ಕನ್ನಡ ಸುದ್ದಿ  /  ಮನರಂಜನೆ  /  ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅದೃಷ್ಟ ಕಣ್ರೋ, ಅಪಶಕುನ ಅಲ್ಲ; ಐಪಿಎಲ್‌ನಲ್ಲಿ ಆರ್‌ಸಿಬಿ ಹೊಸ ಅಧ್ಯಾಯ, ತುಚ್ಛ ಪದ ಬಳಸಿದವರಿಗೆ ಚಾಟಿಯೇಟು

ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅದೃಷ್ಟ ಕಣ್ರೋ, ಅಪಶಕುನ ಅಲ್ಲ; ಐಪಿಎಲ್‌ನಲ್ಲಿ ಆರ್‌ಸಿಬಿ ಹೊಸ ಅಧ್ಯಾಯ, ತುಚ್ಛ ಪದ ಬಳಸಿದವರಿಗೆ ಚಾಟಿಯೇಟು

Ashwini Puneeth Rajkumar: ಐಪಿಎಲ್‌ ಕ್ರಿಕೆಟ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಗೆಲುವು ಪಡೆದಿದೆ. ಆರ್‌ಸಿಬಿಯ ಹೊಸ ಅಧ್ಯಾಯ ಆರಂಭವಾಗಿದೆ. ಆರ್‌ಸಿಬಿ ಗೆಲುವಿನ ಸಂದರ್ಭದಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಬಗ್ಗೆ ಕಳಂಕದ ಮಾತನಾಡಿದವರಿಗೆ ಅಪ್ಪು ಫ್ಯಾನ್ಸ್‌ ಚಾಟಿ ಬೀಸುತ್ತಿದ್ದಾರೆ. ಅಶ್ವಿನಿ ಅದೃಷ್ಟ ಕಣ್ರೋ, ಅಪಶಕುನ ಅಲ್ಲ ಎನ್ನುತ್ತಿದ್ದಾರೆ.

ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅದೃಷ್ಟ ಕಣ್ರೋ, ಅಪಶಕುನ ಅಲ್ಲ
ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅದೃಷ್ಟ ಕಣ್ರೋ, ಅಪಶಕುನ ಅಲ್ಲ

ಬೆಂಗಳೂರು: ಹದಿನೇಳನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸಿಎಸ್‌ಕೆಯ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದೆ. ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಗೆಲುವು ಪಡೆದು ಆರ್‌ಸಿಬಿಯು ಅಗ್ರ 4ರಲ್ಲಿ ಸ್ಥಾನ ಪಡೆದಿದೆ. ಈ ಹಿಂದೆ ಆರ್‌ಸಿಬಿ ಸೋಲು ಅನುಭವಿಸಿದಾಗ ಸೋಷಿಯಲ್‌ ಮೀಡಿಯಾದಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ಗೆ ತುಚ್ಛ ಪದ ಬಳಸಿದವರಿಗೆ ಇದೀಗ ನೆಟ್ಟಿಗರು ಸೋಷಿಯಲ್‌ ಮೀಡಿಯಾದಲ್ಲಿ ಚಾಟಿ ಬೀಸುತ್ತಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅದೃಷ್ಟ ಕಣ್ರೋ

ಆರ್‌ಸಿಬಿ ಗೆಲುವಿನ ನಗೆ ಬೀರುತ್ತಿದ್ದಂತೆ ನಟ, ಬಿಗ್‌ಬಾಸ್‌ ಕನ್ನಡ ಮಾಜಿ ಸ್ಪರ್ಧಿ, ಸೋಷಿಯಲ್‌ ಮೀಡಿಯಾ ಇನ್‌ಫ್ಲೂಯೆನ್ಸರ್‌ ಕಿರಿಕ್‌ ಕೀರ್ತಿ "ನೋಡ್ರೋ... ನಮ್ಮಕ್ಕ ಅದೃಷ್ಟ ಕಣ್ರೋ.... ಅಪಶಕುನ ಅಲ್ಲ... " ಎಂದು ಪೋಸ್ಟ್‌ ಮಾಡಿದ್ದಾರೆ. ಇದಕ್ಕೆ ಸಾಕಷ್ಟು ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ. "ಅಶ್ವಿನಿ ಪುನೀತ್ ರಾಜಕುಮಾರ್ ದೇವತೆ ಕಣ್ರೋ" "ದೊಡ್ಮನೆ ಸೊಸೆ ದೇವರಂತಹವರು" "ಏನ್ ಹೇಳ್ದೆ ಗುರು, ಮುಟ್ಟಿ ನೋಡ್ಕೊಳ್ಳೋ ಹಾಗೆ, ಇದು ಇದು actually ಚೆನ್ನಾಗಿರೋದು" "ಅಶ್ವಿನಿ ಪುನೀತ್ ರಾಜಕುಮಾರ್ ನಮ್ಮ ದೇವತೇ.. RCB ge ಅವರೇ kanro ಶುಭಶಕುನ" "ಅಶ್ವಿನಿ ಅಮ್ಮ ಅದೃಷ್ಟ ದೇವತೆ" ಎಂದೆಲ್ಲ ಸೋಷಿಯಲ್‌ ಮೀಡಿಯಾದಲ್ಲಿ ಅಪ್ಪು ಫ್ಯಾನ್ಸ್‌ ಹೇಳಿದ್ದಾರೆ.

