ಕನ್ನಡ ಸುದ್ದಿ  /  ಮನರಂಜನೆ  /  Sathyam: ಸತ್ಯಂ ಚಿತ್ರದಲ್ಲಿ ತುಳುನಾಡ ದೈವದ ಕಥೆ; ಸೆನ್ಸಾರ್‌ ಪಾಸ್‌, ಶೀಘ್ರದಲ್ಲಿ ಚಿತ್ರಮಂದಿರದಲ್ಲಿ ‘ಗಣಪ’ನ ಸಿನಿಮಾ

Sathyam: ಸತ್ಯಂ ಚಿತ್ರದಲ್ಲಿ ತುಳುನಾಡ ದೈವದ ಕಥೆ; ಸೆನ್ಸಾರ್‌ ಪಾಸ್‌, ಶೀಘ್ರದಲ್ಲಿ ಚಿತ್ರಮಂದಿರದಲ್ಲಿ ‘ಗಣಪ’ನ ಸಿನಿಮಾ

ಸಂತೋಷ್‌ ಬಾಲರಾಜ್‌, ರಂಜನಿ ರಾಘವನ್‌ ನಾಯಕ ನಾಯಕಿಯಾಗಿ ನಟಿಸಿರುವ ಸತ್ಯಂ ಸಿನಿಮಾ ಬಿಡುಗಡೆಯ ಸನಿಹಕೆ ಬಂದು ನಿಂತಿದೆ. ಚಿತ್ರದ ಸೆನ್ಸಾರ್‌ ಪಾಸ್‌ ಆಗಿದ್ದು, ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕ ಘೋಷಣೆ ಆಗಲಿದೆ. ತುಳುನಾಡ ದೈವದ ಕಥೆಯೂ ಈ ಚಿತ್ರದ ಹೈಲೈಟ್.‌

Sathyam: ‘ಸತ್ಯಂ’ ಚಿತ್ರದಲ್ಲಿ ತುಳುನಾಡ ದೈವದ ಕಥೆ; ಸೆನ್ಸಾರ್‌ ಪಾಸ್‌, ಶೀಘ್ರದಲ್ಲಿ ಚಿತ್ರಮಂದಿರದಲ್ಲಿ ‘ಗಣಪ’ನ ಸಿನಿಮಾ
Sathyam: ‘ಸತ್ಯಂ’ ಚಿತ್ರದಲ್ಲಿ ತುಳುನಾಡ ದೈವದ ಕಥೆ; ಸೆನ್ಸಾರ್‌ ಪಾಸ್‌, ಶೀಘ್ರದಲ್ಲಿ ಚಿತ್ರಮಂದಿರದಲ್ಲಿ ‘ಗಣಪ’ನ ಸಿನಿಮಾ

Sathyam: ನಿರ್ದೇಶಕ ಅಶೋಕ್ ಕಡಬ ಇದೀಗ `ಸತ್ಯಂ’ ಚಿತ್ರದ ಮೂಲಕ ಮತ್ತೊಂದು ಜಾಡಿನತ್ತ ಹೊರಳಿಕೊಂಡಿರುವ ಸ್ಪಷ್ಟ ಸೂಚನೆಯೊಂದು ಸಿಕ್ಕಿದೆ. ಈ ಹಿಂದೆ ಸತ್ಯಂ ಟೀಸರ್ ಬಿಡುಗಡೆಯಾದಾಗಲೇ ಅದು ಸ್ಪಷ್ಟವಾಗಿತ್ತು. ಆ ಟೀಸರ್‌ಗೆ ಮಿಲಿಯನ್ನುಗಟ್ಟಲೆ ವೀಕ್ಷಣೆಗಳು ಸಿಕ್ಕಿ, ಎಲ್ಲ ಕಡೆಗಳಿಂದಲೂ ಮೆಚ್ಚುಗೆಗಳೂ ಹರಿದು ಬಂದಿದ್ದವು. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿರುವ ಸತ್ಯಂ ಸಿನಿಮಾ ಸೆನ್ಸಾರ್ ಸರ್ಟಿಫಿಕೇಟ್ ಪಡೆದುಕೊಂಡಿದೆ. ಈ ವಿಚಾರವನ್ನು ನಿರ್ಮಾಪಕರಾದ ಮಹಾಂತೇಶ್ ವಿ.ಕೆ ಹಂಚಿಕೊಂಡಿದ್ದಾರೆ. ಯು\ಎ ಸರ್ಟಿಫಿಕೇಟಿನೊಂದಿಗೆ, ಸೆನ್ಸಾರ್ ಅಧಿಕಾರಿಗಳ ತುಂಬು ಮೆಚ್ಚುಗೆಯೂ ಸಿಕ್ಕಿದ್ದಕ್ಕೆ ಚಿತ್ರತಂಡ ಖುಷಿಯಲ್ಲಿದೆ.

