ಮನೆ ದೇವ್ರು, ಹಾಲುಂಡ ತವರು ಚಿತ್ರಗಳ ನಿರ್ಮಾಪಕರ ಪುತ್ರನೀಗ ಹೀರೋ; ಅಥರ್ವನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು
ಕನ್ನಡ ಸುದ್ದಿ  /  ಮನರಂಜನೆ  /  ಮನೆ ದೇವ್ರು, ಹಾಲುಂಡ ತವರು ಚಿತ್ರಗಳ ನಿರ್ಮಾಪಕರ ಪುತ್ರನೀಗ ಹೀರೋ; ಅಥರ್ವನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು

ಮನೆ ದೇವ್ರು, ಹಾಲುಂಡ ತವರು ಚಿತ್ರಗಳ ನಿರ್ಮಾಪಕರ ಪುತ್ರನೀಗ ಹೀರೋ; ಅಥರ್ವನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು

ಕನ್ನಡಕ್ಕೆ ಹತ್ತು ಹಲವು ಸೂಪರ್‌ ಹಿಟ್‌ ಚಿತ್ರಗಳನ್ನು ನೀಡಿದ ನಿರ್ಮಾಪಕ ವೈಜಾಕ್‌ ರಾಜು, ಇದೀಗ ತಮ್ಮ ಮಗನನ್ನು ಕನ್ನಡ ಚಿತ್ರರಂಗಕ್ಕೆ ಕರೆತಂದಿದ್ದಾರೆ. ಅಥರ್ವ ಹೆಸರಿನ ಸಿನಿಮಾ ನಾಲ್ಕು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ಮನೆ ದೇವ್ರು, ಹಾಲುಂಡ ತವರು ಚಿತ್ರಗಳ ನಿರ್ಮಾಪಕರ ಪುತ್ರನೀಗ ಹೀರೋ; ಅಥರ್ವನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು
ಮನೆ ದೇವ್ರು, ಹಾಲುಂಡ ತವರು ಚಿತ್ರಗಳ ನಿರ್ಮಾಪಕರ ಪುತ್ರನೀಗ ಹೀರೋ; ಅಥರ್ವನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು

Atharva Movie: ಕನ್ನಡ ಚಿತ್ರೋದ್ಯಮಕ್ಕೆ ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿದ ವೈಜಾಕ್‌ ರಾಜು ಇದೀಗ ಮತ್ತೆ ಕನ್ನಡಕ್ಕೆ ಆಗಮಿಸಿದ್ದಾರೆ. ಮನೆ ದೇವ್ರು, ಹಾಲುಂಡ ತವರು, ಕರುಳಿನ ಕೂಗು ಮುಂತಾದ ಯಶಸ್ವಿ ಚಿತ್ರಗಳನ್ನು ನೀಡಿದ್ದ ನಿರ್ಮಾಪಕ ವೈಜಾಕ್ ರಾಜು ಇದೀಗ ತಮ್ಮ ಪುತ್ರ ಕಾರ್ತಿಕ್ ರಾಜು ಅವರನ್ನು ಕನ್ನಡಕ್ಕೆ ಕರೆತಂದಿದ್ದಾರೆ. ಅಥರ್ವ ಶೀರ್ಷಿಕೆಯ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ ಕಾರ್ತಿಕ್‌. ವಿಶೇಷ ಏನೆಂದರೆ ಅಥರ್ವ ಸಿನಿಮಾ ಕನ್ನಡ ಸೇರಿ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಲಿದೆ.

ಮಹೇಶ್‌ ರೆಡ್ಡಿ ಎಂಬುವವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಮಾಹಿತಿ ನೀಡುವ ಅವರು, ಈಗಾಗಲೇ ಅನೇಕ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದೇನೆ. ನಿರ್ದೇಶಕನಾಗಿ ಇದು ನನ್ನ ಚೊಚ್ಚಲ ಚಿತ್ರ. ಕ್ಲೂಸ್ ಡಿಪಾರ್ಟ್ಮೆಂಟ್ ಎಂಬುದು ಪೊಲೀಸ್ ಡಿಪಾರ್ಟ್ಮೆಂಟ್ ವ್ಯಾಪ್ತಿಗೆ ಬರುತ್ತದೆ. ಈ ಕ್ಲೂಸ್ ಡಿಪಾರ್ಟ್ಮೆಂಟ್ ಬಳಸಿಕೊಂಡು ಹೆಚ್ಚಿನ ಸಿನಿಮಾಗಳು ಬಂದಿಲ್ಲ. ನಮ್ಮ ಚಿತ್ರದಲ್ಲಿ ಒಂದು ಕೊಲೆಯ ಸತ್ಯವನ್ನು ತಿಳಿಯಲು ಕ್ಲೂಸ್ ಡಿಪಾರ್ಟ್ಮೆಂಟ್ ಎಷ್ಟು ಮುಖ್ಯ ಎಂಬುದನ್ನು ತೋರಿಸಿದ್ದೇವೆ.‌ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ನೋಡಿ ಹಾರೈಸಿ ಎನ್ನುತ್ತಾರೆ ನಿರ್ದೇಶಕರು.

ನಮ್ಮ ತಂದೆ ವೈಜಾಕ್ ರಾಜು, ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ನಾನು ತೆಲುಗಿನಲ್ಲಿ ಕೆಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದೇನೆ. ಕನ್ನಡದಲ್ಲಿ ಇದು ಮೊದಲ ಚಿತ್ರ. ಕನ್ನಡ ಚಿತ್ರದಲ್ಲಿ ನಾಯಕನಾಗಿ ನಟಿಸಬೇಕೆಂಬ ನನ್ನ ಬಹುದಿನ ಕನಸು ಈಗ ಈಡೇರಿದೆ. ಇದಕ್ಕೂ ಮೊದಲು ನಾನು ಪುನೀತ್ ರಾಜಕುಮಾರ್ ಅವರ ವೀರ ಕನ್ನಡಿಗ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ ಎನ್ನುತ್ತಾರೆ ನಾಯಕ ಕಾರ್ತಿಕ್.‌

ಮುಂದುವರಿದು ಮಾತನಾಡುವ ಕಾರ್ತಿಕ್‌, ಅಥರ್ವ ಒಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ಮಹೇಶ್ ರೆಡ್ಡಿ ಈ ಚಿತ್ರದ ನಿರ್ದೇಶಕರು. ನುರಿತ ಕಲಾವಿದರು ಹಾಗೂ ತಂತ್ರಜ್ಞರು ಈ ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರೀಕರಣ ಮುಕ್ತಾಯವಾಗಿದೆ. ನವೆಂಬರ್‌ನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ ಎಂದು ಚಿತ್ರದ ನಾಯಕ ಕಾರ್ತಿಕ್ ರಾಜು ತಿಳಿಸಿದರು.

ಚಿತ್ರದಲ್ಲಿ ಪತ್ರಕರ್ತೆಯ ಪಾತ್ರ ನಿರ್ವಹಿಸಿರುವುದಾಗಿ ನಾಯಕಿ ಸಿಮ್ರಾನ್ ಹೇಳಿದರು. ನಿರ್ಮಾಪಕರಾದ ಸುಭಾಷ್ ನೂತಲಪಾಟಿ , ಹಿರಿಯ ನಿರ್ಮಾಪಕ ವೈಜಾಕ್ ರಾಜು ಹಾಗೂ ವಿತರಕ ಮಾರ್ಸ್ ಸುರೇಶ್ ಇತರರು ಭಾಗವಹಿಸಿದ್ದರು.

ಮನರಂಜನೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

Whats_app_banner