 

ಆ ಕಹಿ ಘಟನೆಯ ನೆನಪು

ಸೋಷಿಯಲ್‌ ಮೀಡಿಯಾದಲ್ಲಿ ಎಷ್ಟು ಕೆಟ್ಟ ವ್ಯಕ್ತಿತ್ವಗಳೂ ಇರುತ್ತವೆ ಎಂದು ಅಸಹ್ಯ ಪಡುವಂತಹ ಘಟನೆ ಇತ್ತೀಚೆಗೆ ನಡೆದಿತ್ತು. ಫೇಸ್‌ಬುಕ್‌, ಟ್ವಿಟ್ಟರ್‌, ಇನ್‌ಸ್ಟಾಗ್ರಾಂನಲ್ಲಿ ತುಚ್ಯ ಮಾತುಗಳನ್ನು ನಕಲಿ ಐಡಿಗಳಲ್ಲಿ ಹೇಳಿ ಬೆಂಕಿ ಹಚ್ಚುವವರು ಇರುತ್ತಾರೆ. ಗಜಪಡೆ ಟ್ವಿಟ್ಟರ್‌ ಖಾತೆಯಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಬಗ್ಗೆ ಕೆಟ್ಟದ್ದಾಗಿ ಪೋಸ್ಟ್‌ ಮಾಡಲಾಗಿತ್ತು. ಐಪಿಎಲ್‌ನಲ್ಲಿ ಆರ್‌ಸಿಬಿ ಹೀನಾಯ ಸೋಲು ಅನುಭವಿಸಿದ ಸಂದರ್ಭದಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ "ಅಪಶಕುನ" ಎಂದು ಹೇಳಿದ್ದು ವ್ಯಾಪಕ ಆಕ್ರೋಶ ಉಂಟುಮಾಡಿತ್ತು.

ರಾಯಲ್‌ ಚಾಲೆಂಜರ್ಸ್‌ ಬ್ಯಾಂಗಲೂರು ಹೆಸರನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎಂದು ಬದಲಾವಣೆ ಮಾಡುವ ಸಲುವಾಗಿ ಆರ್‌ಸಿಬಿ ಅನ್‌ಬಾಕ್ಸ್‌ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರನ್ನು ಆಹ್ವಾನಿಸಲಾಗಿತ್ತು. ಈ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು "ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಬಂದಿರುವುದಕ್ಕೆ ಆರ್‌ಸಿಬಿ ಮ್ಯಾಚ್‌ ಸೋಲುತ್ತಿದೆ" ಎಂದು ತುಚ್ಯವಾಗಿ ಬರೆದಿದ್ದರು. ಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. ಗಂಡ ಸತ್ತ..... ಕರೀಬಾರದು" ಎಂದೆಲ್ಲ ಕೆಟ್ಟದ್ದಾಗಿ ಬರೆದಿದ್ದರು. ಈ ಪೋಸ್ಟ್‌ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ಮೂಲಪೋಸ್ಟ್‌ ಡಿಲೀಟ್‌ ಮಾಡಿ ಸ್ಕ್ರೀನ್‌ಶಾಟ್‌ ತಿದ್ದುಪಡಿ ಮಾಡಿ ವೈರಲ್‌ ಮಾಡಲಾಗಿತ್ತು. ಈ ಘಟನೆಯಿಂದ ನೊಂದ ಅಪ್ಪು ಅಭಿಮಾನಿಗಳು ಆಕ್ರೋಶಗೊಂಡಿದ್ದರು.

ಈ ಘಟನೆಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕೂಡ ಬೇಸರಗೊಂಡಿದ್ದರು. ದರ್ಶನ್‌ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಪುನೀತ್‌ ಅವರು ಮಾಧ್ಯಮಗಳಿಗೆ ಈ ಕುರಿತು ಹೇಳಿಕೆ ನೀಡಿದ್ದರು. "ಇದು ಕಿಡಿಗೇಡಿಗಳ ಕೈವಾಡ ಎಂದು ಅವರು ಹೇಳಿದ್ದಾರೆ. ಈ ವಿಷಯ ದರ್ಶನ್‌ ಗಮನಕ್ಕೂ ಬಂದಿದ್ದು, ಅವರು ಬೇಸರ ವ್ಯಕ್ತಪಡಿಸಿದ್ದಾರೆ" ಎಂದು ಅವರು ಹೇಳಿದ್ದರು. ಇದಾದ ಬಳಿಕ ಸಾಕಷ್ಟು ಜನರು ಈ ಘಟನೆ ಕುರಿತು ಬಹಿರಂಗವಾಗಿ ಬೇಸರವ್ಯಕ್ತಪಡಿಸಿದ್ದರು. ಕಾನೂನು ಕ್ರಮಕ್ಕೂ ಆಗ್ರಹಿಸಿದ್ದರು.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024