ರಿಷಿಯ ‘ರುದ್ರ ಗರುಡ ಪುರಾಣ’ ಚಿತ್ರಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸಾಥ್‌; ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ದೊಡ್ಮನೆ ಸೊಸೆ
ಕನ್ನಡ ಸುದ್ದಿ  /  ಮನರಂಜನೆ  /  ರಿಷಿಯ ‘ರುದ್ರ ಗರುಡ ಪುರಾಣ’ ಚಿತ್ರಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸಾಥ್‌; ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ದೊಡ್ಮನೆ ಸೊಸೆ

ರಿಷಿಯ ‘ರುದ್ರ ಗರುಡ ಪುರಾಣ’ ಚಿತ್ರಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸಾಥ್‌; ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ದೊಡ್ಮನೆ ಸೊಸೆ

ಆಪರೇಷನ್‌ ಅಲಮೇಲಮ್ಮ ಖ್ಯಾತಿನ ನಟ ರಿಷಿ ಇದೀಗ ಕವಲುದಾರಿ ಸಿನಿಮಾ ಬಳಿಕ ಮತ್ತೆ ಪೊಲೀಸ್‌ ವೇಷ ಧರಿಸಿದ್ದಾರೆ. ರುದ್ರ ಗರುಡ ಪುರಾಣ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್‌ ಆಗಿದ್ದು, ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಬಿಡುಗಡೆ ಮಾಡಿ ತಂಡಕ್ಕೆ ಶುಭ ಕೋರಿದ್ದಾರೆ.

ರಿಷಿಯ ‘ರುದ್ರ ಗರುಡ ಪುರಾಣ’ ಚಿತ್ರಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸಾಥ್‌; ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ದೊಡ್ಮನೆ ಸೊಸೆ
ರಿಷಿಯ ‘ರುದ್ರ ಗರುಡ ಪುರಾಣ’ ಚಿತ್ರಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸಾಥ್‌; ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ದೊಡ್ಮನೆ ಸೊಸೆ

Rudra Garuda Purana: ಸ್ಯಾಂಡಲ್‌ವುಡ್‌ನಲ್ಲಿ ಭರವಸೆಯ ನಟ ಎನಿಸಿಕೊಂಡಿರುವ ಆಪರೇಷನ್‌ ಅಲಮೇಲಮ್ಮ ಸಿನಿಮಾ ಖ್ಯಾತಿಯ ನಟ ರಿಷಿ, ಸದ್ಯ ರಾಮನ ಅವತಾರ ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಈ ಚಿತ್ರದ ಟ್ರೇಲರ್‌ ಸಹ ನೋಡುಗರ ಗಮನ ಸೆಳೆದಿತ್ತು. ಈಗ ಆ ಚಿತ್ರದ ನಡುವೆಯೇ ಮತ್ತೊಂದು ಸಿನಿಮಾದ ಅಪ್‌ಡೇಟ್‌ ಹೊರಬಿದ್ದಿದೆ. ರುದ್ರ ಗರುಡ ಪುರಾಣ ಚಿತ್ರದ ಫಸ್ಟ್‌ ಲುಕ್‌ ರಿಲೀಸ್‌ ಆಗಿದೆ.

ಆಪರೇಶನ್ ಅಲಮೇಲ್ಲಮ್ಮ, ಕವಲುದಾರಿ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಹಾಗೂ ಸೈತಾನ್ ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ ರುದ್ರ ಗರುಡ ಪುರಾಣ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಹಿಂದೆ ರಿಷಿ ಅಭಿನಯಿಸಿದ್ದ ಕವಲುದಾರಿ ಚಿತ್ರ ಪುನೀತ್ ರಾಜಕುಮಾರ್ ಅವರ ಪಿ.ಆರ್.ಕೆ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಿರ್ಮಾಣವಾಗಿತ್ತು.

ಮತ್ತೆ ಖಾಕಿ ಧರಿಸಿದ ರಿಷಿ

ಬಿಡುಗಡೆಯಾದ ಕ್ಷಣದಿಂದಲೇ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ರಿಷಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ (ತನಿಖಾಧಿಕಾರಿ) ಕಾಣಿಸಿಕೊಂಡಿದ್ದಾರೆ. ಚಿತ್ರದ ಫಸ್ಟ್ ಲುಕ್ ನೋಡಿದ ಕೂಡಲೇ ಚಿತ್ರವನ್ನು ನೋಡಲೇಬೇಕು ಎನ್ನುವ ಉತ್ಸಾಹವನ್ನು ನಿರ್ದೇಶಕರು ಹುಟ್ಟುಹಾಕಿದ್ದಾರೆ. ಇನ್ನು ಕನ್ನಡ ಹಾಗೂ ತೆಲುಗು ಎರಡು ಚಿತ್ರರಂಗದಲ್ಲೂ ರಿಷಿ ಹೆಸರು ಮಾಡಿದ್ದಾರೆ‌‌. ರುದ್ರ ಗರುಡ ಪುರಾಣ ಚಿತ್ರದ ರಿಷಿ ಅವರ ಫಸ್ಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ‌. ಚಿತ್ರದ ಬಿಡುಗಡೆಗೂ ಕಾತುರದಿಂದ ಕಾಯುತ್ತಿದ್ದಾರೆ.

ಚಂಬಲ್‌ ನಿರ್ದೇಶಕರ ಹೊಸ ಸಿನಿಮಾ

ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಂಬಲ್, ಡಿಯರ್ ವಿಕ್ರಮ್ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಥೆ ಮತ್ತು ಚಿತ್ರಕಥೆಯ ಜವಾಬ್ದಾರಿಯನ್ನು ನಿರ್ದೇಶಕ ನಂದೀಶ್‌ ಅವರದ್ದು. ಚಿತ್ರಕ್ಕೆ ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆದಿದ್ದಾರೆ. ಕೆಪಿ ಸಂಗೀತ ನಿರ್ದೇಶನ, ಸಂದೀಪ್ ಕುಮಾರ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನ ಈ ಚಿತ್ರಕ್ಕಿದೆ.

ಜುಲೈ ವೇಳೆಗೆ ರಿಲೀಸ್‌ ಸಾಧ್ಯತೆ

ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ. ವಿನೋದ್ ಆಳ್ವ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರಿ, ಕೆ.ಎಸ್ ಶ್ರೀಧರ್, ಅಶ್ವಿನಿ ಗೌಡ, ರಾಮ್ ಪವನ್, ವಂಶಿ, ಆಕರ್ಷ್, ಜೋಸೆಫ್, ಪ್ರಭಾಕರ್, ಗೌತಮ್ ಮೈಸೂರು, ಸ್ನೇಕ್ ಶ್ಯಾಮ್, ರಂಗನಾಥ್ ಭಾರದ್ವಾಜ್, ಕಾಮಿಡಿ ಕಿಲಾಡಿಗಳು ಜಗಪ್ಪ, ಪ್ರಸನ್ನ ಹಂಡ್ರಂಗಿ, ರದ್ವಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಈಗಾಗಲೇ "ರುದ್ರ ಗರುಡ ಪುರಾಣ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ‌. ಜುಲೈ ವೇಳೆಗೆ ಬಹು ನಿರೀಕ್ಷಿತ ಈ ಚಿತ್ರ ತೆರೆಗೆ ಬರಲಿದೆ.

Whats_app_banner