Aadujeevitham: ಪೃಥ್ವಿರಾಜ್ ಸುಕುಮಾರನ್ ಅಭಿನಯದ ಆಡುಜೀವಿತಂ ಸಿನಿಮಾ ಮಾ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ; ಹೊಂಬಾಳೆ ಫಿಲಂಸ್‌ ಸಾಥ್‌-sandalwood news prithviraj sukumaran aadujeevitham release date march 28 karnataka hombale films distribution pcp ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  Aadujeevitham: ಪೃಥ್ವಿರಾಜ್ ಸುಕುಮಾರನ್ ಅಭಿನಯದ ಆಡುಜೀವಿತಂ ಸಿನಿಮಾ ಮಾ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ; ಹೊಂಬಾಳೆ ಫಿಲಂಸ್‌ ಸಾಥ್‌

Aadujeevitham: ಪೃಥ್ವಿರಾಜ್ ಸುಕುಮಾರನ್ ಅಭಿನಯದ ಆಡುಜೀವಿತಂ ಸಿನಿಮಾ ಮಾ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ; ಹೊಂಬಾಳೆ ಫಿಲಂಸ್‌ ಸಾಥ್‌

Aadujeevitham Movie: ಆಡುಜೀವಿತಂ"(ಗೋಟ್ ಲೈಫ್) ಸಿನಿಮಾ ಇದೇ ಮಾರ್ಚ್‌ 28ರಂದು ಬಿಡುಗಡೆಯಾಗಲಿದೆ. ಇದು ಸಲಾರ್‌ ನಟ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಚಿತ್ರ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್‌ ವಿತರಣೆ ಮಾಡಲಿದೆ.

ಪೃಥ್ವಿರಾಜ್ ಸುಕುಮಾರನ್ ಅಭಿನಯದ ಆಡುಜೀವಿತಂ ಸಿನಿಮಾ ಮಾ 28ರಂದು ಬಿಡುಗಡೆ
ಪೃಥ್ವಿರಾಜ್ ಸುಕುಮಾರನ್ ಅಭಿನಯದ ಆಡುಜೀವಿತಂ ಸಿನಿಮಾ ಮಾ 28ರಂದು ಬಿಡುಗಡೆ

ಬೆಂಗಳೂರು: ಈ ವಾರ ಕನ್ನಡದಲ್ಲಿ ಯುವ ಸೇರಿದಂತೆ ಭಾರತದಲ್ಲಿ ಹಲವು ಬಹುನಿರೀಕ್ಷಿತ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಮಲಯಾಳಂ ನಟ ಪೃಥ್ವಿರಾಜ್‌ ಸುಕುಮಾರನ್‌ ನಟನೆಯ ಆಡುಜೀವಿತಂ ಸಿನಿಮಾವೂ ಈ ವಾರ ರಿಲೀಸ್‌ ಆಗುತ್ತಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ ಸಿನಿಮಾವಿದು.

ಆಡುಜೀವಿತಂ ಸಿನಿಮಾ ಬಿಡುಗಡೆ ದಿನಾಂಕ

"ಆಡುಜೀವಿತಂ"(ಗೋಟ್ ಲೈಫ್) ಸಿನಿಮಾ ಇದೇ ಮಾರ್ಚ್ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾದ ಕರ್ನಾಟಕದ ವಿತರಣೆಯ ಹಕ್ಕನ್ನು ಹೊಂಬಾಳೆ ಫಿಲಂಸ್ ಪಡೆದುಕೊಂಡಿದೆ. ಹೊಂಬಾಳೆ ಫಿಲಂಸ್ ವಿಜಯ್ ಕಿರಗಂದೂರ್ ಅವರು ಕರ್ನಾಟಕದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡಿ ವಿತರಣೆ ಮಾಡಲಿದ್ದಾರೆ.

ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರು ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಅವರು ಆತ್ಮೀಯ ಸ್ನೇಹಿತರು. ಹೊಂಬಾಳೆ ಫಿಲಂಸ್ ನಿರ್ಮಿಸಿರುವ "ಕೆ.ಜಿ.ಎಫ್", "ಕಾಂತಾರ " ದಂತಹ ಸಿನಿಮಾಗಳನ್ನು ಕೇರಳದಲ್ಲಿ ಪೃಥ್ವಿರಾಜ್ ಸುಕುಮಾರನ್ ರಿಲೀಸ್‌ ಮಾಡಿದ್ದರು. ಈಗ ಪೃಥ್ವಿರಾಜ್ ಅವರ ನಟನೆಯ, ವಿಭಿನ್ನ ಕಥಾಹಂದರ ಹೊಂದಿರುವ "ಆಡುಜೀವಿತಂ" ಚಿತ್ರವನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡುತ್ತಿದೆ. ಈ ಚಿತ್ರದ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.

"ವಿಜಯ್ ಕಿರಗಂದೂರ್ ಅವರು ಆತ್ಮೀಯ ಸ್ನೇಹಿತರು ಎಂದು ಮಾತು ಆರಂಭಿಸಿದ ನಟ ಪೃಥ್ವಿರಾಜ್, ನಮ್ಮ "ಆಡುಜೀವಿತಂ" ಚಿತ್ರವನ್ನು ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ, "ಕೆಜಿಎಫ್", "ಕಾಂತಾರ" ಮುಂತಾದ ಸಿನಿಮಾ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ಗೋಟ್‌ ಲೈಫ್‌ ಸಿನಿಮಾ ಬಿಡುಗಡೆಯಾಗುತ್ತಿರುವುದು ತುಂಬಾ ಸಂತೋಷವಾಗಿದೆ. ಬ್ಲೆಸ್ಸಿ ಅವರು "ಗೋಟ್ ಲೈಫ್" ಹೆಸರಿನ ಸಿನಿಮಾ ಮಾಡಬೇಕೆಂದುಕೊಂಡಿದ್ದು 2008 ರ ಇಸವಿಲ್ಲಿ. ಈ ಸಿನಿಮಾದ ಶೂಟಿಂಗ್ಚಿ‌ ಆರಂಭಗೊಂಡಿರುವುದು 2018 ರ ಸಮಯದಲ್ಲಿ. ಈ ಚಿತ್ರಕ್ಕಾಗಿ ಬರೋಬ್ಬರಿ 16 ವರ್ಷಗಳ ಪರಿಶ್ರಮವಿದೆ" ಎಂದು ನಟ ಪೃಥ್ವಿರಾಜ್‌ ಮಾಹಿತಿ ನೀಡಿದ್ದಾರೆ.

"ನಾನು ಈ ಚಿತ್ರಕ್ಕಾಗಿ 31 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಇದು ಬೆನ್ಯಾಮಿನ್ ಅವರು ಬರೆದಿರುವ "ಆಡುಜೀವಿತಂ" ಕಾದಂಬರಿ ಆಧಾರಿತ ಚಿತ್ರ. ಈ ಜನಪ್ರಿಯ ಕಾದಂಬರಿ ಈವರೆಗೂ 251 ಬಾರಿ ಮುದ್ರಣವಾಗಿದೆ. ನಜೀಬ್ ಎಂಬುವವರ ಜೀವನದ ನೈಜ ಕಥೆ ಆಧರಿಸಿದೆ. ಅಮಲಾ ಪೌಲ್, ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಸಂಗೀತ ನೀಡಿದ್ದಾರೆ" ಎಂದು ಪೃಥ್ವಿರಾಜ್‌ ಸುಕುಮಾರನ್‌ ಹೇಳಿದ್ದಾರೆ.

ಕನ್ನಡದಲ್ಲೂ ಆಡುಜೀವಿತಂ ಬಿಡುಗಡೆ

ಅಡವಿಜೀವಿತಂ ಸಿನಿಮಾವು ಮಾರ್ಚ್ 28 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ತಪ್ಪದೇ ಈ ಸಿನಿಮಾವನ್ನು ಎಲ್ಲರೂ ನೋಡಿ ಎಂದರು ನಿರ್ದೇಶಕ ಬ್ಲೆಸ್ಸಿ. ಹಾಲಿವುಡ್‌ನ ಜನಪ್ರಿಯ ನಟ ಜಿಮ್ಮಿ ಜೀನ್ ಲೂಯಿಸ್ ಸಹ ಈ ಸಿನಿಮದಲ್ಲಿ ನಟಿಸಿದ್ದಾರೆ.

mysore-dasara_Entry_Point