ಕನ್ನಡ ಸುದ್ದಿ  /  ಮನರಂಜನೆ  /  ಪ್ರಜ್ವಲ್‌ ದೇವರಾಜ್‌ ಬರ್ತ್‌ಡೇಗೆ ರಾಕ್ಷಸ ಸಿನಿಮಾ ಹೊಸ ಪೋಸ್ಟರ್‌; ಹಾರರ್‌ ಜತೆಗೆ ಟೈಂ ಲೂಪ್ ಪರಿಕಲ್ಪನೆಯೇ ಇಲ್ಲಿ ಹೈಲೈಟ್

ಪ್ರಜ್ವಲ್‌ ದೇವರಾಜ್‌ ಬರ್ತ್‌ಡೇಗೆ ರಾಕ್ಷಸ ಸಿನಿಮಾ ಹೊಸ ಪೋಸ್ಟರ್‌; ಹಾರರ್‌ ಜತೆಗೆ ಟೈಂ ಲೂಪ್ ಪರಿಕಲ್ಪನೆಯೇ ಇಲ್ಲಿ ಹೈಲೈಟ್

ನಟ ಪ್ರಜ್ವಲ್‌ ದೇವರಾಜ್‌ ಬರ್ತ್‌ಡೇ ಪ್ರಯುಕ್ತ ಹೊಸ ಸಿನಿಮಾಗಳಿಂದ ತರಹೇವಾರಿ ಅಪ್‌ಡೇಟ್‌ಗಳು ಹೊರಬಿದ್ದಿವೆ. ಆ ಪೈಕಿ ಈಗಾಗಲೇ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡು ಬಿಡುಗಡೆಗೆ ರೆಡಿಯಾಗಿರುವ ರಾಕ್ಷಸ ಸಿನಿಮಾದಿಂದಲೂ ಹೊಸ ಲುಕ್‌ ರಿಲೀಸ್‌ ಆಗಿದೆ.

ಪ್ರಜ್ವಲ್‌ ದೇವರಾಜ್‌ ಬರ್ತ್‌ಡೇಗೆ ರಾಕ್ಷಸ ಸಿನಿಮಾ ಹೊಸ ಪೋಸ್ಟರ್‌; ಹಾರರ್‌ ಜತೆಗೆ ಟೈಂ ಲೂಪ್ ಪರಿಕಲ್ಪನೆಯೇ ಇಲ್ಲಿ ಹೈಲೈಟ್
ಪ್ರಜ್ವಲ್‌ ದೇವರಾಜ್‌ ಬರ್ತ್‌ಡೇಗೆ ರಾಕ್ಷಸ ಸಿನಿಮಾ ಹೊಸ ಪೋಸ್ಟರ್‌; ಹಾರರ್‌ ಜತೆಗೆ ಟೈಂ ಲೂಪ್ ಪರಿಕಲ್ಪನೆಯೇ ಇಲ್ಲಿ ಹೈಲೈಟ್

Prajwal Devaraj Birthday: ಇತ್ತೀಚಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ ವಿಭಿನ್ನ ರೀತಿಯ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಮುಂದಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಹಾರರ್ ಸಿನಿಮಾದಲ್ಲಿ ಕಾಣಿಸಿಕೊಳ್ತದ್ದಾರೆ. ಹಾರರ್ ಸಿನಿಮಾ ಮೂಲಕವೇ ಪ್ರಖ್ಯಾತಿ ಗಳಿಸಿರುವ ನಿರ್ದೇಶಕ ಲೋಹಿತ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ರಾಕ್ಷಸ ಸಿನಿಮಾ ಮೂಲಕ ಪ್ರಜ್ವಲ್ ಹಾಗೂ ಲೋಹಿತ್ ಹೊಸ ದಾಖಲೆ ಬರೆಯಲು ಸಿದ್ದರಾಗಿದ್ದಾರೆ. ಹೌದು ಇದೇ ಮೊದಲ ಬಾರಿಗೆ ವರ್ಲ್ಡ್ ಸಿನಿಮಾದಲ್ಲಿ ಹಾರರ್ ಟೈಂ ಲೂಪ್ ವರ್ಷನ್ ಟ್ರೈ ಮಾಡಿದ್ದಾರೆ ನಿರ್ದೇಶಕ ಲೋಹಿತ್.

