ಕನಕಪುರ ರಸ್ತೆಯಲ್ಲಿ ಕಾಟೇರನಿಗಾಗಿ ಮಿನಿ ಹಳ್ಳಿ ಸೃಷ್ಟಿ; 100 ದಿನಗಳ ಶೂಟಿಂಗ್‌ ಮುಗಿಸಿದ ದರ್ಶನ್‌
ಕನ್ನಡ ಸುದ್ದಿ  /  ಮನರಂಜನೆ  /  ಕನಕಪುರ ರಸ್ತೆಯಲ್ಲಿ ಕಾಟೇರನಿಗಾಗಿ ಮಿನಿ ಹಳ್ಳಿ ಸೃಷ್ಟಿ; 100 ದಿನಗಳ ಶೂಟಿಂಗ್‌ ಮುಗಿಸಿದ ದರ್ಶನ್‌

ಕನಕಪುರ ರಸ್ತೆಯಲ್ಲಿ ಕಾಟೇರನಿಗಾಗಿ ಮಿನಿ ಹಳ್ಳಿ ಸೃಷ್ಟಿ; 100 ದಿನಗಳ ಶೂಟಿಂಗ್‌ ಮುಗಿಸಿದ ದರ್ಶನ್‌

ದರ್ಶನ್‌ ನಾಯಕನಾಗಿ ನಟಿಸುತ್ತಿರುವ ಕಾಟೇರ ಚಿತ್ರದ ಬಹುತೇಕ ಶೂಟಿಂಗ್‌ ಮುಕ್ತಾಯವಾಗಿದೆ. ನೂರು ದಿನಗಳ ಕಾಲ ನಡೆದ ಚಿತ್ರೀಕರಣದಲ್ಲಿ ನಟ ದರ್ಶನ್‌ 70 ದಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

ಕನಕಪುರ ರಸ್ತೆಯಲ್ಲಿ ಕಾಟೇರನಿಗಾಗಿ ಮಿನಿ ಹಳ್ಳಿ ಸೃಷ್ಟಿ; 100 ದಿನಗಳ ಶೂಟಿಂಗ್‌ ಮುಗಿಸಿದ ದರ್ಶನ್‌
ಕನಕಪುರ ರಸ್ತೆಯಲ್ಲಿ ಕಾಟೇರನಿಗಾಗಿ ಮಿನಿ ಹಳ್ಳಿ ಸೃಷ್ಟಿ; 100 ದಿನಗಳ ಶೂಟಿಂಗ್‌ ಮುಗಿಸಿದ ದರ್ಶನ್‌

Kaatera: ಸ್ಯಾಂಡಲ್‌ವುಡ್‌ ನಟ ದರ್ಶನ್‌ ನಟನೆಯ ಕಾಟೇರ್‌ ಸಿನಿಮಾ ಬಹುತೇಕ ಶೂಟಿಂಗ್‌ ಮುಗಿಸಿಕೊಂಡಿದೆ. ತರುಣ್‌ ಸುಧೀರ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕಾಟೇರ ಚಿತ್ರ ಮೊದಲ ಪತ್ರಿಕಾಗೋಷ್ಠಿಯ ಮೂಲಕ ಎಲ್ಲರ ಮುಂದೆ ಬಂದಿತ್ತು. ಸಿನಿಮಾ ಮೂಡಿಬಂದ ರೀತಿಯ ಬಗ್ಗೆಯೂ ಎಲ್ಲರೂ ಹೇಳಿಕೊಂಡರು. ದರ್ಶನ್‌ ಅವರಿಗಾಗಿಯೇ ಬರೆದ ಕಥೆಯಿದು ಎಂದು ಮಾತು ಆರಂಭಿಸಿದ ತರುಣ್‌, ಸಿನಿಮಾ ಬಗ್ಗೆಯೂ ಹೇಳಿಕೊಂಡರು.

