ಕನ್ನಡ ಸುದ್ದಿ  /  Entertainment  /  Sandalwood News Purushothamana Prasanga Movie Trailer Released By Sandalwood Adhyaksha Sharan Mnk

ಪುರುಷೋತ್ತಮನ‌ ಪ್ರಸಂಗ ಚಿತ್ರಕ್ಕೆ ಸಾಥ್‌ ನೀಡಿದ ಸ್ಯಾಂಡಲ್‌ವುಡ್‌ ಅಧ್ಯಕ್ಷ; ಟ್ರೇಲರ್‌ ರಿಲೀಸ್‌ ಮಾಡಿದ ಶರಣ್‌

ದುಬೈಗೆ ಹೋಗಲು ಪುರುಷೋತ್ತಮ ಏನೆಲ್ಲಾ ಹರಸಾಹಸ ಪಡ್ತಾನೆ ಎಂಬುದನ್ನು ನಿರ್ದೇಶಕರು ಪುರುಷೋತ್ತಮನ ಪ್ರಸಂಗ ಸಿನಿಮಾದಲ್ಲಿ ಹಾಸ್ಯದ ಮೂಲಕ ತೋರಿಸಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದ್ದು, ನಟ ಶರಣ್‌ ಟ್ರೇಲರ್‌ ಬಿಡುಗಡೆ ಮಾಡಿ ತಂಡಕ್ಕೆ ಶುಭ ಕೋರಿದ್ದಾರೆ.

ಪುರುಷೋತ್ತಮನ‌ ಪ್ರಸಂಗ ಚಿತ್ರಕ್ಕೆ ಸಾಥ್‌ ನೀಡಿದ ಸ್ಯಾಂಡಲ್‌ವುಡ್‌ ಅಧ್ಯಕ್ಷ; ಟ್ರೇಲರ್‌ ರಿಲೀಸ್‌ ಮಾಡಿದ ಶರಣ್‌
ಪುರುಷೋತ್ತಮನ‌ ಪ್ರಸಂಗ ಚಿತ್ರಕ್ಕೆ ಸಾಥ್‌ ನೀಡಿದ ಸ್ಯಾಂಡಲ್‌ವುಡ್‌ ಅಧ್ಯಕ್ಷ; ಟ್ರೇಲರ್‌ ರಿಲೀಸ್‌ ಮಾಡಿದ ಶರಣ್‌

Purushothamana Prasanga: ಕನ್ನಡದಲ್ಲೀಗ ಹೊಸಬರ ಬಗೆಬಗೆ ಹೆಸರಿನ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಆ ಪೈಕಿ ಇನ್ನೇನು ಶೀಘ್ರದಲ್ಲಿ ಪುರುಷೋತ್ತಮನ ಪ್ರಸಂಗ ಸಿನಿಮಾ ಸಹ ರಿಲೀಸ್‌ಗೆ ರೆಡಿಯಾಗುತ್ತಿದೆ. ಅದರಂತೆ ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ನಟ ಶರಣ್‌ ಈ ಚಿತ್ರದ ಟ್ರೇಲರ್‌ ರಿಲೀಸಗ ಮಾಡಿ ಶುಭ ಕೋರಿದ್ದಾರೆ. ರಾಷ್ಟ್ರಕೂಟ ಪಿಕ್ಚರ್ಸ್ ಬ್ಯಾನರ್‌ನಲ್ಲಿ ವಿ ರವಿಕುಮಾರ್ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿಬಂದಿದೆ. ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಪುರುಷೋತ್ತಮನ ಪ್ರಸಂಗ ಶೀರ್ಷಿಕೆಯೇ ಮನ ಮುಟ್ಟುವಂತಿದೆ ಎಂದು ಮಾತನಾಡಿದ ನಟ ಶರಣ್, ಪುರುಷೋತ್ತಮ ಎಂದರೆ ರಾಮ. ಆ ರಾಮನ ಹೆಸರಿನಲ್ಲಿ ಬರುತ್ತಿರುವ ಈ ಚಿತ್ರ ಖಂಡಿತವಾಗಿಯೂ ಗೆಲ್ಲುತ್ತದೆ. ಇನ್ನು ಟ್ರೇಲರ್ ನೋಡಿದಾಗ ಅಜಯ್ ಅವರು ನಾಯಕನಾಗಿ ನಟಿಸಿರುವ ಮೊದಲ ಚಿತ್ರ ಅನಿಸುವುದಿಲ್ಲ.‌ ಅಷ್ಟು ಚೆನ್ನಾಗಿ ಅಜಯ್ ಅಭಿನಯಿಸಿದ್ದಾರೆ. ನಾನು ಟ್ರೇಲರ್‌ಗೆ ಧ್ವನಿ ನೀಡಿದ್ದೇನೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸುತ್ತೇನೆ ಎಂದರು.

ಇದೊಂದು ಉತ್ತಮ ಹಾಸ್ಯ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ. ನಮ್ಮ ತಂದೆ ದೇವದಾಸ್ ಕಾಪಿಕಾಡ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಮೊದಲ ಕನ್ನಡ ಚಿತ್ರವಿದು. ನಾನು ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದರು ಅರ್ಜುನ್ ಕಾಪಿಕಾಡ್.

ನಾನು ಈ ಚಿತ್ರದಲ್ಲಿ ಪುರುಷೋತ್ತಮನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ದುಬೈಗೆ ಹೋಗಲು ಪುರುಷೋತ್ತಮ ಏನೆಲ್ಲಾ ಹರಸಾಹಸ ಪಡ್ತಾನೆ ಎಂಬುದನ್ನು ನಿರ್ದೇಶಕರು ಈ ಚಿತ್ರದಲ್ಲಿ ಹಾಸ್ಯದ ಮೂಲಕ ತೋರಿಸಿದ್ದಾರೆ. ನನಗೆ ಮೊದಲಿನಿಂದಲೂ ರಂಗಭೂಮಿಯ ನಂಟು. ಟೊರಾಂಟೊ ಯೂನಿವರ್ಸಿಟಿಯಲ್ಲಿ ನಟನೆ ಕುರಿತು ಅಭ್ಯಾಸ ಮಾಡಿದ್ದೇನೆ. ನಾಯಕನಾಗಿ ಮೊದಲ ಚಿತ್ರ ಎಂದು ನಾಯಕ ಅಜಯ್ ತಿಳಿಸಿದರು.

ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಶರಣ್ ಅವರಿಗೆ ಧನ್ಯವಾದ. ಪರಿಶುದ್ಧ ಮನೋರಂಜನೆಯ ಈ ಚಿತ್ರ ಮಾರ್ಚ್ 1ರಂದು ತೆರೆಗೆ ಬರುತ್ತಿದೆ‌. ದುಬೈ, ಕತಾರ್‌ನಲ್ಲೂ ಬಿಡುಗಡೆ ಮಾಡುವ ಯೋಜನೆ ಇದೆ ಎಂದರು ಸಹ ನಿರ್ಮಾಪಕ ಶಂಶುದ್ದೀನ್. ನಿರ್ಮಾಪಕ ರವಿಕುಮಾರ್ ಹಾಗೂ ನಾಯಕಿ ರಿಷಿಕಾ ನಾಯ್ಕ್ ಚಿತ್ರದ ಕುರಿತು ಮಾತನಾಡಿದರು.

IPL_Entry_Point