ಕನ್ನಡ ಸುದ್ದಿ  /  ಮನರಂಜನೆ  /  ರಾಜವರ್ಧನ್‌ ನಟನೆಯ ಹಿರಣ್ಯ ಟ್ರೇಲರ್ ರಿಲೀಸ್‌; ಗೆಳೆಯನ ಚಿತ್ರಕ್ಕೆ ಸಾಥ್ ಕೊಟ್ಟ ಡಾಲಿ ಧನಂಜಯ್

ರಾಜವರ್ಧನ್‌ ನಟನೆಯ ಹಿರಣ್ಯ ಟ್ರೇಲರ್ ರಿಲೀಸ್‌; ಗೆಳೆಯನ ಚಿತ್ರಕ್ಕೆ ಸಾಥ್ ಕೊಟ್ಟ ಡಾಲಿ ಧನಂಜಯ್

ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್‌ ನಾಯಕನಾಗಿ ನಟಿಸಿರುವ ಹಿರಣ್ಯ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅದರಂತೆ ಈಗ ಟ್ರೇಲರ್‌ ಮೂಲಕ ಆಗಮಿಸಿದ್ದು, ಸ್ನೇಹಿತನ ಚಿತ್ರಕ್ಕೆ ನಟ ಡಾಲಿ ಧನಂಜಯ್‌ ಸಾಥ್‌ ನೀಡಿದ್ದಾರೆ.

ರಾಜವರ್ಧನ್‌ ನಟನೆಯ ಹಿರಣ್ಯ ಟ್ರೇಲರ್ ರಿಲೀಸ್‌; ಗೆಳೆಯನ ಚಿತ್ರಕ್ಕೆ ಸಾಥ್ ಕೊಟ್ಟ ಡಾಲಿ ಧನಂಜಯ್, ರಾಗಿಣಿ ದ್ವಿವೇದಿ
ರಾಜವರ್ಧನ್‌ ನಟನೆಯ ಹಿರಣ್ಯ ಟ್ರೇಲರ್ ರಿಲೀಸ್‌; ಗೆಳೆಯನ ಚಿತ್ರಕ್ಕೆ ಸಾಥ್ ಕೊಟ್ಟ ಡಾಲಿ ಧನಂಜಯ್, ರಾಗಿಣಿ ದ್ವಿವೇದಿ

Hiranya Trailer: ಟೀಸರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಹಿರಣ್ಯ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಡಾಲಿ ಧನಂಜಯ್, ನಟಿ ರಾಗಿಣಿ ದ್ವಿವೇದಿ ವಿಶೇಷ ಅತಿಥಿಯಾಗಿ ಭಾಗಿಯಾಗಿ ನಾಯಕ ರಾಜವರ್ಧನ್ ಹೊಸ ಪ್ರಯತ್ನಕ್ಕೆ ಬೆಂಬಲ ನೀಡಿದರು. ಈ ವೇಳೆ ಇಡೀ ಹಿರಣ್ಯ ತಂಡ ಭಾಗಿಯಾಗಿತ್ತು.

ಸ್ನೇಹಿತನ ಬಗ್ಗೆ ಡಾಲಿ ಮಾತು..

