‘ಐದಾರು ಮದುವೆ ಆಗು ಅಂದ್ರೆ ಆಗಿಬಿಡಬಹುದು, ಆದರೆ ಒಂದು ಸಿನಿಮಾ ನಿರ್ದೇಶನ ಮಾಡುವುದಿದೆಯಲ್ಲ ಅದು ಅದಕ್ಕಿಂತ ಕಷ್ಟ’: ಉಪೇಂದ್ರ-sandalwood news ui update five or six marriages can happen but directing a movie is very difficult says upendra mnk ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  ‘ಐದಾರು ಮದುವೆ ಆಗು ಅಂದ್ರೆ ಆಗಿಬಿಡಬಹುದು, ಆದರೆ ಒಂದು ಸಿನಿಮಾ ನಿರ್ದೇಶನ ಮಾಡುವುದಿದೆಯಲ್ಲ ಅದು ಅದಕ್ಕಿಂತ ಕಷ್ಟ’: ಉಪೇಂದ್ರ

‘ಐದಾರು ಮದುವೆ ಆಗು ಅಂದ್ರೆ ಆಗಿಬಿಡಬಹುದು, ಆದರೆ ಒಂದು ಸಿನಿಮಾ ನಿರ್ದೇಶನ ಮಾಡುವುದಿದೆಯಲ್ಲ ಅದು ಅದಕ್ಕಿಂತ ಕಷ್ಟ’: ಉಪೇಂದ್ರ

ಉಪೇಂದ್ರ ಬರ್ತ್‌ಡೇಗೆ ಅವರ ನಿರ್ದೇಶನದ ಬಹುನಿರೀಕ್ಷಿತ UI ಚಿತ್ರದ ಮೇಕಿಂಗ್‌ ವಿಡಿಯೋ ಝಲಕ್‌ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ನಡುವ, ಅರ್ಜುನ್‌ ಜನ್ಯ ನಿರ್ದೇಶನದ 45 ಚಿತ್ರದ ಫಸ್ಟ್‌ ಲುಕ್‌ ಸಹ ಹೊರಬಿದ್ದಿದೆ.

ಉಪೇಂದ್ರ ಹುಟ್ಟುಹಬ್ಬಕ್ಕೆ UI ಮತ್ತು 45 ಚಿತ್ರತಂಡಗಳಿಂದ ಬಿಡುಗಡೆಯಾದ ಹೊಸ ಪೋಸ್ಟರ್‌ಗಳಿವು.
ಉಪೇಂದ್ರ ಹುಟ್ಟುಹಬ್ಬಕ್ಕೆ UI ಮತ್ತು 45 ಚಿತ್ರತಂಡಗಳಿಂದ ಬಿಡುಗಡೆಯಾದ ಹೊಸ ಪೋಸ್ಟರ್‌ಗಳಿವು.

UI Release Date: ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌ ಉಪೇಂದ್ರ ದಶಕದ ಬಳಿಕ ಮತ್ತೆ ನಿರ್ದೇಶಕನ ಕ್ಯಾಪ್‌ ಧರಿಸಿದ್ದಾರೆ. UI ಸಿನಿಮಾ ಮೂಲಕ ಮತ್ತೆ ಅವರ ಆಗಮನ ಆಗುತ್ತಿದೆ. ಈಗಾಗಲೇ ಬಹುತೇಕ ಶೂಟಿಂಗ್‌ ಕೆಲಸಗಳನ್ನು ಮುಗಿಸಿಕೊಂಡಿರುವ UI ಚಿತ್ರ, ಸದ್ಯ ಕೊನೇ ಹಂತದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಈ ನಡುವೆ ಈ ಸಿನಿಮಾ ಬಿಡುಗಡೆ ಯಾವಾಗ ಎಂಬ ಬಗ್ಗೆಯೂ ಪ್ರೇಕ್ಷಕನನ್ನು ಕುತೂಹಲದಲ್ಲಿಟ್ಟಿದೆ. ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದೆಯಾದರೂ, ದಿನಾಂಕ ಮಾತ್ರ ಅಧಿಕೃತವಾಗಿಲ್ಲ. ಈ ನಡುವೆ, ಇದೇ ಸಿನಿಮಾ ಬಗ್ಗೆ ಮತ್ತಷ್ಟು ಮಾತನಾಡಿದ್ದಾರೆ ಉಪೇಂದ್ರ.

ಹುಳ ತೆಗೆಯುವ ಕೆಲಸ

ಸೆಪ್ಟೆಂಬರ್‌ 18ರಂದು ಉಪೇಂದ್ರ ಸರಳವಾಗಿ ತಮ್ಮ ಹುಟ್ಟುಹಬ್ಬ ಮನೆಯಲ್ಲಿಯೇ ಆಚರಿಸಿಕೊಂಡಿದ್ದಾರೆ. ಈ ವೇಳೆ UI ಸಿನಿಮಾದ ಬಗ್ಗೆ ಮಾಹಿತಿ ನೀಡಲೆಂದೇ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, "ಜನರು ಯಾವಗಲೂ ನನಗೆ ತಲೆಯಲ್ಲಿ ಹುಳ ಬಿಡುತ್ತೀರಾ ಎನ್ನುತ್ತಾರೆ. ಅದರೆ ಈ ಚಿತ್ರದಲ್ಲಿ ಹುಳ ತೆಗೆಯುವ ಕೆಲಸ ಮಾಡುತ್ತಿದ್ದೇನೆ. ಪ್ರೇಕ್ಷಕರು ನಮಗಿಂತ ತುಂಬಾ ಬುದ್ದಿವಂತರು. ಅವರ ನಿರೀಕ್ಷೆ ಹೆಚ್ಚು ಇರುತ್ತದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಎಲ್ಲಾ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ UI ಉತ್ತಮ ಚಿತ್ರವಾಗಿ ಬಂದಿದೆ" ಎಂದರು.

