ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರದ ಮೂಲಕ ನಿರ್ಮಾಣಕ್ಕಿಳಿದ ಬಡವ ರಾಸ್ಕಲ್‌ ನಿರ್ದೇಶಕ ಶಂಕರ್‌ ಗುರು
ಕನ್ನಡ ಸುದ್ದಿ  /  ಮನರಂಜನೆ  /  ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರದ ಮೂಲಕ ನಿರ್ಮಾಣಕ್ಕಿಳಿದ ಬಡವ ರಾಸ್ಕಲ್‌ ನಿರ್ದೇಶಕ ಶಂಕರ್‌ ಗುರು

ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರದ ಮೂಲಕ ನಿರ್ಮಾಣಕ್ಕಿಳಿದ ಬಡವ ರಾಸ್ಕಲ್‌ ನಿರ್ದೇಶಕ ಶಂಕರ್‌ ಗುರು

ಬಡವ ರಾಸ್ಕಲ್‌ ಸಿನಿಮಾ ನಿರ್ದೇಶನ ಮಾಡಿದ್ದ ನಿರ್ದೇಶಕ ಶಂಕರ್‌ ಗುರು ಇದೀಗ ನಿರ್ಮಾಪಕರಾಗಿದ್ದಾರೆ. ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರದ ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ.

ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆ
ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆ

Ravana Rajyadalli Navadampatigalu First Look: ಡಾಲಿ ಧನಂಜಯ್‌ ನಾಯಕನಾಗಿ ನಟಿಸುವ ಮೂಲಕ ನಿರ್ಮಾಣ ಮಾಡಿದ್ದ ಸಿನಿಮಾ ಬಡವ ರಾಸ್ಕಲ್.‌ ಈ ಸಿನಿಮಾ ನಿರ್ದೇಶನ ಮಾಡಿದವರು ಶಂಕರ್‌ ಗುರು. ವಿಮರ್ಶೆ ದೃಷ್ಟಿಯಿಂದ ಮತ್ತು ಕಲೆಕ್ಷನ್‌ ವಿಚಾರವಾಗಿಯೂ ಈ ಸಿನಿಮಾ ಗೆದ್ದಿತ್ತು. ಇದೀಗ ಇದೇ ಸಿನಿಮಾ ನಿರ್ದೇಶಕರು ಹೊಸ ಸಿನಿಮಾ ಮೂಲಕ ಆಗಮಿಸುತ್ತಿದ್ದಾರೆ. ವಿಶೇಷ ಏನೆಂದರೆ, ಇಲ್ಲಿ ನಿರ್ದೇಶಕರಾಗಿ ಆಕ್ಷನ್‌ ಕಟ್‌ ಹೇಳುವ ಬದಲು, ನಿರ್ಮಾಪಕರಾಗಿ ಅಖಾಡಕ್ಕೆ ಇಳಿದಿದ್ದಾರೆ. ಅವರ ಚೊಚ್ಚಲ ಚಿತ್ರಕ್ಕೆ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಶೀರ್ಷಿಕೆ ಇಡಲಾಗಿದೆ.

'ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ' ಎಂಬ ಸಿನಿಮಾ ಡೈಲಾಗ್‌ ಮೂಲಕ ಗಮನ ಸೆಳೆದಿದ್ದ ನಿರ್ದೇಶಕ ಶಂಕರ್‌ ಗುರು, ಈಗ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿ ಎಂಬ ಕನಸಿಗೆ ಶಂಕರ್ ಸಾಥ್ ಕೊಟ್ಟಿದ್ದಾರೆ.

ಬಿಡುಗಡೆಗೆ ಸಿದ್ಧವಾದ ದಂಪತಿ

ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟ್ಟು ಕಲಿತುಕೊಂಡಿರುವ ರಂಗ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ.

ಸಾಮಾಜಿಕ ಕಟ್ಟುಪಾಡುಗಳ ಕಥೆ

ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ ಜೋಡಿಯಾಗಿ ನಟಿಸಿದ್ದಾರೆ. ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.

Whats_app_banner