Leelavathi Death: ಕನ್ನಡ ಹಿರಿಯ ನಟಿ ಲೀಲಾವತಿ ನಿಧನ; ದೇವರ ಗುಡಿ ಸೇರಿದ ಅಭಿನೇತ್ರಿ
ಕನ್ನಡ ಸುದ್ದಿ  /  ಮನರಂಜನೆ  /  Leelavathi Death: ಕನ್ನಡ ಹಿರಿಯ ನಟಿ ಲೀಲಾವತಿ ನಿಧನ; ದೇವರ ಗುಡಿ ಸೇರಿದ ಅಭಿನೇತ್ರಿ

Leelavathi Death: ಕನ್ನಡ ಹಿರಿಯ ನಟಿ ಲೀಲಾವತಿ ನಿಧನ; ದೇವರ ಗುಡಿ ಸೇರಿದ ಅಭಿನೇತ್ರಿ

Kannada Actress Leelavathi: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಕನ್ನಡದ ಹಿರಿಯ ಚೇತನ ಇನ್ನಿಲ್ಲವಾಗಿದ್ದಾರೆ.

ಕನ್ನಡ ಹಿರಿಯ ನಟಿ ಲೀಲಾವತಿ ನಿಧನ; ದೇವರ ಗುಡಿ ಸೇರಿದ ಅಭಿನೇತ್ರಿ
ಕನ್ನಡ ಹಿರಿಯ ನಟಿ ಲೀಲಾವತಿ ನಿಧನ; ದೇವರ ಗುಡಿ ಸೇರಿದ ಅಭಿನೇತ್ರಿ

ಬೆಂಗಳೂರು: ಕನ್ನಡದಲ್ಲಿ 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಕಳೆದ ಹಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಇಂದು ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಬಳಿನ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ಬಂದಿದೆ. ದೇವರ ಗುಡಿ ಸಿನಿಮಾದಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಅಭಿನೇತ್ರಿ ಲೀಲಾವತಿ ಅವರು ದೇವರ ಪಾದ ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿರಿಯ ನಟಿ ಲೀಲಾವತಿ ಅವರು ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದರು. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲೂ ನಟಿಸಿದ್ದಾರೆ. ಇವರು ನಟಿಸಿದ ಚಿತ್ರಗಳ ಸಂಖ್ಯೆ 600 ದಾಟುತ್ತದೆ. ಕನ್ನಡದಲ್ಲಿಯೇ ನಾಲ್ಕುನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 1937ರಲ್ಲಿ ನಟಿ ಲೀಲಾವತಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದ್ದರು.

ಕನ್ನಡದ ಹಿರಿಯ ನಟಿ ಲೀಲಾವತಿ ಅವರು 1949ರಲ್ಲಿ ಶಂಕರ್ ನಾಗ್ ಅಭಿನಯದ ನಾಗಕನ್ನಿಕೆ ಸಿನಿಮಾದಲ್ಲಿ ಸಖಿಯ ಪಾತ್ರದ ಮೂಲಕ ಚಂದನವನ ಪ್ರವೇಶಿಸಿದ್ದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು, ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ 'ಭಕ್ತ ಪ್ರಹ್ಲಾದ'ದಲ್ಲಿ ಕೂಡ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದ್ದರು.

ಇವರ ಸಿನಿಮಾ ಜರ್ನಿ ಸುಮಾರು 1950ರ ಆಸುಪಾಸಿನಲ್ಲಿ ಆರಂಭವಾಗುತ್ತದೆ. 1958ರ ಬಳಿಕದ ಚಿತ್ರಗಳ ವಿವರ ಇಲ್ಲಿದೆ. ಭಕ್ತ ಪ್ರಹ್ಲಾದ, ಮಾಂಗಲ್ಯ ಯೋಗ, ರಾಜ ಮಲಯ ಸಿಂಹ, ಅಬ್ಬಾ ಆ ಹುಡುಗಿ, ಧರ್ಮ ವಿಜಯ, ದಶವತಾರ, ರಣಧೀರ ಕಂಠೀರವ, ರಾಣಿ ಹೊನ್ನಮ್ಮ, ಕೈವಾರ ಮಹಾತ್ಮೆ, ಕಣ್ತೆರೆದು ನೋಡು, ಕಿತ್ತೂರು ಚೆನ್ನಮ್ಮ, ಗಾಳಿ ಗೋಪುರ, ಕರುಣೆಯೇ ಕುಟುಂಬದ ಕಣ್ಣು, ಭೂದಾನ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ನಟಿಸಿದ ಇನ್ನಿತರ ಸಿನಿಮಾಗಳ ವಿವರ ಇಲ್ಲಿದೆ

Whats_app_banner