ಐದಾರು ಮದ್ವೆ ಆಗಿಬಿಡಬಹುದು.. ಆದ್ರೆ,

ನನ್ನ‌ ಹುಟ್ಟುಹಬ್ಬಕ್ಕೆ ಹಾರೈಸಿರುವ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಮಾತನಾಡಿದ ಉಪೇಂದ್ರ, "ಐದಾರು ಮದುವೆ ಆಗಬಹುದು. ಆದರೆ ಒಂದು ಚಿತ್ರ ನಿರ್ದೇಶನ ಮಾಡುವುದು ಅದಕ್ಕಿಂತ ಕಷ್ಟ. ಇನ್ನೂ ನಾನು ಬಹಳ ವರ್ಷಗಳ ನಂತರ ನಿರ್ದೇಶಿಸಿರುವ UI ಚಿತ್ರ ಬಿಡುಗಡೆಯ ಹಂತಕ್ಕೆ ತಲುಪಿದೆ. ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿರುವ ನಿರ್ಮಾಪಕರು ಅಕ್ಟೋಬರ್‌ನಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ. ತಾಂತ್ರಿಕ (ಟೆಕ್ನಿಕಲ್) ಕಾರ್ಯಗಳು ಹೆಚ್ಚಾಗಿರುವುದು ಹಾಗೂ ಸಿನಿಮಾ ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ಬರುತ್ತಿರುವುದರಿಂದ ಬಿಡುಗಡೆ ಸ್ವಲ್ಪ ವಿಳಂಬವಾಗುತ್ತಿದೆ" ಎಂದು ಅಧಿಕೃತ ದಿನಾಂಕದ ಬಗ್ಗೆ ಹೇಳಲಿಲ್ಲ ಉಪೇಂದ್ರ.

ಶೀಘ್ರದಲ್ಲಿ ಬಿಡುಗಡೆ ದಿನಾಂಕ ಪ್ರಕಟ

25 ವರ್ಷಗಳ ನನ್ನ ಸಿನಿ ಜರ್ನಿಯಲ್ಲಿ ಶಿವಣ್ಣ ಅವರ ಜೊತೆಗಿನ ಒಡನಾಟ ಹಾಗೂ ಉಪೇಂದ್ರ ಅವರು ನಮ್ಮ ಬ್ಯಾನರ್‌ನ ಚಿತ್ರವನ್ನು ನಿರ್ದೇಶಿಸಿರುವುದು ನನಗೆ ತುಂಬಾ ಖುಷಿಕೊಟ್ಟ ವಿಚಾರ. ಎಲ್ಲರಂತೆ ನಾನು ಉಪೇಂದ್ರ ಅವರ ನಿರ್ದೇಶನಕ್ಕೆ ಅಭಿಮಾನಿ. ಈ ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಅವರ ಅಭಿಮಾನಿಗಳಂತೆ ನನಗೂ ಇದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು ನಿರ್ಮಾಪಕ ಕೆ.ಪಿ. ಶ್ರೀಕಾಂತ್.

ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ನಿರ್ಮಾಪಕ ಜಿ.ಮನೋಹರನ್, ಇದು ಪ್ಯಾನ್ ಇಂಡಿಯಾ ಚಿತ್ರವಾಗಿರುವುದರಿಂದ ಬಿಡುಗಡೆ ಸ್ವಲ್ಪ ತಡವಾಯಿತು. ಅಕ್ಟೋಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದರು. ಸಹ ನಿರ್ಮಾಪಕರಾದ ನವೀನ್, ತುಳಸಿರಾಮ ನಾಯ್ಡು(ಲಹರಿ ವೇಲು), ನಾಯಕಿ ರೀಶ್ಮಾ ನಾಣಯ್ಯ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಅವರು "UI" ಚಿತ್ರದ ಬಗ್ಗೆ ಮಾತನಾಡಿದರು.

ಬರ್ತ್‌ಡೇಗೆ 45 ಚಿತ್ರದ ವಿಶೇಷ ಪೋಸ್ಟರ್

ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, 45 ಚಿತ್ರದಲ್ಲಿನ ಉಪೇಂದ್ರ ಅವರ ಲುಕ್‌ ಬಿಡುಗಡೆ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಮಾ ರಮೇಶ್ ರೆಡ್ಡಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಉಪೇಂದ್ರ ಹುಟ್ಟುಹಬ್ಬ ನಿಮಿತ್ತ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ "45" ಚಿತ್ರತಂಡ ಉಪೇಂದ್ರಗೆ ಬರ್ತ್‌ಡೇ ಶುಭಾಶಯ ತಿಳಿಸಿದೆ.

mysore-dasara_Entry_Point