ಅಕ್ಟೋಬರ್ 18ಕ್ಕೆ ತೆರೆಗೆ ಬರ್ತಿದೆ ಪ್ರಭು ಮುಂಡ್ಕೂರ್ ಮರ್ಫಿ ಸಿನಿಮಾ; ಚಿತ್ರತಂಡದಿಂದ ಮೊಗಾಚಿ ಹಾಡು ರಿಲೀಸ್
ಬಿಎಸ್‌ಪಿ ವರ್ಮಾ ನಿರ್ದೇಶನದಲ್ಲಿ ಪ್ರಭು ಮುಂಡ್ಕೂರ್ ನಟಿಸಿರುವ ಮರ್ಫಿ ಸಿನಿಮಾ ಮೊಗಾಚಿ ಹಾಡು ರಿಲೀಸ್ ಆಗಿದೆ. ಸಿನಿಮಾ ಅಕ್ಟೋಬರ್ 18 ರಂದು ರಿಲೀಸ್ ಆಗುತ್ತಿದೆ. ಸೋಮಣ್ಣ ಟಾಕೀಸ್ ಮತ್ತು ವರ್ಣಸಿಂಧು ಸ್ಟುಡಿಯೋಸ್ ಬ್ಯಾನರ್ ಅಡಿ ಮರ್ಫಿ ಸಿನಿಮಾವನ್ನು ರಾಮ್ ಕೋ ಸೋಮಣ್ಣ ಹಾಗೂ ಬಿಎಸ್‌ಪಿ ವರ್ಮಾ ನಿರ್ಮಾಣ ಮಾಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಈ ಸ್ಪರ್ಧೆ ಹೆಚ್ಚಾಗಿದೆ. ಹೊಸ ಹೊಸ ಸದಭಿರುಚಿಯ ಸಿನಿಮಾಗಳು ಚಿತ್ರಂಗಕ್ಕೆ ಬರುತ್ತಿವೆ. ಹೊಸಬರ ತಂಡದೊಂದಿಗೆ ಚಿತ್ರರಂಗ ಹೊಸ ದಿಕ್ಕಿಗೆ ಹೊರಳಿದೆ. ಹೊಸ ಹೊಸ ಪ್ರಯತ್ನಗಳು ನಡೆಯುತ್ತಿದೆ. ಅದರ ಭಾಗವಾಗಿ ತಯಾರಾಗಿರುವ ಮರ್ಫಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 18ಕ್ಕೆ ತೆರೆಗೆ ಬರ್ತಿರುವ ಈ ಚಿತ್ರದ ಡ್ಯಾನ್ಸಿಂಗ್ ನಂಬರ್ ಇತ್ತೀಚೆಗೆ ರಿಲೀಸ್ ಆಗಿದೆ.
ಬಿಎಸ್‌ಪಿ ವರ್ಮಾ ನಿರ್ದೇಶನದ ಸಿನಿಮಾ
ಧನಂಜಯ್ ರಂಜನ್ ಸಾಹಿತ್ಯ ಬರೆದಿರುವ ಮೊಗಾಚಿ ಎಂಬ ಹಾಡಿಗೆ ಅರ್ಜುನ್ ಜನ್ಯ ಟ್ಯೂನ್ ಹಾಕಿದ್ದಾರೆ. ಗೋವಾದ ಪೋರ್ಚುಗೀಸ್ ಮತ್ತು ಕೊಂಕಣಿ ಸಂಸ್ಕೃತಿಯನ್ನು ಬಿಂಬಿಸಿರುವ ಹಾಡಿಗೆ ರಜತ್ ಹೆಗ್ಡೆ ಮತ್ತು ನಾಡಿಯಾ ರೆಬೆಲೊ ಧ್ವನಿಯಾಗಿದ್ದಾರೆ. ಮಾಧುರಿ ಪರಶುರಾಮ್ ಕೊರಿಯೋಗ್ರಫಿ ಮಾಡಿದ್ದು ಹಾಡು ಚೆನ್ನಾಗಿ ಮೂಡಿಬಂದಿದೆ. ಮರ್ಫಿ ಚಿತ್ರಕ್ಕೆ ಬಿಎಸ್‌ಪಿ ವರ್ಮಾ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪ್ರಭು ಮುಂಡ್ಕೂರ್ ಹಾಗೂ ವರ್ಮಾ ಜೊತೆಗೂಡಿ ಚಿತ್ರಕಥೆ ಬರೆದಿದ್ದಾರೆ. ರೊಮ್ಯಾಂಡಿಕ್ ಡ್ರಾಮಾ ಎಳೆಯ ಮರ್ಫಿ ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಚಿತ್ರದಲ್ಲಿ ಪ್ರಭು ಮುಂಡ್ಕೂರ್, ರೋಶಿನಿ ಪ್ರಕಾಶ್ , ಇಳಾ ವೀರಮಲ್ಲ, ದತ್ತಣ್ಣ, ಅಶ್ವಿನಿ ರಾವ್ ಪಲ್ಲಕ್ಕಿ, ಮಹಾಂತೇಶ್ ಹೀರೇಮಠ್, ರಾಮಪ್ರಸಾದ್ ಬಾಣಾವರ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ. ನವೀನ್ ರೆಡ್ಡಿ, ಪ್ರಭು, ವರ್ಮಾ ಸಂಭಾಷಣೆ ಬರೆದಿದ್ದು, ಮಹೇಶ ತೊಗಟ ಸಂಕಲನ, ಆದರ್ಶ ಆರ್ ಕ್ಯಾಮೆರಾ ಕೆಲಸ ಮಾಡಿದ್ದಾರೆ.
ಅಕ್ಟೋಬರ್ 18 ರಂದು ತೆರೆ ಕಾಣುತ್ತಿರುವ ಮರ್ಫಿ
ಸೋಮಣ್ಣ ಟಾಕೀಸ್ ಮತ್ತು ವರ್ಣಸಿಂಧು ಸ್ಟುಡಿಯೋಸ್ ಬ್ಯಾನರ್ ಅಡಿ ಮರ್ಫಿ ಸಿನಿಮಾವನ್ನು ರಾಮ್ ಕೋ ಸೋಮಣ್ಣ ಹಾಗೂ ಬಿಎಸ್‌ಪಿ ವರ್ಮಾ ನಿರ್ಮಾಣ ಮಾಡಿದ್ದಾರೆ. ಅಕ್ಟೋಬರ್ 18ಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಪ್ರಭು ಮುಂಡ್ಕೂರ್, ಇದಕ್ಕೂ ಮುನ್ನ ರಾಂಚಿ, ಛೂ ಮಂತರ್, ಒಮ್ಮೆ ನಿಶ್ಯಬ್ದ ಒಮ್ಮೆ ಯುದ್ದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರತಂಡ ಚಿತ್ರದ ಟೀಸರ್ ಬಿಡುಗಡೆಗೊಳಿಸಿತ್ತು. ಟೀಸರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.