ಕನ್ನಡ ಸುದ್ದಿ  /  Entertainment  /  Sandalwood News Odisha Train Tragedy Kishore Reacts On Balasore Train Accident Kantara Actor On Railway Ministry Mnk

Actor Kishore: ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ ಅಪರಾಧಿಯನ್ನು ಕಂಡು ಹಿಡಿಯುತ್ತಂತೆ; ರೈಲು ದುರಂತದ ಬಗ್ಗೆ ನಟ ಕಿಶೋರ್‌ ಟೀಕೆ

ಬಹುಭಾಷಾ ನಟ ಕಿಶೋರ್‌ ಒಡಿಶಾ ರೈಲ್ವೆ ದುರಂತದ ಬಗ್ಗೆ ಕೇಂದ್ರದ ಸರ್ಕಾರವನ್ನು ಟೀಕಿಸಿದ್ದಾರೆ. ಅಪಘಾತಗಳನ್ನೂ ದುರಂತಗಳನ್ನೂ ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ ಎಂದಿದ್ದಾರೆ.

ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ ಅಪರಾಧಿಯನ್ನು ಕಂಡು ಹಿಡಿಯುತ್ತಂತೆ; ರೈಲು ದುರಂತದ ಬಗ್ಗೆ ನಟ ಕಿಶೋರ್‌ ಟೀಕೆ
ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ ಅಪರಾಧಿಯನ್ನು ಕಂಡು ಹಿಡಿಯುತ್ತಂತೆ; ರೈಲು ದುರಂತದ ಬಗ್ಗೆ ನಟ ಕಿಶೋರ್‌ ಟೀಕೆ

Actor Kishore: ಒಡಿಶಾ ರೈಲು ದುರಂತದ ಬಗ್ಗೆ ಇಡೀ ದೇಶ ಶೋಕದಲ್ಲಿದೆ. ಈ ಭೀಕರ ಅಪಘಾತಕ್ಕೆ 288ಕ್ಕೂ ಅಧಿಕ ಜೀವಗಳು ಪ್ರಾಣ ಕಳೆದುಕೊಂಡಿವೆ. ಈ ನಡುವೆ ಈ ಅವಘಡಕ್ಕೆ ಹೊಣೆ ಯಾರು? ಎಂಬ ಪ್ರಶ್ನೆಯೂ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯ ವಿಷಯವಾಗಿದೆ. ಕೇಂದ್ರದ ವಿರುದ್ಧ ಕೆಲವರು ಟೀಕೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ಆ ಪೈಕಿ ಬಹುಭಾಷಾ ನಟ, ಕನ್ನಡಿಗ ಕಿಶೋರ್‌ ಇದೀಗ ಕೇಂದ್ರ ನಡೆಯನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲೇ ಪತಿಯನ್ನು ಕಳೆದುಕೊಂಡು ಸಾಕಷ್ಟು ನೋವುಂಡ ಪುಟಾಣಿ ಏಜೆಂಟ್‌ 123 ಬಾಲನಟಿ ಬೇಬಿ ಇಂದಿರಾ ಈಗ ಹೇಗಿದ್ದಾರೆ

ಅಪಘಾತ ಸಂಭವಿಸಿದ ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ್ದ ಮೋದಿ ಕ್ಯಾಮರಾ ಮುಂದೆ ಕನ್ಣೀರು ಸುರಿಸುವ ನಾಟಕ ಮಾಡಿದ್ದಾರೆ ಎಂದಿರುವ ಕಿಶೋರ್‌, ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು, ‘ಕವಚ’ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ನೀಡಬಹುದಿತ್ತಲ್ಲ ಎಂದಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಕಿಶೋರ್‌ ಹೇಳಿದ್ದೇನು?

ಯಾರ ಮೇಲೆ ಕಠಿಣ ಕ್ರಮ ? ಯಾರು ಕಾರಣ?? ಇಷ್ಟು ಭೀಕರ ಸಾವು ನೋವು ತಡೆಗಟ್ಟಬಹುದಿತ್ತೇ? ರೈಲ್ವೆ ಮಂತ್ರಿ ಈಗ ಹೋಗಿ ನಿಂತು ಕ್ಯಾಮೆರಾ ಮುಂದೆ ಕಣ್ಣೀರು ಸುರಿಸುವ ನಾಟಕ ಬಿಟ್ಟು ಇಂದಿಗೂ ಖಾಲಿಯಿರುವ 3 ಲಕ್ಷಕ್ಕೂ ಹೆಚ್ಚು ರೈಲ್ವೆ ನೌಕರರನ್ನು 1500ಕ್ಕೂ ಹೆಚ್ಚು ರೈಲ್ವೆ ಸುರಕ್ಷತೆಗೆ ಬೇಕಾದ ಖಾಲಿಯಾಗೇ ಉಳಿದಿರುವ ಹುದ್ದೆಗಳನ್ನು ತುಂಬಿ ಹಳಿ ನಿರ್ವಹಣೆ ಸಮರ್ಪಕವಾಗಿಸಬಹುದಿತ್ತೇ?

ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು, ‘ಕವಚ’ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ಕೊಟ್ಟು ಎಲ್ಲೆಡೆ ಅಳವಡಿಸಬಹುದಿತ್ತೇ?

