ಕನ್ನಡ ಸುದ್ದಿ  /  ಮನರಂಜನೆ  /  ಮಂಗ್ಲಿ ಕಂಠಕ್ಕೆ ಹುಚ್ಚೆದ್ದು ಕುಣಿದ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ, ಕಿಟ್ಟಿ, ರಚ್ಚು; ಇದು ಸಂಜು ವೆಡ್ಸ್ ಗೀತಾ-2 ಅಪ್‌ಡೇಟ್‌

ಮಂಗ್ಲಿ ಕಂಠಕ್ಕೆ ಹುಚ್ಚೆದ್ದು ಕುಣಿದ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ, ಕಿಟ್ಟಿ, ರಚ್ಚು; ಇದು ಸಂಜು ವೆಡ್ಸ್ ಗೀತಾ-2 ಅಪ್‌ಡೇಟ್‌

ಸಂಜು ವೆಡ್ಸ್ ಗೀತಾ-2 ಸಿನಿಮಾದ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ನಡೆದಿದೆ. 200 ರಿಂದ 250 ಜನ ಡಾನ್ಸರ್ಸ್ ಈ ಹಾಡಲ್ಲಿ ಹೆಜ್ಜೆ ಹಾಕಿದ್ದಾರೆ. ಖ್ಯಾತ ಗಾಯಕಿ ಮಂಗ್ಲಿ ಈ ಹಾಡಿಗೆ ದನಿಯಾಗಿದ್ದು, ಭಜರಂಗಿ ಮೋಹನ್ ಅವರು ಕೊರಿಯೋಗ್ರಾಫ್ ಮಾಡಿದ್ದಾರೆ.

ಮಂಗ್ಲಿ ಕಂಠಕ್ಕೆ ಹುಚ್ಚೆದ್ದು ಕುಣಿದ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ
ಮಂಗ್ಲಿ ಕಂಠಕ್ಕೆ ಹುಚ್ಚೆದ್ದು ಕುಣಿದ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ

ಬೆಂಗಳೂರು: ಸಂಜು ವೆಡ್ಸ್‌ ಗೀತಾ 2 ಸಿನಿಮಾ ಶೂಟಿಂಗ್‌ ಭರದಿಂದ ಸಾಗುತ್ತಿದೆ. ಇದೀಗ ಆ ಸಿನಿಮಾದ ಹಾಡೊಂದರ ಶೂಟಿಂಗ್‌ ಕುರಿತು ಮಾಹಿತಿ ಹೊರಬಿದ್ದಿದೆ. 200 ರಿಂದ 250 ಜನ ಡಾನ್ಸರ್ಸ್ ಈ ಹಾಡಲ್ಲಿ ಹೆಜ್ಜೆ ಹಾಕಿದ್ದಾರೆ. ಖ್ಯಾತ ಗಾಯಕಿ ಮಂಗ್ಲಿ ಈ ಹಾಡಿಗೆ ದನಿಯಾಗಿದ್ದು, ಭಜರಂಗಿ ಮೋಹನ್ ಅವರು ಕೊರಿಯೋಗ್ರಾಫ್ ಮಾಡಿದ್ದಾರೆ. ಈ ಹಾಡಿಗೆ ರಾಗಿಣಿ ದ್ವಿವೇದಿ, ಕಿಟ್ಟಿ, ರಚ್ಚು ಭರ್ಜರಿ ಸ್ಟೆಪ್‌ ಹಾಕಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಕಾಡುವಂಥ ಪ್ರೇಮಕಥೆಗಳನ್ನು ತೆರೆಮೇಲೆ ಮೂಡಿಸಿದ ನಿರ್ದೇಶಕ ನಾಗಶೇಖರ್ ಇದೀಗ ಕನ್ನಡ ಸಿನಿರಸಿಕರಿಗಾಗಿ ಸಂಜು ವೆಡ್ಸ್ ಗೀತಾ-2 ಮೂಲಕ ಮತ್ತೊಂದು ಅದ್ಭುತ ಲವ್ ಸ್ಟೋರಿಯನ್ನು ಹೇಳಹೊರಟಿದ್ದಾರೆ. ದಶಕದ ಹಿಂದೆ ತಮ್ಮದೇ ನಿರ್ದೇಶನದಲ್ಲಿ ತೆರೆಕಂಡು, ಜನಮನ ಸೂರೆಗೊಂಡು ಯಶಸ್ವಿಯಾಗಿದ್ದ ಸಂಜು ವೆಡ್ಸ್ ಗೀತಾ‌ ಚಿತ್ರದ ಟೈಟಲ್ ಇಟ್ಟುಕೊಂಡು ಹೊಸ ಪ್ರೇಮಕಥೆ ಹೇಳುತ್ತಿದ್ದಾರೆ.

ಶ್ರೀನಗರ ಕಿಟ್ಟಿ ಹಾಗೂ ಗುಳಿಕೆನ್ನೆ ಬೆಡಗಿ ರಚಿತಾರಾಮ್ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ನಡೆಯಿತು. ನಾಯಕ ಸಂಜು ಹಾಗೂ ನಾಯಕಿ ಗೀತಾ ಇಬ್ಬರ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬರುವ ಪಾರ್ಟಿ ಸಾಂಗ್ ಅದಾಗಿದ್ದು, ವಿಶೇಷವಾಗಿ ಈ ಹಾಡಲ್ಲಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇವರಿಬ್ಬರ ಜೊತೆ ಹೆಜ್ಜೆ ಹಾಕಿದ್ದಾರೆ. ಕುಂಬಳಗೋಡಿನ ಬಿಜಿಎಸ್ ಹೈಸ್ಕೂಲಿನ ಗ್ಲಾಸ್ ಹೌಸ್ ನಲ್ಲಿ ಈ ಹಾಡಿನ ಶೂಟಿಂಗ್‌ ನಡೆದಿದೆ. 200 ರಿಂದ 250 ಜನ ಡಾನ್ಸರ್ಸ್ ಈ ಹಾಡಲ್ಲಿ ಹೆಜ್ಜೆ ಹಾಕಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಸಂಜು ವೆಡ್ಸ್ ಗೀತಾ-2
ಸಂಜು ವೆಡ್ಸ್ ಗೀತಾ-2

