ಕನ್ನಡ ಸುದ್ದಿ  /  ಮನರಂಜನೆ  /  ಒಂದು ಸರಳ ಪ್ರೇಮಕಥೆ ಸಿನಿಮಾ ಕ್ರೇಜ್; ದೊಡ್ಮನೆ ಕುಡಿಗೆ ಆಶೀರ್ವದಿಸಲು ಬಸ್ ಏರಿ ಬಂದ ಚಿತ್ರಪ್ರೇಮಿಗಳು

ಒಂದು ಸರಳ ಪ್ರೇಮಕಥೆ ಸಿನಿಮಾ ಕ್ರೇಜ್; ದೊಡ್ಮನೆ ಕುಡಿಗೆ ಆಶೀರ್ವದಿಸಲು ಬಸ್ ಏರಿ ಬಂದ ಚಿತ್ರಪ್ರೇಮಿಗಳು

ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಒಳ್ಳೆ ಅಭಿಪ್ರಾಯ ಪಡೆದುಕೊಳ್ಳುತ್ತಿರುವ ಒಂದು ಸರಳ ಪ್ರೇಮಕಥೆ ಸಿನಿಮಾದ ಕ್ರೇಜ್ ನಿಧಾನವಾಗಿ ಗಾಂಧಿನಗರವನ್ನು ಆವರಿಸಿಕೊಳ್ಳುತ್ತಿದೆ. ರಾಜ್‌ ಕುಟುಂಬದ ಮೇಲಿನ ಅಭಿಮಾನಕ್ಕೆ ಬೆಂಗಳೂರಿನ ಅಭಿಮಾನಿಗಳು ತಾವೇ ಒಂದು ಬಸ್‌ ಮಾಡಿಕೊಂಡು ಬಂದು ಎಲ್ಲರೂ ಒಟ್ಟಿಗೆ ಸಿನಿಮಾ ಕಣ್ತುಂಬಿಕೊಂಡಿದ್ದಾರೆ.

ಒಂದು ಸರಳ ಪ್ರೇಮಕಥೆ ಸಿನಿಮಾ ಕ್ರೇಜ್; ದೊಡ್ಮನೆ ಕುಡಿಗೆ ಆಶೀರ್ವದಿಸಲು ಬಸ್ ಏರಿ ಬಂದ ಚಿತ್ರಪ್ರೇಮಿಗಳು
ಒಂದು ಸರಳ ಪ್ರೇಮಕಥೆ ಸಿನಿಮಾ ಕ್ರೇಜ್; ದೊಡ್ಮನೆ ಕುಡಿಗೆ ಆಶೀರ್ವದಿಸಲು ಬಸ್ ಏರಿ ಬಂದ ಚಿತ್ರಪ್ರೇಮಿಗಳು

Ondu sarala Prema kathe: ಡಾ. ರಾಜ್‌ಕುಮಾರ್‌ ಕುಟುಂಬದ ಕುಡಿ ವಿನಯ್‌ ರಾಜ್‌ಕುಮಾರ್‌ ಮತ್ತು ಸಿಂಪಲ್ ಸುನಿ ಜೋಡಿಯ ಒಂದು ಸರಳ ಪ್ರೇಮಕಥೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶುಕ್ರವಾರ (ಫೆ. 9) ರಾಜ್ಯಾದ್ಯಂತ ಬಿಡುಗಡೆಯಾದ ಚಿತ್ರಕ್ಕೆ ಎಲ್ಲೆಡೆಯಿಂದ‌ ಮೆಚ್ಚುಗೆ ಸಿಗುತ್ತಿದೆ.

ಟ್ರೆಂಡಿಂಗ್​ ಸುದ್ದಿ

ನಿರ್ದೇಶಕ ಸುನಿ ನಿರೂಪಣೆ ಶೈಲಿ, ಕಾಮಿಡಿ ಟೈಮ್, ಎಮೋಷನ್, ನಾಯಕ ವಿನಯ್, ನಾಯಕಿಯರಾದ ಸ್ವಾತಿಷ್ಠ,‌ ಮಲ್ಲಿಕಾ ಅಮೋಘ ಅಭಿನಯ, ವೀರ್ ಸಮರ್ಥ್ ಅವರ ಟ್ಯೂನ್ ಸಿನಿರಸಿಕರಿಗೆ ಕನೆಕ್ಟ್ ಆಗುತ್ತಿದೆ. ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಒಳ್ಳೆ ಅಭಿಪ್ರಾಯ ಪಡೆದುಕೊಳ್ಳುತ್ತಿರುವ ಒಂದು ಸರಳ ಪ್ರೇಮಕಥೆ ಸಿನಿಮಾದ ಕ್ರೇಜ್ ನಿಧಾನವಾಗಿ ಗಾಂಧಿನಗರವನ್ನು ಆವರಿಸಿಕೊಳ್ಳುತ್ತಿದೆ.

ಪ್ರೇಮಕಥೆಯನ್ನು ಗುನುಗಿದ ಜನ

ಹಿತಾನುಭವ, ಮನರಂಜನೆಯ ರಸದೌತಣ ನೀಡುತ್ತಿರುವ ಒಂದು ಸರಳ ಪ್ರೇಮಕಥೆ ಸಿನಿಮಾವನ್ನು ಬೆಂಗಳೂರಿನ ಗೊರಗುಂಟೆಪಾಳ್ಯ ಗೋಲ್ಡನ್ ಗ್ರ್ಯಾಂಡ್ ಅಪಾರ್ಟ್ಮೆಂಟ್ ಜನ ಬಸ್ ನಲ್ಲಿ ಒರಿಯನ್ ಮಾಲ್ ಗೆ ಆಗಮಿಸಿ ಸಿನಿಮಾ ನೋಡಿದ್ದಾರೆ. ಚಿತ್ರದ ಪೋಸ್ಟರ್ ಹಿಡಿದು ಗುನುಗುನುಗು ಎಂದು ಹಾಡು ಹೇಳಿ ಸರಳ ಪ್ರೇಮಕಥೆ ಜೈಕಾರ ಹಾಕಿದ್ದಾರೆ. ಇದಪ್ಪ ದೊಡ್ಮನೆ ಕುಡಿ ಸಿನಿಮಾ ಕ್ರೇಜ್ ಎನ್ನುತ್ತಿದೆ ಗಾಂಧಿನಗರ.

