್ರಿಯತೆ ಪಡೆದಿರುವ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟಂಬ ಸಮೇತ ಭೇಟಿ ನೀಡಿದ್ದಾರೆ.
ನಟ ದರ್ಶನ್ ಅವರು ಪತ್ನಿ ರಾಧಿಕಾ ಪಂಡಿತ್, ಮಕ್ಕಳಾದ ಐರಾ ಮತ್ತು ಮಗ ಯರ್ಥರ್ವ್ ಜತೆ ದೇಗುಲಗಳಿಗೆ ಭೇಟಿ ನೀಡಿದ್ದಾರೆ. ಇವರೊಂದಿಗೆ ಟಾಕ್ಸಿಕ್ ಸಿನಿಮಾದ ವೆಂಟಕ್ ಕೂಡ ಇದ್ದಾರೆ. ಮೊದಲು ಸುರ್ಯ ದೇಗುಲಕ್ಕೆ ಭೇಟಿ ನೀಡಿದ ಯಶ್ ದಂಪತಿ ಬಳಿಕ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಯಶ್ ಅವರು ಮೊದಲು ಸುರ್ಯ ರುದ್ರ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಇದೇ ಸಮಯದಲ್ಲಿ ಇವರು ಪಂಚೆ ಉಟ್ಟು ಟ್ರೆಡಿಷನಲ್ ಲುಕ್‌ನಲ್ಲಿ ದೇವರ ದರ್ಶನ ಮಾಡಿದ್ದಾರೆ. ಪಂಚೆ ಉಟ್ಟು ಮಂಗಳೂರು ವಿಮಾನ ನಿಲ್ದಾಣದಿಂದ ಇವರು ಹೊರಬರುತ್ತಿರುವ ದೃಶ್ಯದ ವಿಡಿಯೋಗಳು ವೈರಲ್ ಆಗಿವೆ. ಶೂಟಿಂಗ್ ಶುರು ಮಾಡುವ ಮುನ್ನ ವಿವಿಧ ದೇಗುಲಗಳಿಗೆ ಯಶ್ ಭೇಟಿ ನೀಡುತ್ತಿದ್ದಾರೆ.
ಇದೇ ಆಗಸ್ಟ್ 8ರಿಂದ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ಟಾಕ್ಸಿಕ್ ಸಿನಿಮಾವನ್ನು ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾವನ್ನು 2025ರ ಬೇಸಿಗೆಯಲ್ಲಿ ಟಾಕ್ಸಿಕ್ ರಿಲೀಸ್ ಮಾಡುವ ಪ್ಲ್ಯಾನ್ ಅನ್ನು ಚಿತ್ರತಂಡ ಹಾಕಿಕೊಂಡಿದೆ. ಈ ಪ್ಯಾನ್ ಇಂಡಿಯಾ ಸಿನಿಮಾವು ನಿರೀಕ್ಷೆಯಂತೆ ಶೆಡ್ಯೂಲ್‌ನಲ್ಲಿ ಶೂಟಿಂಗ್ ನಡೆಸಿದರೆ ಮುಂದಿನ ವರ್ಷ ಯಶ್ ಅಭಿಮಾನಿಗಳಿಗೆ ಹಬ್ಬ ರೆಡಿಯಾಗಲಿದೆ. ಇದೀಗ ಬೆಂಗಳೂರಿನಲ್ಲಿ ಹಾಕಿರುವ ಬೃಹತ್ ಸೆಟ್‌ನಲ್ಲಿ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ.
ನಟ ಯಶ್ ಅವರು ಮೊದಲು ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಮುಂದಿನ ವರ್ಷ ಬಿಡುಗಡೆಯಾಗಲಿರುವ ಟಾಕ್ಸಿಕ್ ಸಿನಿಮಾದ ಶೂಟಿಂಗ್‌ಗಾಗಿ ಈ ವೀಕೆಂಡ್‌ನಿಂದ ಯಶ್ ಬಿಝಿಯಾಗಲಿದ್ದಾರೆ. ಯಶ್ ಹಿಂದಿಯ ರಾಮಾಯಣ ಸಿನಿಮಾದಲ್ಲಿ ರಾವಣನಾಗಿಯೂ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಬೇಕಿದೆ.