ಒಂದು ಸರಳ ಪ್ರೇಮಕಥೆ ಅಷ್ಟೇ ಸರಳವಾಗಿ ಮುಗಿಸಿದ ಸಿಂಪಲ್‌ ಸುನಿ; ಪುತ್ರ ವಿನಯ್ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌
ಕನ್ನಡ ಸುದ್ದಿ  /  ಮನರಂಜನೆ  /  ಒಂದು ಸರಳ ಪ್ರೇಮಕಥೆ ಅಷ್ಟೇ ಸರಳವಾಗಿ ಮುಗಿಸಿದ ಸಿಂಪಲ್‌ ಸುನಿ; ಪುತ್ರ ವಿನಯ್ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌

ಒಂದು ಸರಳ ಪ್ರೇಮಕಥೆ ಅಷ್ಟೇ ಸರಳವಾಗಿ ಮುಗಿಸಿದ ಸಿಂಪಲ್‌ ಸುನಿ; ಪುತ್ರ ವಿನಯ್ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌

ವಿನಯ್‌ ರಾಜ್‌ಕುಮಾರ್‌ ನಟನೆಯ ಒಂದು ಸರಳ ಪ್ರೇಮಕಥೆ ಚಿತ್ರದ ಶೂಟಿಂಗ್‌ ಮುಕ್ತಾಯಗೊಂಡಿದೆ. ಸಿಂಪಲ್‌ ಸುನಿ ನಿರ್ದೇಶನದಲ್ಲಿ ಸಿದ್ಧವಾಗುತ್ತಿರುವ ಈ ಸಿನಿಮಾದಲ್ಲಿ ರಾಘವೇಂದ್ರ ರಾಜ್‌ಕುಮಾರ್‌ ಸಹ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ಒಂದು ಸರಳ ಪ್ರೇಮಕಥೆ ಅಷ್ಟೇ ಸರಳವಾಗಿ ಮುಗಿಯಿತು.. ಪುತ್ರ ವಿನಯ್ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌
ಒಂದು ಸರಳ ಪ್ರೇಮಕಥೆ ಅಷ್ಟೇ ಸರಳವಾಗಿ ಮುಗಿಯಿತು.. ಪುತ್ರ ವಿನಯ್ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌

Ondu Sarala Prema Kathe: ಸಿಂಪಲ್‌ ಸುನಿ ಮತ್ತು ವಿನಯ್‌ ರಾಜ್‌ಕುಮಾರ್‌ ಕಾಂಬಿನೇಷನ್‌ ಒಂದು ಸರಳ ಪ್ರೇಮಕಥೆ ಸಿನಿಮಾ ತಂಡದಿಂದ ಬಿಗ್‌ ಅಪ್‌ಡೇಟ್‌ ಸಿಕ್ಕಿದೆ. ಮೈಸೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಕುಂಬಳಕಾಯಿ ಹೊಡೆದಿದೆ. ವಿಶೇಷ ಅಂದರೆ ವಿನಯ್ ಸಿನಿಮಾದಲ್ಲಿ ಅಪ್ಪ ರಾಘಣ್ಣ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ಟೈಟಲ್ ಹೇಳುವಂತೆ ಇದೊಂದು ಸರಳ ಪ್ರೇಮಕಥೆ. ಸಂಗೀತ ನಿರ್ದೇಶಕನ ಪ್ರೇಮಕಥೆಯಾಗಿರುವುದರಿಂದ ಸಂಗೀತಮಯ ಜರ್ನಿ. ಅಂದರೆ ನಮ್ಮ ಆಲ್ಬಂ ತೆಗೆದುಕೊಂಡು ಹಾಕಿಕೊಂಡರೆ ಮೈಸೂರಿನಿಂದ ಬೆಂಗಳೂರು ತಲುಪುತ್ತೀರಾ. ಒಟ್ಟು ಸಿನಿಮಾದಲ್ಲಿ 11 ಹಾಡುಗಳಿವೆ. ಎಲ್ಲಾ ಪ್ರಕಾರದ ಸಂಗೀತವನ್ನು ನೀವಿಲ್ಲಿ ಕೇಳಲಿದ್ದೀರಿ. ಖುಷಿ ವಿಷಯ ಏನಂದರೆ ಮೊದಲ ದಿನ ವಿನಯ್ ಸರ್ ಚಿತ್ರೀಕರಣ ಮಾಡಿದೆ. ಕೊನೆಯ ದಿನ ರಾಘಣ್ಣ ಅವರು ಚಿತ್ರೀಕರಣ ಮಾಡಿದ್ದೇನೆ. ದೊಡ್ಮನೆ ಕುಟುಂಬದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ಒಟ್ಟು 83 ದಿನ ಶೂಟ್ ನಡೆಸಿದ್ದೇವೆ. ಮುಂಬೈ, ರಾಜಸ್ತಾನ, ಬೆಂಗಳೂರು, ಮೈಸೂರಿನಲ್ಲಿ ಚಿತ್ರೀಕರಣ ಮಾಡಿದ್ದೇನೆ ಎಂದರು ನಿರ್ದೇಶಕ ಸುನಿ.

ರಾಘಣ್ಣ ಹೇಳಿದ್ದೇನು?