"ಗುರು ಶಿಷ್ಯರು" ಚಿತ್ರದ ನಂತರ ನಾನು ಹಾಗೂ ಜಡೇಶ್ ಅವರು ಸೇರಿ ಈ ಚಿತ್ರದ ಕಥೆ ಬರೆದ್ದೆವು. ದರ್ಶನ್ ಅವರಿಗಾಗಿಯೇ ಬರೆದ ಕಥೆಯಿದು. ಆನಂತರ ದರ್ಶನ್ ಅವರು ರಾಕ್‌ಲೈನ್ ವೆಂಕಟೇಶ್ ಅವರಿಗೆ ಈ ಕಥೆ ಹೇಳಿ ಎಂದರು. ರಾಕ್ ಲೈನ್ ಸರ್ ಕಥೆ ಮೆಚ್ಚಿಕೊಂಡು ಚಿತ್ರವನ್ನು ಪ್ರಾರಂಭಿಸಿದರು. ಹಿರಿಯ ನಟಿ ಮಾಲಾಶ್ರೀ ಅವರ ಮಗಳು ಆರಾಧನಾ ಈ ಚಿತ್ರದ ನಾಯಕಿ ಎಂದು ನಿರ್ಮಾಪಕರು, ದರ್ಶನ್ ಅವರು ಹಾಗೂ ನಾನು ಸೇರಿ ಆಯ್ಕೆ ಮಾಡಿದ್ದೆವು. ಆರಾಧನಾ ಅದ್ಭುತ ನಟಿ. ಬಹುತೇಕ ಎಲ್ಲಾ ಸನ್ನಿವೇಶಗಳನ್ನು ಒಂದೇ ಟೇಕ್‌ನಲ್ಲಿ ಮುಗಿಸಿದ್ದಾರೆ. ಈ ಚಿತ್ರ 1970ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು, ಕನಕಪುರ ರಸ್ತೆಯಲ್ಲಿ ಅದ್ದೂರಿ ಹಳ್ಳಿ ಸೆಟ್ ಹಾಕಲಾಗಿದೆ‌. ನೂರು ದಿನಗಳ ಚಿತ್ರೀಕರಣ ಪೂರ್ಣವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ" ಎಂದರು.

ನೂರು ದಿನಗಳ ಚಿತ್ರೀಕರಣದಲ್ಲಿ ನಾನು, ಎಪ್ಪತ್ತೊಂದು ದಿನಗಳ ಕಾಲ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದೇನೆ. ರಾಕ್‌ಲೈನ್ ವೆಂಕಟೇಶ್ ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ‌. ತರುಣ್ ಹಾಗೂ ಜಡೇಶ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಮಾಲಾಶ್ರೀ ಅವರ ಮಗಳು ಆರಾಧನಾ ನಾಯಕಿಯಾಗಿ ನಟಿಸಿದ್ದಾರೆ. ಎಂತಹ ಸನ್ನಿವೇಶಗಳನ್ನು ಒಂದೇ ಟೇಕ್‌ನಲ್ಲಿ ಅಭಿನಯಿಸುವ ಕಲಾವಿದೆ ಅವರು. ಹಿರಿಯ ನಟರಾದ ಅವಿನಾಶ್, ಜಗಪತಿ ಬಾಬು, ವಿನೋದ್ ಆಳ್ವ, ಕುಮಾರ್ ಗೋವಿಂದ್ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ. ಸುಧಾಕರ್ ಅವರ ಛಾಯಾಗ್ರಹಣ ಅದ್ಭುತವಾಗಿದ್ದು, ಈ ಚಿತ್ರದ ಛಾಯಾಗ್ರಹಣಕ್ಕಾಗಿ ಅವರಿಗೆ ಪ್ರಶಸ್ತಿ ಬರಬಹುದು ಎಂಬುದು ನನ್ನ ಅನಿಸಿಕೆ" ಎಂದರು ದರ್ಶನ್.‌

ಇದು ನನ್ನ ಮೊದಲ ಚಿತ್ರ. ಪಾತ್ರ ಚೆನ್ನಾಗಿದೆ. ಅವಕಾಶ ನೀಡಿದ ರಾಕ್ ಲೈನ್ ವೆಂಕಟೇಶ್, ತರುಣ್ ಸುಧೀರ್ ಹಾಗೂ ದರ್ಶನ್ ಅವರಿಗೆ ನನ್ನ ಧನ್ಯವಾದ ಎಂಬುದು ನಾಯಕಿ ಆರಾಧನಾ ಮಾತು. ಹಿರಿಯ ನಟರಾದ ಅವಿನಾಶ್, ಕುಮಾರ್ ಗೋವಿಂದ್, ವಿನೋದ್ ಆಳ್ವಾ, ಛಾಯಾಗ್ರಾಹಕ ಸುಧಾಕರ್, ತರುಣ್ ಸುಧೀರ್ ಅವರೊಂದಿಗೆ ಕಥೆ, ಚಿತ್ರಕಥೆ ಬರೆದಿರುವ ಜಡೇಶ್, ಸಂಭಾಷಣೆ ಬರೆದಿರುವ ಮಾಸ್ತಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಹಿರಿಯ ನಟಿ ಮಾಲಾಶ್ರೀ ಚಿತ್ರತಂಡಕ್ಕೆ ಶುಭ ಕೋರಿದರು.

ಮನರಂಜನೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

Whats_app_banner