ಮೂರನೇ ಚಿತ್ರಕ್ಕೆ ಹೆಸರು ಬದಲಿಸಿಕೊಂಡ ಶಶಿಕುಮಾರ್‌ ಪುತ್ರ ಅಕ್ಷಿತ್‌; ಈಗಲಾದ್ರೂ ಖುಲಾಯಿಸುತ್ತಾ ಅದೃಷ್ಟ?
ಕನ್ನಡ ಸುದ್ದಿ  /  ಮನರಂಜನೆ  /  ಮೂರನೇ ಚಿತ್ರಕ್ಕೆ ಹೆಸರು ಬದಲಿಸಿಕೊಂಡ ಶಶಿಕುಮಾರ್‌ ಪುತ್ರ ಅಕ್ಷಿತ್‌; ಈಗಲಾದ್ರೂ ಖುಲಾಯಿಸುತ್ತಾ ಅದೃಷ್ಟ?

ಮೂರನೇ ಚಿತ್ರಕ್ಕೆ ಹೆಸರು ಬದಲಿಸಿಕೊಂಡ ಶಶಿಕುಮಾರ್‌ ಪುತ್ರ ಅಕ್ಷಿತ್‌; ಈಗಲಾದ್ರೂ ಖುಲಾಯಿಸುತ್ತಾ ಅದೃಷ್ಟ?

ಹಿರಿಯ ನಟ ಶಶಿಕುಮಾರ್‌ ಪುತ್ರ ಅಕ್ಷಿತ್‌ ಬರ್ತ್‌ಡೇ ಖುಷಿಯಲ್ಲಿದ್ದಾರೆ. ಈ ವಿಶೇಷ ದಿನದಂದೇ ಹೊಸ ಸಿನಿಮಾದ ಶೀರ್ಷಿಕೆ ಅನಾವರಣವಾಗಿದೆ. ‌ಇದಷ್ಟೇ ಅಲ್ಲದೆ ಹೊಸ ಹೆಸರಿನೊಂದಿಗೂ ಅಕ್ಷಿತ್ ಪರಿಚಿತಗೊಳ್ಳುತ್ತಿದ್ದಾರೆ.

ಶಶಿಕುಮಾರ್‌ ಪುತ್ರನ ರಾಶಿ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ.
ಶಶಿಕುಮಾರ್‌ ಪುತ್ರನ ರಾಶಿ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ.

Rashi Movie Title Launched: ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಕಲಾವಿದರು ತಮ್ಮ ಅಸಲಿ ಹೆಸರನ್ನು ಬದಿಗಿಟ್ಟು, ಚಿತ್ರರಂಗಕ್ಕೆ ಬಂದ ಬಳಿಕ ಸ್ಕ್ರೀನ್‌ ನೇಮ್‌ಅನ್ನು ಬದಲಿಸಿಕೊಂಡ ಸಾಕಷ್ಟು ಉದಾಹರಣೆಗಳಿವೆ. ಇದೀಗ ಆ ಸಾಲಿಗೆ ಸೇರಿದ್ದಾರೆ ಹಿರಿಯ ನಟ ಶಶಿಕುಮಾರ್‌ ಪುತ್ರ. ಇತ್ತೀಚೆಗಷ್ಟೇ ಬರ್ತ್‌ಡೇ ಆಚರಿಸಿಕೊಂಡ ಶಶಿಕುಮಾರ್‌ ಪುತ್ರ ಅಕ್ಷಿತ್‌, ಆ ಬರ್ತ್‌ಡೇ ನಿಮಿತ್ತ ಹೊಸ ಸಿನಿಮಾಕ್ಕೆ ಚಾಲನೆ ಸಿಕ್ಕಿದೆ. ಚಿತ್ರಕ್ಕೆ ರಾಶಿ ಎಂದು ಶೀರ್ಷಿಕೆ ಇಡಲಾಗಿದ್ದು, ಇದು ಅಕ್ಷಿತ್‌ ಅವರ ಮೂರನೇ ಸಿನಿಮಾ.