ಟ್ರೆಂಡಿಂಗ್​ ಸುದ್ದಿ

ಇದು ಗಣಪ ನಂತರ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಚಿತ್ರ. ಸೀರಿಯಲ್‌ ಸಿನಿಮಾಗಳಲ್ಲಿ ಬಿಜಿಯಾಗಿರುವ ರಂಜಿನಿ ರಾಘವನ್ ಈ ಚಿತ್ರದ ನಾಯಕಿ. ಈ ಹಿಂದಿನ ರಂಗಿತರಂಗ, ಕಾಂತಾರ ಸಿನಿಮಾಗಳಲ್ಲಿ ತುಳುನಾಡ ದೈವಾರಾಧನೆ ಇತ್ತು. ಆ ನೆಲದ ಘಮಲಿನ ಕಥೆಯನ್ನೊಳಗೊಂಡಿರುವ ಚಿತ್ರ `ಸತ್ಯಂ’. ಹಾಗೆಂದ ಮಾತ್ರಕ್ಕೆ ಇದು ಆ ಎರಡು ಸಿನಿಮಾಗಳ ಗೆಲುವಿನ ಪ್ರಭೆಯಲ್ಲಿ ರೂಪುಗೊಂಡಿರುವ ಚಿತ್ರ ಅಂದುಕೊಳ್ಳುವಂತಿಲ್ಲ. ಕಾಂತಾರ ಸಿನಿಮಾಕ್ಕೂ ಮುಂಚೆ ಸತ್ಯಂ ಕಥೆ ರೆಡಿಯಾಗಿತ್ತು ಎಂಬುದನ್ನು ಖುದ್ದು ನಿರ್ದೇಶಕರು ಖಚಿತಪಡಿಸಿದ್ದಾರೆ. ಸೆನ್ಸಾರ್ ಮಂಡಳಿ ಕಡೆಯಿಂದ ಸತ್ಯಂಗೆ ಯು\ಎ ಸರ್ಟಿಫಿಕೇಟು ಸಿಕ್ಕಿದೆ. ಅಂದಹಾಗೆ, ಯಾವುದೇ ಕಟ್, ಎಡಿಟ್ ಇಲ್ಲದೆಯೇ ಈ ಸಿನಿಮಾ ಸೆನ್ಸಾರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದೆ. 