ರಾಮೋಜಿ ಸ್ಟುಡಿಯೋದಲ್ಲಿ 55 ದಿನಗಳ ಶೂಟಿಂಗ್‌

ಶಾನ್ವಿ ಎಂಟರ್ಪ್ರೈಸಸ್ ಅಡಿಯಲ್ಲಿ ಪ್ರದೀಪ್ ಮಹೀಶಿ ಅರ್ಪಿಸುತ್ತಿರುವ ರಾಕ್ಷಸ ಚಿತ್ರವನ್ನು ದೀಪು ಬಿ ಎಸ್ ಮತ್ತು ನವೀನ್ ಗೌಡ ಹಾಗೂ ಮಾನಸ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ, ಜೇಬಿನ್ ಪಿ ಜೋಕಬ್ ಕ್ಯಾಮೆರಾ ವರ್ಕ್ ಸಿನಿಮಾಕ್ಕಿದೆ. ಸುಮಾರು 55 ದಿನಗಳ ಕಾಲ ರಾಕ್ಷಸ ಸಿನಿಮಾ ಚಿತ್ರೀಕರಣ ಮಾಡಲಾಗಿದ್ದು, ಸಂಪೂರ್ಣ ಸಿನಿಮಾ ಚಿತ್ರೀಕರಣ ರಾಮೋಜಿ ರಾವ್ ಫಿಲ್ಮಂ ಸಿಟಿಯಲ್ಲಿ ನಡೆದಿರುವುದು ವಿಶೇಷ.

ಟ್ರೆಂಡಿಂಗ್​ ಸುದ್ದಿ

ಪ್ರಜ್ವಲ್ ಜೊತೆಯಾಗಿ ಅರುಣ್ ರಾಥೋಡ್, ಶ್ರೀಧರ್, ಗೌತಮ್, ಸೋಮಶೇಖರ್, ವಿಹಾನ್ ಕೃಷ್ಣ ಜಯಂತ್ ಇನ್ನು ಅನೇಕರು ಅಭಿನಯಿಸಿದ್ದಾರೆ. ಸದ್ಯ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಿದ್ದವಾಗಿರೋ ರಾಕ್ಷಸ ಸಿನಿಮಾ. ಪ್ರಜ್ವಲ್ ಹುಟ್ಟುಹಬ್ಬದ ವಿಶೇಷವಾಗಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಸಿನಿಮಾತಂಡ ಚಿತ್ರದ ಪ್ರಚಾರದ ಕೆಲಸ ಶುರು ಮಾಡಿದೆ. ಇಷ್ಟು ದಿನಗಳ ಕಾಲ ಕಮರ್ಷಿಯಲ್ ಚಿತ್ರಗಳಲ್ಲಿ ಕಾಣಿಸಿಕೊಳ್ತಿದ್ದ ಪ್ರಜ್ವಲ್ ಇದೇ ಮೊದಲ ಬಾರಿಗೆ ವಿಭಿನ್ನವಾಗಿ ಹಾರರ್ ಲುಕ್ ನಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.

ಬರ್ತ್‌ಡೇಗೆ ಮಾಫಿಯಾ ಟೀಸರ್ ಸಹ ಬಂತು

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶನದ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ಮಾಫಿಯಾ ಚಿತ್ರತಂಡದಿಂದ ಟೀಸರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ ಮಾಫಿಯಾ ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ತಿಂಗಳಲ್ಲಿ ತೆರೆಗೆ ಬರಲಿದೆ.

ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಬಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.