ಧುವನ್ ಫಿಲಂಸ್ ಬ್ಯಾನರ್‌ನಲ್ಲಿ ಅಖಿಲೇಶ್ ಅವರು ರಾಶಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಪ್ಪಟ ಪ್ರೇಮಕಥೆಯ ಈ ಸಿನಿಮಾವನ್ನು ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿದ್ದಾರೆ. ಇದೀಗ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು, ರಾಜ್ಯಸಭಾ ಸದಸ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯಾಧ್ಯಕ್ಷ ಜಿ.ಎಸ್. ಚಂದ್ರಶೇಖರ್, ನಟ ಶಶಿಕುಮಾರ್, ಬೆಂಗಳೂರು ಪೊಲೀಸ್ ಉಪ ಆಯುಕ್ತ ಸಿದ್ದರಾಜು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಸ್ ಚಿದಂಬರ್ ಸೇರಿ ಹಲವು ಗಣ್ಯರು ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಮೂರನೇ ಚಿತ್ರಕ್ಕೆ ಹೆಸರು ಚೇಂಜ್‌

ಹೊಸ ಸಿನಿಮಾದ ಬಗ್ಗೆ ಮಾತನಾಡಿದ ಶಶಿಕುಮಾರ್‌ ಪುತ್ರ ಹೆಸರು ಬದಲಿಸಿಕೊಂಡ ಬಗ್ಗೆ ಹೇಳಿಕೊಂಡರು. "ಇದು ನಾನು ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ‌. ಈ ಚಿತ್ರದ ಕಥೆ ಬಹಳ ಚೆನ್ನಾಗಿದೆ. ನನ್ನ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು ಖುಷಿಯಾಗಿದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ನಾನು, ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದೇನೆ. ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು ವಿನಂತಿಸುತ್ತೇನೆ ಎಂದರು.

ನಿರ್ದೇಶಕರು ಹೇಳುವುದೇನು?

ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿಸಿಕೊಂಡು ಬರುವಾಗ ನಿರ್ಮಾಪಕ ಅಖಿಲೇಶ್ ಅವರು ನನ್ನನ್ನು ಕರೆದು ಈ ಚಿತ್ರವನ್ನು ನಿರ್ದೇಶಿಸಬೇಕೆಂದರು. ಅಖಿಲೇಶ್ ಅವರೇ ಈ ಚಿತ್ರದ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಬರೆದು, ಗೀತರಚನೆ ಮಾಡಿ, ಸಂಗೀತ ನಿರ್ದೇಶನದೊಂದಿಗೆ ನಿರ್ದೇಶನನ್ನು ಮಾಡುತ್ತಿದ್ದೇನೆ. ಟ್ರಿಗರ್ ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು ಎಂದರು ನಿರ್ದೇಶಕ ವಿಜಯ್‌ ಪಾಳೇಗಾರ್.

ನಾಯಕಿಯಾಗಿ ಸಮೀಕ್ಷಾ

ಚಿತ್ರದ ನಾಯಕಿ ಸಮೀಕ್ಷಾ, ನಿರ್ಮಾಪಕ ಅಖಿಲೇಶ್, ಕಲಾವಿದರಾದ ಕರಿಸುಬ್ಬು, ಉಗ್ರಂ ರವಿ, ಹುಲಿ ಕಾರ್ತಿಕ್ ಮುಂತಾದವರು ರಾಶಿ ಚಿತ್ರದ ಬಗ್ಗೆ ‌ಮಾತನಾಡಿದರು. ರಾಶಿ ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ‌, ಮಂಜು ಮಹದೇವ್ ಹಿನ್ನೆಲೆ ಸಂಗೀತ ಹಾಗೂ ಬಂಡೆ ಚಂದ್ರು ಅವರ ಸಾಹಸ ನಿರ್ದೇಶನವಿದೆ. ಇತ್ತೀಚಿಗೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಈ ಪ್ರೇಮ ಕಥಾನಕಕ್ಕೆ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.

Whats_app_banner