ನಿರ್ದೇಶಕರಾಗಿ ಒಂದಷ್ಟು ಪ್ರಯೋಗಗಳನ್ನು ಮಾಡುತ್ತಾ ಬಂದ ಅಶೋಕ್ ಕಡಬ, ಈಗ ಸತ್ಯಂ ಸಿನಿಮಾದಲ್ಲೂ ಅದೇ ಘಮ ತುಂಬಿಸಿದ್ದಾರೆ. ಅಶೋಕ್ ಕಡಬ ಸತ್ಯಂ ಎಂಬ ಪಕ್ಕಾ ಮಾಸ್ ಥ್ರಿಲ್ಲರ್ ಕಥಾನಕವನ್ನು ಕೈಗೆತ್ತಿಕೊಂಡಾಗಲೂ ಇಂಥಾದ್ದೇ ಛಳುಕು ಮೂಡಿಕೊಂಡಿತ್ತು. ಅದು ಟೀಸರ್ ಬಿಡುಗಡೆಯಾದಾಕ್ಷಣ ಮತ್ತಷ್ಟು ತೀವ್ರಗೊಂಡಿತ್ತು. ಮಿಲಿಯನ್ನುಗಟ್ಟಲೆ ವೀವ್ಸ್ ಪಡೆದುಕೊಳ್ಳುವ ಮೂಲಕ ಸತ್ಯಂ ಸೃಷ್ಟಿಸಿದ್ದ ಸಂಚಲನ ಸಣ್ಣದ್ದೇನಲ್ಲ. ಈ ಸಿನಿಮಾದಲ್ಲಿ ತುಳುನಾಡ ದೈವದ ಆರಾಧನೆಯ ಕಥೆಯನ್ನು ಬೆರೆಸಿದ್ದಾರೆ ನಿರ್ದೇಶಕರು.

ಶ್ರೀ ಮಾತಾ ಕ್ರಿಯೇಷನ್ಸ್ ಬ್ಯಾನರಿನಡಿಯಲ್ಲಿ ಮಹಾಂತೇಶ್ ವಿ.ಕೆ ನಿರ್ಮಾಣ ಮಾಡಿರುವ ಸತ್ಯಂ ಕುಟುಂಬ ಸಮೇತರಾಗಿ ನೋಡುವ, ಎಲ್ಲ ವರ್ಗದ ಪ್ರೇಕ್ಷಕರನ್ನೂ ಆವರಿಸಿಕೊಳ್ಳುವ ಗುಣ ಹೊಂದಿರುವ ಚಿತ್ರವಂತೆ. ವಿಶೇಷವೆಂದರೆ, ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸತ್ಯಂಗೂ ಸಂಗೀತ ನಿರ್ದೇಶನ ಮಾಡಿದರೆ, ಸಿನೆಟೆಕ್ ಸೂರಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಸಂತೋಷ್ ಬಾಲರಾಜ್ ನಾಯಕನಾದರೆ, ರಂಜಿನಿ ರಾಘವನ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಪವಿತ್ರಾ ಲೋಕೇಶ್, ಸುಮನ್, ಸೈಯಾಜಿ ಶಿಂಧೆ, ಅವಿನಾಶ್, ವಿನಯಾ ಪ್ರಸಾದ್, ಮುಖ್ಯಮಂತ್ರಿ ಚಂದ್ರು, ಎಂ.ಎನ್ ಲಕ್ಷ್ಮಿದೇವಿ ಮುಂತಾದವರು ನಟಿಸಿದ್ದಾರೆ. ಇದೀಗ ಪೋಸ್ಟ್ ಪ್ರಡಕ್ಷನ್ ಕೆಲಸ ಕಾರ್ಯ ಸಂಪೂರ್ಣವಾಗಿ ಮುಗಿದಿದೆ. ಚುನಾವಣಾ ಭರಾಟೆ, ಐಪಿಎಲ್ ಹಂಗಾಮದ ನಡುವೆ ತಿಂಗಳೊಪ್ಪತ್ತಿನಲ್ಲಿಯೇ ಸತ್ಯಂ ಅನ್ನು ತೆರೆಗಾಣಿಸಲು ಚಿತ್ರ ತಂಡ ತಯಾರಿ ನಡೆಸುತ್ತಿದೆ. ಅತೀ ಶೀಘ್ರದಲ್ಲಿ ಸತ್ಯಂ ಬಿಡುಗಡೆ ದಿನಾಂಕ ಜಾಹೀರಾಗಲಿದೆ.

IPL_Entry_Point