ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯಬೇಕು; ದರ್ಶನ್‌ ಪರ ನಿಂತ ಕನ್ನಡದ ಗಾಯಕಿ
ಕನ್ನಡ ಸುದ್ದಿ  /  ಮನರಂಜನೆ  /  ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯಬೇಕು; ದರ್ಶನ್‌ ಪರ ನಿಂತ ಕನ್ನಡದ ಗಾಯಕಿ

ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯಬೇಕು; ದರ್ಶನ್‌ ಪರ ನಿಂತ ಕನ್ನಡದ ಗಾಯಕಿ

ನಟ ದರ್ಶನ್‌ ತೂಗುದೀಪ ಪರವಾಗಿ ಸ್ಯಾಂಡಲ್‌ವುಡ್‌ನ ಖ್ಯಾತ ಗಾಯಕಿ ಡಾ. ಶಮಿತಾ ಮಲ್ನಾಡ್‌ ಸುದೀರ್ಘ ಬರಹವನ್ನು ಪೋಸ್ಟ್‌ ಮಾಡಿದ್ದಾರೆ. ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡ ಎನ್ನುತ್ತಲೇ ಎಲ್ಲದಕ್ಕೂ ಕಾನೂನಿದೆ ಎಂದಿದ್ದಾರೆ.

ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯಬೇಕು; ದರ್ಶನ್‌ ಪರ ನಿಂತ ಕನ್ನಡದ ಗಾಯಕಿ
ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯಬೇಕು; ದರ್ಶನ್‌ ಪರ ನಿಂತ ಕನ್ನಡದ ಗಾಯಕಿ

Shamitha Malnad on Darshan Thoogudeepa: ಕೊಲೆ ಆರೋಪದಡಿ ನಟ ದರ್ಶನ್‌ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಅವರ ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ರವಾನಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಲಾಗಿತ್ತು ಎಂಬ ಗಂಭೀರ ಆರೋಪ ದರ್ಶನ್‌ ಮತ್ತವರ ಸಹಚರರ ಮೇಲಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್‌ನ ಮುಂದಿನ ಆದೇಶದ ವರೆಗೂ ಎಲ್ಲರೂ ಸದ್ಯ ಜೈಲಿನಲ್ಲಿದ್ದಾರೆ.

ಈ ನಡುವೆ ನಟ ದರ್ಶನ್‌ ಪರವಾಗಿ ಕನ್ನಡದ ಚಿತ್ರರಂಗದವರು ಅಲ್ಲೊಬ್ಬರು ಇಲ್ಲೊಬ್ಬರು ಎಂಬಂತೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅತ್ಯಾಪ್ತರು ಎನಿಸಿಕೊಂಡವರು ಈ ವರೆಗೂ ತುಟಿ ಬಿಚ್ಚಿಲ್ಲ. ಈ ನಡುವೆ ಸ್ಯಾಂಡಲ್‌ನ ಖ್ಯಾತ ಗಾಯಕಿ, ಇದೀಗ ದರ್ಶನ್‌ ಪರವಾಗಿ ಮಾತನಾಡಿದ್ದಾರೆ. ಏನೇ ಆದರೂ ನಾನು ದರ್ಶನ್‌ ಪರ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್‌ ಹಂಚಿಕೊಂಡಿದ್ದಾರೆ. ಗಾಯಕಿಯ ಪೋಸ್ಟ್‌ಗೆ ದರ್ಶನ್‌ ಫ್ಯಾನ್ಸ್‌ ಕಡೆಯಿಂದಲೂ ಮೆಚ್ಚುಗೆ ಸಿಕ್ಕಿದೆ.

ಶಮಿತಾ ಮಲ್ನಾಡ್‌ ಪೋಸ್ಟ್‌ನಲ್ಲೇನಿದೆ?

"ಮನಸೇ ಮನಸೇ.. ಸೋಲೋ ಗೆಲುವೋ, ನೋವೋ ನಲಿವೋ ಏಳೋ ಬೀಳೋ,,ಕಲ್ಲೋ ಮುಳ್ಳೋ ಜೀವನದ ಹಾದಿ ಸುಲಭವಲ್ಲ.. ಯಶಸ್ಸಿನ ಹಾದಿ ಸುಗಮವಲ್ಲ... ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು ದರ್ಶನ್ ತೂಗುದೀಪ.. Darshan Thoogudeepa Srinivas. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು. ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು. ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡ"

ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ

“ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು. ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ, ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು. ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು. ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು.. ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ.. ಶಿಕ್ಷೆ ಇದೇ..”

“ಅಕಾಲ ನಿಧನರಾದ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ. ನೆರವು, ಆಸರೆ, ನ್ಯಾಯ ಬೇಕಿದೆ. ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ. ಎಲ್ಲರ ಮೇಲೆ ಗೌರವವಿರಲಿ. ಕಾಮೆಂಟ್ಸ್, ಪೋಸ್ಟ್ ಮೇಲೆ ಹಿಡಿತವಿರಲಿ”

“ದರ್ಶನ್ ಅಣ್ಣಾ ಕನ್ನಡದ ಕುಟುಂಬ, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ, ಕಲಾವಿದರ ಕುಟುಂಬ, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ ಅಲ್ಲವೇ? ಹಾಗೆ ಪ್ರೀತಿ ಅಭಿಮಾನ ಬದಲಾಗದು. ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು. ನ್ಯಾಯ ಎಲ್ಲರಿಗೂ ಒಂದೇ, ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ, ಸಂಕಟವಾಗಿದೆ”

ಚಿನ್ನ ಸದ್ಯ ಕುದಿವ ಕುಲುಮೆಯಲ್ಲಿದೆ

“ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ. ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು. ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು. ಕಾಯೋಣ, ಸಮಾಧಾನದಿಂದ ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ” ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

Whats_app_banner