ಇದನ್ನೂ ಓದಿ: ಈ ಸುಂದರನ ಸನ್ಯಾಸಿ ಮಾಡಬಹುದೇ; ವೈರಲ್‌ ಹಾಡಿನ ವಿಶೇಷತೆ ನಿಮಗೆ ಗೊತ್ತೆ? ಇದನ್ನು ಹಾಡಿದವರು ಮಳವಳ್ಳಿ ಡಾಕ್ಟರ್!‌

ಹಾಗೆ ನೋಡಿದರೆ ಕಳೆದ 6-7 ವರ್ಷಗಳಲ್ಲಿ 1000 ಕ್ಕೂ ಹೆಚ್ಚು ರೈಲುಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರೂ, 2022ರ ಸಿಎಜಿ ರಿಪೋರ್ಟನ್ನು ಕಡೆಗಣಿಸಿ ಸುರಕ್ಷತೆಗಿಂತ ದೇಶದ ಸ್ವತ್ತನ್ನು ಮಾರಿ ದುಡ್ಡು ಮಾಡುವುದರಲ್ಲೇ ನಿರತವಾದ ಸರ್ಕಾರವೇ ಈ ದುರಂತಕ್ಕೆ ಕಾರಣವಲ್ಲವೇ??? ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ… ಎಂಥ ವಿಪರ್ಯಾಸ!

ಇಲ್ಲಿ ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ.. ನಮ್ಮ ಸರ್ಕಾರ…

ಮೂರ್ಖ ಸರ್ಕಾರದ, ನಾಲಾಯಕ್ಕು ಮಂತ್ರಿಗಳ, ಪ್ರಜೆಗಳೆಲ್ಲ ಬರೀ ಮತಗಳಂತೆ ಕಾಣುವ ಪ್ರಚಾರಿ ಪ್ರಧಾನಿಯ ಸಂಕುಚಿತ ದೃಷ್ಟಿಯನ್ನು ಮುಚ್ಚಿ ಹಾಕಲು ಹೋಗಿ, ಆಡಳಿತ ಪಕ್ಷ ಮತ್ತದರ ಬೂಟು ನೆಕ್ಕುವ ಮಾಧ್ಯಮಗಳು ಇಮೇಜ್ ಮ್ಯಾನೇಜ್ಮೆಂಟ್ ಮಾಡುತ್ತಾ ತಪ್ಪನ್ನೂ ಸರಿಯೆಂದು ಸಾಧಿಸ ಹೊರಟರೆ ಕಳೆದು ಕೊಂಡ ಪ್ರಾಣಗಳಿಗೆ ನೊಂದು ಜರ್ಜರಿತವಾದ ಕುಟುಂಬಗಳ ಕಣ್ಣೀರಿಗೆ ಅರ್ಥವಿಲ್ಲದೇ ಹೋದೀತು….

ಮಡಿದ ನೂರಾರು ಅಮಾಯಕರ ಜೀವಗಳಿಗೆ ಅಶ್ರುತರ್ಪಣ. ಇನ್ನಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ. ಅಪಘಾತಗಳನ್ನೂ ದುರಂತಗಳನ್ನೂ ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ ಎಂದಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ 3 ವರ್ಷಗಳು; ಯುವ ಸಾಮ್ರಾಟ್‌ ಕೊನೆಯ ಸಿನಿಮಾ ರಾಜಮಾರ್ತಾಂಡ ರಿಲೀಸ್‌ ಯಾವಾಗ?

ಮಹಿಳಾ ಕುಸ್ತಿ ಪಟುಗಳಿಗೆ ಕಿಶೋರ್ ಬೆಂಬಲ

ದೆಹಲಿಯಲ್ಲಿ ನಡೆಯುತ್ತಿರುವ ಕುಸ್ತಿ ಕ್ರೀಡಾಪಟುಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ನಟ ಕಿಶೋರ್‌ ಪ್ರತಿಕ್ರಿಯಿಸಿದ್ದರು. "ಅಂದು ನಮ್ಮ ಕುಸ್ತಿ ಪಟುಗಳು ಗೆದ್ದಾಗ ಭಾರತ ಗೆದ್ದದ್ದು ನಿಜವಾದರೆ, ಇಂದು ಅವರ ಮೇಲೆ ಅತ್ಯಾಚಾರವಾದಾಗ ಭಾರತದ ಮೇಲೆ ಅತ್ಯಾಚಾರವಾಗುತ್ತದೆ. ಇಂದು ಅವರು ಸೋತರೆ ಭಾರತ ಸೋಲುತ್ತದೆ. ದೇಶದ ಗೌರವ ಹೆಚ್ಚಾಗುವುದು ಬೇರೆ ದೇಶದಲ್ಲೂ ನಮ್ಮ ಹಣ ಸುರಿದು ಜನರನ್ನು ಬಾಡಿಗೆಗೆ ತಂದು ಮಾಡುವ ರಾಜಕೀಯ ರ್ಯಾಲಿಯ ನಾಟಕಗಳಿಂದಲ್ಲ. ಜೀವ ತೇಯ್ದು ಬೆವರು ಹರಿಸಿ ಈ ಪಟುಗಳು ತಂದ ಮೆಡಲ್ಲುಗಳಿಂದ" ಎಂದು ಕೇಂದ್ರ ಸರ್ಕಾರದ ನಡೆಯನ್ನು ನಟ ಕಿಶೋರ್‌ ಪ್ರಶ್ನಿಸಿದ್ದಾರೆ.

IPL_Entry_Point