ಖ್ಯಾತ ಗಾಯಕಿ ಮಂಗ್ಲಿ ಈ ಹಾಡಿಗೆ ದನಿಯಾಗಿದ್ದು, ಭಜರಂಗಿ ಮೋಹನ್ ಅವರು ಕೊರಿಯೋಗ್ರಾಫ್ ಮಾಡಿದ್ದಾರೆ. ಈ ವರ್ಷದ ಸೂಪರ್ ಹಿಟ್ ಸಾಂಗ್ ಇದಾಗುವ ನಿರೀಕ್ಷೆಯಲ್ಲಿ ಚಿತ್ರತಂಡವಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, 2 ಫೈಟ್ಸ್, ಒಂದು ಹಾಡಿನ ಪ್ಯಾಚ್ ವರ್ಕ್ ಮಾತ್ರವೇ ಬಾಕಿಯಿದೆ. ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ ನಮ್ಮ ಮಣ್ಣಿನ ಪ್ರೇಮಿಗಳ ಅದ್ಭುತ ಪ್ರೇಮಕಥೆ ಸಂಜು ವೆಡ್ಸ್ ಗೀತಾ-2 ಸಿನಿಮಾದಲ್ಲಿದೆ.

ಬಿರುಸಿನಲ್ಲಿ ನಡೆಯುತ್ತಿದೆ ಡಬ್ಬಿಂಗ್‌ ಕೆಲಸ

ಈಗಾಗಲೇ ಚಿತ್ರದ ಎಡಿಟಿಂಗ್ ಮುಗಿದು, ಡಬ್ಬಿಂಗ್ ಕೂಡ ಕೊನೇ ಹಂತದಲ್ಲಿದೆ. ಚಿತ್ರಕ್ಕೆ ಸ್ವಿಟ್ಜರ್ ಲ್ಯಾಂಡ್ ನಲ್ಲಿ 15 ದಿನ ಹನ್ನೊಂದು ಲೊಕೇಶನ್ ಗಳಲ್ಲಿ ಮೂರನೇ ಹಂತದ ಚಿತ್ರೀಕರಣ ನಡೆಸಲಾಗಿದೆ. ಅಲ್ಲದೆ 50 ಲಕ್ಷ ರೂ.ಗಳ ವೆಚ್ಚದಲ್ಲಿ ಕುಣಿಗಲ್ ನ ಯುಬಿ ಸ್ಟೆಡ್ ಫಾರಂ(ಕುದುರೆ ಫಾರಂ)ನಲ್ಲಿ ಸುಮಾರು 5 ದಿನಗಳವರೆಗೆ ಅದ್ದೂರಿಯಾಗಿ ಹಾಡೊಂದನ್ನು ಚಿತ್ರೀಕರಿಸಲಾಗಿದೆ. ಹೀಗೆ ಚಿತ್ರಕಥೆಯಷ್ಟೇ ಪ್ರಾಮುಖ್ಯತೆಯನ್ನು ಚಿತ್ರದ ಹಾಡುಗಳಿಗೂ ಸಹ ನೀಡಲಾಗಿದ್ದು, ಒಂದು ಸಿನಿಮಾಗಾಗುವಷ್ಟು ಖರ್ಚನ್ನು ನಿರ್ಮಾಪಕ ಛಲವಾದಿ ಕುಮಾರ್ ಅವರು ಹಾಡುಗಳಿಗೇ ಮಾಡುವ ಮೂಲಕ ಅದ್ದೂರಿತನಕ್ಕೆ ಎಲ್ಲೂ ಕೊರತೆ ಬಾರದಂತೆ ನೋಡಿಕೊಂಡಿದ್ದಾರೆ. ಅಲ್ಲದೆ ಹಾಡುಗಳನ್ನು ಹಾಸನ ಮತ್ತು ಹಾವೇರಿಯಲ್ಲಿ ಅದ್ದೂರಿ ಸಮಾರಂಭದಲ್ಲಿ ರಿಲೀಸ್ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ. ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ನಿರ್ಮಾಪಕ ಛಲವಾದಿ ಕುಮಾರ್ ಅವರು ಈ ಚಿತ್ರವನ್ನು ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.

ಈ ಸಿನಿಮಾಕ್ಕೆ ನಾಗಶೇಖರ್ ಅವರ ಕಥೆ, ಚಿತ್ರಕಥೆ ನಿರ್ದೇಶನವಿದೆ. ಶ್ರೀಧರ ವಿ. ಸಂಭ್ರಮ್ 5 ಹಾಡುಗಳನ್ನು ಕಂಪೋಸ್‌ ಮಾಡಿದ್ದಾರೆ. ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿಹಾಡುಗಳಿಗೆ ದನಿಯಾಗಿದ್ದಾರೆ. ರಾಗಿಣಿ ದ್ವಿವೇದಿ, ಚೇತನ್ ಚಂದ್ರ,(ಕೆಮಿಯೋ), ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ ಕುಮಾರ್ ಸೇರಿದಂತೆ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಟಿ20 ವರ್ಲ್ಡ್‌ಕಪ್ 2024