ಹಿರಣ್ಯ ಹಾಗೂ ರಾಜು ಇಡೀ ತಂಡಕ್ಕೆ ಆಲ್ ದಿ ಬೆಸ್ಟ್.. ರಾಜವರ್ಧನ್ ನನಗೆ 10 ವರ್ಷದಿಂದ ಪರಿಚಯ. 2013 ಅಥವಾ 2012 ರಲ್ಲಿ ಇಬ್ಬರು ಸಿನಿಮಾವೊಂದಕ್ಕೆ ಫೋಟೋಶೂಟ್ ಮಾಡಿಸಿದ್ದೇವು. ಆದರೆ ಅದು ಸಿನಿಮಾವಾಗಲಿಲ್ಲ. ಜೆಪಿ ನಗರ, ಜಯನಗರಕ್ಕೆ ಬಂದಾಗಲೆಲ್ಲಾ ಸಿಗುತ್ತಾರೆ. ಜರ್ನಿ ನೆನಪು ಮಾಡಿಕೊಂಡಾಗ ಅವತ್ತಿನಿಂದ ಇವತ್ತಿನವರೆಗೂ ನಟನಾಗಿ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾನೆ. ಒಳ್ಳೆ ಬರವಣಿಗೆ, ಸ್ಕ್ರೀಪ್ಟ್, ನಿರ್ದೇಶಕರು, ಅದನ್ನು ಅಷ್ಟೇ ಚೆನ್ನಾಗಿ ಪ್ರೀತಿಸುವ ನಿರ್ಮಾಪಕರು ಇದ್ದಾಗ ಮಾತ್ರ ಒಳ್ಳೆ ಸಿನಿಮಾವಾಗುತ್ತದೆ. ರಾಜವರ್ಧನ್ ಹಿರಣ್ಯ ಸಿನಿಮಾ ಮೂಲಕ ಒಳ್ಳೆ ಶುಕ್ರವಾರ ಸಿಗಲಿ. ನಿರ್ಮಾಪಕರು ತುಂಬಾ ಫ್ಯಾಷನೇಟೆಡ್ ಇದ್ದಾರೆ. ಸಿನಿಮಾ ಚೆನ್ನಾಗಿ ಆಗಲಿ ಎಂದರು. 

ಟ್ರೆಂಡಿಂಗ್​ ಸುದ್ದಿ

ತುಪ್ಪದ ಬೆಡಗಿಯ ಶುಭಾಶಯ

ನಟ ರಾಗಿಣಿ ಮಾತನಾಡಿ, ತುಂಬಾ ಖುಷಿಯಾಗುತ್ತಿದೆ. ಹೊಸ ತಂಡ ಇಂಡಸ್ಟ್ರೀಗೆ ಎಂಟ್ರಿಯಾಗುತ್ತಿರುವುದು. ತುಂಬಾ ಅದ್ಭುತವಾಗಿ ಟೆಕ್ನಿಕಲ್ ಆಗಿ, ಕಲರ್ ಫುಲ್ ಆಗಿರುವ ಟ್ಯಾಲೆಂಟೆಂಡ್ ಟೀಂ ಎಂಟ್ರಿಯಾಗುತ್ತಿರುವುದು ಖುಷಿ. ಹೊಸದಾಗಿ ಸಿನಿಮಾ ಮಾಡುವುದು ತುಂಬಾ ಚಾಲೆಂಜಿಂಗ್ ಕೆಲಸ. ಹೊಸದಾಗಿ ಪ್ರಯತ್ನ ಮಾಡುವುದು ಸುಲಭವಲ್ಲ. ಬೇರೆ ಇಂಡಸ್ಟ್ರೀಗೆ ಹೋಲಿಕೆ ಮಾಡಿದರೆ ನಮ್ಮ ಇಂಡಸ್ಟ್ರೀಯಲ್ಲಿ ಹೊಸಬರಿಗೆ ಸಾಕಷ್ಟು ಅವಕಾಶವಿದೆ. ರಾಜ್ ಹೊಸಬಗೆಯ ಪಾತ್ರ ಮಾಡುತ್ತಾರೆ. ನನಗೆ ಹೆಮ್ಮೆ ಎನಿಸುತ್ತದೆ. ನಿಮಗೆ ಪ್ರೇಕ್ಷಕ ಪ್ರೀತಿ ಕೊಡ್ತಾರೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ತಿಳಿಸಿದರು.

ರಾಜವರ್ಧನ್ ಹೇಳಿದ್ಧೇನು?

