Tomy Movie: ಸುದೀಪ್ ಶಿಷ್ಯ ಆಶು ಈಗ ಟಾಮಿ ಚಿತ್ರದ ನಾಯಕ, ನಿರ್ದೇಶಕ; ಕಿಚ್ಚನಿಂದ ಫಸ್ಟ್‌ ಲುಕ್‌ ಬಿಡುಗಡೆ-sandalwood news tomy kannada movie first look released by actor kichcha sudeep entertainment news in kannada mnk ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  Tomy Movie: ಸುದೀಪ್ ಶಿಷ್ಯ ಆಶು ಈಗ ಟಾಮಿ ಚಿತ್ರದ ನಾಯಕ, ನಿರ್ದೇಶಕ; ಕಿಚ್ಚನಿಂದ ಫಸ್ಟ್‌ ಲುಕ್‌ ಬಿಡುಗಡೆ

Tomy Movie: ಸುದೀಪ್ ಶಿಷ್ಯ ಆಶು ಈಗ ಟಾಮಿ ಚಿತ್ರದ ನಾಯಕ, ನಿರ್ದೇಶಕ; ಕಿಚ್ಚನಿಂದ ಫಸ್ಟ್‌ ಲುಕ್‌ ಬಿಡುಗಡೆ

ಕಳೆದ ಏಳೆಂಟು ವರ್ಷಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಸಿನಿಮಾಗಳಿಗೆ ಅದರಲ್ಲೂ ಕಿಚ್ಚ ಸುದೀಪ್ ನಟನೆಯ ಚಿತ್ರಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ ಆಶು, ಇದೀಗ ಟಾಮಿ ಸಿನಿಮಾ ಮೂಲಕ ನಾಯಕನಾಗಲು ಹೊರಟಿದ್ದಾರೆ. ಈ ಚಿತ್ರಕ್ಕೆ ನಿರ್ದೇಶನವೂ ಇವರದ್ದೆ.

ಟಾಮಿ ಚಿತ್ರದ ಫಸ್ಟ್‌ ಲುಕ್‌ಅನ್ನು ಕಿಚ್ಚ ಸುದೀಪ್‌ ಬಿಡುಗಡೆ ಮಾಡಿದ್ದಾರೆ.
ಟಾಮಿ ಚಿತ್ರದ ಫಸ್ಟ್‌ ಲುಕ್‌ಅನ್ನು ಕಿಚ್ಚ ಸುದೀಪ್‌ ಬಿಡುಗಡೆ ಮಾಡಿದ್ದಾರೆ.

Tomy Kannada Movie: ಹೊಸ ಸಿನಿಮಾಸಕ್ತರನ್ನು ಪ್ರೋತ್ಸಾಹಿಸುವ ಕೆಲಸವನ್ನು ನಟ ಕಿಚ್ಚ ಸುದೀಪ್‌ ಮಾಡುತ್ತಲೇ ಬಂದಿದ್ದಾರೆ. ಇದೀಗ ಸುದೀಪ್‌ ಅವರ ಜತೆ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡಿದ ಅನುಭವ ಇರುವ ಆಶು, ಹೊಸ ಸಿನಿಮಾ ಮೂಲಕ ನಾಯಕನಾಗಲು ಹೊರಟಿದ್ದಾರೆ. ಅವರ ಮೊದಲ ಸಿನಿಮಾ ಪ್ರಯತ್ನಕ್ಕೆ ಟಾಮಿ ಎಂದು ಹೆಸರಿಟ್ಟಿದ್ದು, ಗಣೇಶ ಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್‌ ಲುಕ್‌ಅನ್ನು ಕಿಚ್ಚನ ಕೈಯಿಂದ ಬಿಡುಗಡೆ ಮಾಡಿಸಿದೆ ಚಿತ್ರತಂಡ. ಅಂದಹಾಗೆ ಸಂಪೂರ್ಣ ಹೊಸಬರೇ ಸೇರಿಕೊಂಡು ಟಾಮಿ ಸಿನಿಮಾ ಮಾಡುತ್ತಿರುವುದು ವಿಶೇಷ.

ಇಲ್ಲಿ ನಾಯಕ ಶ್ವಾನ ಪ್ರಿಯ

'ಟಾಮಿ' ಶ್ವಾನ ಪ್ರಿಯರಿಗೆ ಈ ಹೆಸರು ಮತ್ತಷ್ಟು ಆಪ್ತ. ಈ ಚಿತ್ರಕ್ಕೆ ಆಶು ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚುತ್ತಿದ್ದಾರೆ. ಮೊದಲ ಬಾರಿಗೆ ನಿರ್ದೇಶನದ ಕ್ಯಾಪ್ ತೊಡುವ ಜೊತೆಗೆ ಫಸ್ಟ್ ಟೈಮ್ ತೆರೆ ಮೇಲೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಿರ್ದೇಶಕ ನಾಯಕ ಆಶು ಅವರಿಗೆ ಚೊಚ್ಚಲ ಸಿನಿಮಾ ಅಂದ ಮಾತ್ರಕ್ಕೆ ಚಿತ್ರರಂಗವೇನು ಹೊಸದೇನಲ್ಲ. ಕಳೆದ ಏಳೆಂಟು ವರ್ಷಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಸಿನಿಮಾಗಳಿಗೆ ಅದರಲ್ಲೂ ಕಿಚ್ಚ ಸುದೀಪ್ ನಟನೆಯ ಚಿತ್ರಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ ಆಶು.

ಕಿಚ್ಚನ ಜತೆ ಕೆಲಸ ಮಾಡಿದ ಆಶು

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ 'ಮುಕುಂದ ಮುರಾರಿ', ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುದೀಪ್ ನಟನೆಯ 'ಅಂಬಿ ನಿಂಗೆ ವಯಸ್ಸಾಯ್ತೊ', ಕೋಟಿಗೊಬ್ಬ-3 ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ ಆಶು. ಸದ್ಯ ರಿಲೀಸ್ ಆಗಿರುವ ಪೋಸ್ಟರ್‌ನಲ್ಲಿ ನಾಯಕ ಆಶು, ಜೊತೆಯಲ್ಲಿ ನಾಯಿ ಹಾಗೂ RX ಬೈಕ್ ನೋಡಬಹುದು. ಪೋಸ್ಟರ್ ನೋಡುತ್ತಿದ್ದರೆ ನಾಯಕ ನಾಯಿ ಪ್ರೇಮಿ ಜೊತೆಗೆ ಆರ್ ಎಕ್ಸ್ ಬೈಕ್ ಲವರ್ ಕೂಡ ಆಗಿರುತ್ತಾನೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

ಎಲಿಪಾಸ್ ಇಂಡಿಯಾ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ಸಚಿನ್ ಶ್ಯಾಮ್ ಸುಂದರ್ ಹಾಗೂ ಅನೇಕ ಸ್ನೇಹಿತರು ಸೇರಿ ಬಂಡವಾಳ ಹೂಡುತ್ತಿದ್ದಾರೆ. ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ಪ್ರದ್ಯುತನ್ 'ಟಾಮಿ' ಸಿನಿಮಾಗೂ ಸಂಗೀತ ನೀಡುತ್ತಿದ್ದಾರೆ.

mysore-dasara_Entry_Point