ರಾಘಣ್ಣ ಮಾತನಾಡಿ, ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಸಿನಿಮಾ ನೋಡಿದ್ಮೇಲಿನಿಂದ ಸುನಿ ಅವರ ಸಿನಿಮಾಗಳಲ್ಲಿ ನಟಿಸಬೇಕು ಎನಿಸಿತ್ತು. ನನ್ನ ಮಗ ನಟಿಸುತ್ತಿದ್ದೇನೆ ಎಂದಾಗ ದೊಡ್ಡ ವಿಷಯ ಎನಿಸಿತು. ನನಗೆ ಟೈಟಲ್ ತುಂಬಾ ಇಷ್ಟವಾಯಿತು. ಸಂಗೀತ ಅಂದರೆ ಏಳು ಸ್ವರಗಳು ಇರುತ್ತವೆ. ನನ್ನನ್ನೂ ಒಂದು ಸ್ವರವಾಗಿ ಸೇರಿಸಿಕೊಂಡಿದ್ದಾರೆ. ಅದು ನನಗೆ ಸಂತೋಷ ಕೊಡುತ್ತದೆ" ಎಂದರು.

ಕಲಾವಿದರಿಗೆ ಇವರು ಕಂಫರ್ಟ್‌ ಸುನಿ

"ಒಂದು ಸರಳ ಪ್ರೇಮಕಥೆ.. ಈ ಸಿನಿಮಾದಲ್ಲಿ ನಟಿಸಿದ ಅನುಭವ ತುಂಬಾ ಚೆನ್ನಾಗಿತ್ತು. ಶೂಟಿಂಗ್‌ಗೆ ಯಾವುದೇ ತೊಂದರೆ ಆಗದಂತೆ ನಿರ್ಮಾಪಕರಾದ ರಮೇಶ್ ಅವರು ಮಾಡಿಕೊಟ್ಟರು. ಸುನಿ ಅವರ ಜೊತೆ ಕೆಲಸ ಮಾಡಲು ಖುಷಿ ಕೊಡ್ತು. ಸುನಿ ಅವರಂತೂ ಒಬ್ಬ ಕಲಾವಿದನಿಗೆ ನಟಿಸಲು ತುಂಬ ಕಂಪರ್ಟ್ ಫೀಲ್ ಕೊಡ್ತಾರೆ. ಆಕ್ಟಿಂಗ್ ಮಾಡಲು ಟ್ರೈ ಮಾಡುವುದು ಬೇಡ. ಅದು ತಾನಾಗಿಯೇ ಬರುತ್ತದೆ. ಇಡೀ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಎಲ್ಲಾ ಕಲಾವಿದರ ಅದ್ಭುತವಾಗಿ ನಟಿಸಿದ್ದಾರೆ ಎಂದರು ನಟ ವಿನಯ್ ರಾಜ್ ಕುಮಾರ್.

11 ಹಾಡುಗಳ ಸಂಗೀತಮಯ ಸಿನಿಮಾ

ಸಂಗೀತ ನಿರ್ದೇಶಕ ವೀರ್ ಸಮರ್ಥ್ ಮಾತನಾಡಿ, ನನ್ನ ಸಿನಿಮಾ ಕರಿಯರ್ ನ ಅತ್ಯಂತ ಉತ್ಕೃಷ್ಟ ಮ್ಯೂಸಿಕಲ್‌ ಸಂಗೀತದ ಸಿನಿಮಾ ಒಂದು ಸರಳ ಪ್ರೇಮ ಕಥೆ. ನನ್ನ ಎರಡನೇ ಸಿನಿಮಾದಲ್ಲಿ 10 ಹಾಡುಗಳಿದ್ದವು. ತುಂಬ ದೊಡ್ಡ ಹೆಸರು ತಂದುಕೊಟ್ಟಿತ್ತು. ಆ ನಂತರ ಯೋಗರಾಜ್ ಭಟ್ ಅವರ ಪ್ರೊಡಕ್ಷನ್ ನಲ್ಲಿ ದೇವ್ರೇ ಅಂತಾ ಮಾಡಿದ್ದೆ. ಅದು ಒಳ್ಳೆ ಹೆಸರು ತಂದುಕೊಟ್ಟಿತ್ತು. ಈಗ ಈ ಸಿನಿಮಾ ಆ ಎರಡು ಸಿನಿಮಾಗಳನ್ನು ಈ ಚಿತ್ರ ಮೀರಿಸುತ್ತದೆ ಅನಿಸುತ್ತಿದೆ. ಯಾಕಂದರೆ ಈ ಸಿನಿಮಾದಲ್ಲಿ 11 ಹಾಡುಗಳಿವೆ. ಸಿನಿಮಾದ ನಡುವೆ ಚಿಕ್ಕ ಚಿಕ್ಕ ಬೀಟ್ ಬರುತ್ತದೆ. 2 ಗಂಟೆ 20 ನಿಮಿಷ ಸಿನಿಮಾದಲ್ಲಿ ಮ್ಯೂಸಿಕ್ ಜೊತೆ ಕನೆಕ್ಟ್ ಆಗುತ್ತದೆ ಎಂದರು.

ಚಿತ್ರದಲ್ಲಿ ಸ್ವಾತಿಷ್ಠ ಕೃಷ್ಣನ್, ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಎಂಬ ಇಬ್ಬರು ಚೆಲುವೆಯರ ವಿನಯ್ ರಾಜ್‌ಕುಮಾರ್‌ಗೆ ಜೋಡಿಯಾಗಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ತಾರಾಬಳಗದಲ್ಲಿದ್ದಾರೆ. ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡಿದರೆ, ಕಾರ್ತಿಕ್ ಕ್ಯಾಮೆರಾ, ಆದಿ ಅವರ ಸಂಕಲನ ಚಿತ್ರಕ್ಕಿದೆ.

Whats_app_banner