ಶಿವಣ್ಣ ಟ್ರೇಲರ್ ನೋಡಿ ಇಷ್ಟಪಟ್ಟು ಮನೆಗೆ ಕರೆಸಿ ಇಡೀ ತಂಡಕ್ಕೆ ಒಳ್ಳೆ ಉಪಚಾರ ಮಾಡಿದ್ದು ಖುಷಿಯಾಯ್ತು. ಹಿರಣ್ಯ ಒಳ್ಳೆ ಸ್ಟೋರಿ ಲೈನ್. ನಾನು ಅದನ್ನು ನಂಬಿದೆ. ಒಳ್ಳೆ ಸಿನಿಮಾವಾಗಿದೆ. ಸಿನಿಮಾಗೆ ಒಳ್ಳೆ ಟೈಟಲ್ ಬೇಕಿತ್ತು. ಅದು ಧನು ಬಳಿ ಇತ್ತು. ಅವರು ಅದನ್ನು ಕೇಳಿದ ತಕ್ಷಣ ಕೊಟ್ಟರು. ಎಲ್ಲೂ ಏನು ಮೋಸವಾಗದೆ ಸಿನಿಮಾ ಮಾಡಿದ್ದೇವೆ. ಧನು ಥ್ಯಾಂಕು. ನಮ್ಮ ನಿರ್ಮಾಪಕರು ವಿಜಿ ನಾನು ತುಂಬಾ ಕಿತ್ತಾಡಿದ್ದೇವೆ. ಪ್ರೊಡ್ಯೂಸರ್ ತುಂಬಾ ಕನಸು ಇಟ್ಟುಕೊಂಡು ಬಂದಿದ್ದಾರೆ. ಅವರು ಹಾಕಿದ ದುಡ್ಡು ರಿರ್ಟನ್ ಆಗಬೇಕು ಅನ್ನುವುದು ನಮ್ಮ ಜವಾಬ್ದಾರಿ. ನಿರ್ದೇಶಕರು ಹೊಸ ಕನಸು ಇಟ್ಟುಕೊಂಡು ಬಂದಿದ್ದಾರೆ. ಹೊಸತಂಡ ಸಿನಿಮಾ ಕಲಿತು ಮಾಡಿದ್ದಾರೆ. ಇಡೀ ತಂಡ ಎಫರ್ಟ್ ಹಾಕಿ ಚಿತ್ರ ಮಾಡಿದ್ದಾರೆ ಎಂದರು.

ನಿರ್ದೆಶಕ ಪ್ರವೀಣ್ ಅವ್ಯೂಕ್, ಕ್ರೂರ ಗುಣ ಹೊಂದಿದ ಪಾತ್ರವನ್ನಿಟ್ಟುಕೊಂಡು ‘ಹಿರಣ್ಯ’ ಸಿನೆಮಾದ ಕಥೆ ಹೆಣೆದಿದ್ದಾರೆ. ಈ ಹಿಂದೆ ಬಿಚ್ಚುಗತ್ತಿ ಸಿನಿಮಾ ಮೂಲಕ ಭರವಸೆ ಮೂಡಿಸಿದ್ದ ರಾಜವರ್ಧನ್ ನಾಯಕ. ನಾಯಕನಾಗಿ ಅಭಿನಯಿಸಿರುವ ರಾಜವರ್ಧನ್ ಗೆ ಜೋಡಿಯಾಗಿ ರಿಹಾನಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ್ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

‘ವೇದಾಸ್ ಇನ್ಫಿನಿಟಿ ಪಿಚ್ಚರ್’ ಬ್ಯಾನರ್‌ನಲ್ಲಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ನಿರ್ಮಾಣ ಮಾಡಿರುವ ಚಿತ್ರಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಜುಲೈ 19ಕ್ಕೆ ಹಿರಣ್ಯ ಸಿನಿಮಾ ತೆರೆಗೆ ಬರಲಿದೆ. ಜಾಕ್ ಮಂಜು ಒಡೆತನದ ಶಾಲಿನಿ ಆರ್ಟ್ಸ್ ರಾಜ್ಯಾದ್ಯಂತ ಸಿನಿಮಾ ವಿತರಣೆ ಮಾಡಲಿದ್ದಾರೆ.