ಸರಳ ಪ್ರೇಮಕಥೆ ಮೆಚ್ಚಿದ ಧ್ರುವ

ಒಂದು ಸರಳ ಪ್ರೇಮಕಥೆ ಸಿನಿಮಾವನ್ನು ಸಿನಿ ರಸಿಕರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಮೆಚ್ಚಿಕೊಳ್ಳುತ್ತಿದ್ದಾರೆ. ನಿನ್ನೆ ಬೆಂಗಳೂರಿನ ಮಂತ್ರಿ ಮಾಲ್ ನಲ್ಲಿ ಚಿತ್ರ ನೋಡಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಖುಷಿಪಟ್ಟರು. ವಿನಯ್, ಸುನಿ ಹಾಗೂ ಇಡೀ ತಂಡದ ಶ್ರಮಕ್ಕೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

'ಒಂದು ಸರಳ ಪ್ರೇಮಕಥೆ' ವಿನಯ್ ರಾಜ್‌ಕುಮಾರ್‌ಗೆ ಬ್ರೇಕ್ ಕೊಟ್ಟಿದೆ. ಸಿಂಪಲ್ ಸುನಿ ಮತ್ತೊಂದು ಪ್ರೇಮಕಥೆಯನ್ನು ಪ್ರೇಕ್ಷಕರಿಗೆ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ತಿಳಿ ಹಾಸ್ಯ, ಒನ್‌ಲೈನರ್ ಡೈಲಾಗ್‌ಗಳು ಪ್ರೇಕ್ಷಕರಿಗೆ ಸಖತ್ ಮಜಾ ಕೊಡುತ್ತಿವೆ. ಇಂತಹ ಸುಂದರ ಪ್ರೇಮಕಥೆಗೆ ಶಕ್ತಿಯಾಗಿ ನಿಂತ ನಿರ್ಮಾಪಕ ಮೈಸೂರು ರಮೇಶ್ ಅವರನ್ನು‌ ಜನ ಕೊಂಡಾಡುತ್ತಿದ್ದಾರೆ.

ನಟ, ನಿರ್ದೇಶಕರ ಮಾತು

ಸಿನಿಮಾ ಬಿಡುಗಡೆಗೂ ಮುನ್ನ ನಡೆದ ಪ್ರೀ ರಿಲೀಸ್‌ ಇವೆಂಟ್‌ನಲ್ಲಿ ನಟ ವಿನಯ್ ರಾಜ್‌ಕುಮಾರ್ ಮತ್ತು ಸಿಂಪಲ್ ಸುನಿ ಹೀಗೆ ಮಾತನಾಡಿದ್ದಾರೆ. ಕಳೆದೊಂದು ವಾರದಿಂದ ಸಾಕಷ್ಟು ಪ್ರಚಾರ ಮಾಡಿದ್ದೇವೆ. ತುಂಬಾ ಒಳ್ಳೆ ಪ್ರತಿಕ್ರಿಯೆ ಬಂತು. ಸಾಕಷ್ಟು ಪ್ರೀತಿ ಬಂತು. ಶೂಟಿಂಗ್ ನಂತರ ಎಲ್ಲರನ್ನೂ ನೋಡುತ್ತಿದ್ದೇನೆ. ಖುಷಿಯಾಗುತ್ತಿದೆ. ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಎಂದರೆ ನನಗೆ ತುಂಬಾ ಇಷ್ಟ. ಮನಸಿಗೆ ಸಾಕಷ್ಟು ಸಮಾಧಾನ ಕೊಡುತ್ತದೆ. ಖುಷಿ, ತೃಪ್ತಿ ಸಿಗುತ್ತದೆ. ಅತಿಶಯ ಪಾತ್ರ ಪ್ಲೇ ಮಾಡಲು ತುಂಬಾ ಖುಷಿಕೊಡ್ತು ಎಂದಿದ್ದಾರೆ ವಿನಯ್.

ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ನಮ್ಮ ಸಿನಿಮಾಗೆ ಹಾರೈಸಲು ಬಂದಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು. ಅಶ್ವಿನಿಮೇಡಂ ಸಿನಿಮಾ ಸೆಟ್ ಗೆ ಬಂದಿದ್ರಿ, ಸಾಂಗ್ ರಿಲೀಸ್ ಮಾಡಿಕೊಟ್ರಿ. ಪ್ರತಿಯೊಂದು ಹೆಜ್ಜೆಯಲ್ಲಿ ನಮ್ಮ ಜೊತೆಗೆ ಇರೋದಿಕ್ಕೆ ಧನ್ಯವಾದ. ಒಂದು ಸರಳ ಪ್ರೇಮಕಥೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿದ್ದಾಗ ರಿಜಿಸ್ಟ್ರಾರ್ ಮಾಡಿದ ಟೈಟಲ್ ಎಂದಿದ್ದರು.

ಟಿ20 ವರ್ಲ್ಡ್‌ಕಪ್ 2024