ವಿಜಯ ರಾಘವೇಂದ್ರ ನಟನೆಯ ಗ್ರೇ ಗೇಮ್ಸ್‌ ಸಿನಿಮಾಕ್ಕೆ 25 ದಿನಗಳ ಸಂಭ್ರಮ; ಥ್ಯಾಂಕ್ಸ್‌ ಹೇಳಿದ ಆಯನ ಖ್ಯಾತಿಯ ಗಂಗಾಧರ್‌ ಸಾಲಿಮಠ
ಕನ್ನಡ ಸುದ್ದಿ  /  ಮನರಂಜನೆ  /  ವಿಜಯ ರಾಘವೇಂದ್ರ ನಟನೆಯ ಗ್ರೇ ಗೇಮ್ಸ್‌ ಸಿನಿಮಾಕ್ಕೆ 25 ದಿನಗಳ ಸಂಭ್ರಮ; ಥ್ಯಾಂಕ್ಸ್‌ ಹೇಳಿದ ಆಯನ ಖ್ಯಾತಿಯ ಗಂಗಾಧರ್‌ ಸಾಲಿಮಠ

ವಿಜಯ ರಾಘವೇಂದ್ರ ನಟನೆಯ ಗ್ರೇ ಗೇಮ್ಸ್‌ ಸಿನಿಮಾಕ್ಕೆ 25 ದಿನಗಳ ಸಂಭ್ರಮ; ಥ್ಯಾಂಕ್ಸ್‌ ಹೇಳಿದ ಆಯನ ಖ್ಯಾತಿಯ ಗಂಗಾಧರ್‌ ಸಾಲಿಮಠ

ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ "ಚಿನ್ನಾರಿ ಮುತ್ತ" ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ "ಗ್ರೇ ಗೇಮ್ಸ್" ಚಿತ್ರ ಚಿತ್ರಮಂದಿರಗಳಲ್ಲಿ ಭರ್ತಿ 25 ದಿನಗಳನ್ನು ಪೂರೈಸಿದೆ. ಈ ಸಿನಿಮಾದಲ್ಲಿ ವಿಜಯ್‌ ರಾಘವೇಂದ್ರ ಜತೆಗೆ ಭಾವನಾ ರಾವ್‌, ಶ್ರುತಿ ಪ್ರಕಾಶ್‌, ಅಪರ್ಣಾ ವಸ್ತ್ರೇಯ, ರವಿ ಭಟ್‌ ನಟಿಸಿದ್ದಾರೆ.

ವಿಜಯ ರಾಘವೇಂದ್ರ ನಟನೆಯ ಗ್ರೇ ಗೇಮ್ಸ್‌ ಸಿನಿಮಾಕ್ಕೆ 25 ದಿನಗಳ ಸಂಭ್ರಮ
ವಿಜಯ ರಾಘವೇಂದ್ರ ನಟನೆಯ ಗ್ರೇ ಗೇಮ್ಸ್‌ ಸಿನಿಮಾಕ್ಕೆ 25 ದಿನಗಳ ಸಂಭ್ರಮ

ಬೆಂಗಳೂರು: ಆನಂದ್ ಮುಗದ್ ನಿರ್ಮಾಣದ, ಪ್ರಶಸ್ತಿ ವಿಜೇತ "ಆಯನ" ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ "ಚಿನ್ನಾರಿ ಮುತ್ತ" ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ "ಗ್ರೇ ಗೇಮ್ಸ್" ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಈ ಸಿನಿಮಾ ಚಿತ್ರಮಂದಿರಗಳಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ ಇತ್ತೀಚಿಗೆ ಈ ಚಿತ್ರ ಯಶಸ್ವಿಯಾಗಿ ಇಪ್ಪತ್ತೈದು ದಿ‌ನ ಪೂರೈಸಿರುವ ನಿಟ್ಟಿನಲ್ಲಿ ಚಿತ್ರತಂಡವು ಸಂಭ್ರಮಿಸಿತ್ತು. ನಿರ್ಮಾಪಕರು ಚಿತ್ರತಂಡದವರಿಗೆ ಸ್ಮರಣಿಕೆ ನೀಡಿ ಗೌರವಿಸಿದ್ದಾರೆ.

"ನಮ್ಮ ಚಿತ್ರ ಬಿಡುಗಡೆಯಾಗಿ ಇಂದಿಗೆ ಸರಿಯಾಗಿ ಇಪ್ಪತ್ತೈದು ದಿನ. ಇಂದಿಗೂ ನಮ್ಮ ಚಿತ್ರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ 26 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ‌. ನಾವು ಏನೇ ಪ್ರಚಾರ ಮಾಡಿದರು, ಜನರ ಬಾಯಿಯಿಂದ ನಮ್ಮ ಚಿತ್ರದ ಬಗ್ಗೆ ಬರುವ ಅಭಿಪ್ರಾಯವೇ ಅಂತಿಮ. ಅವರು ನಮ್ಮ ಚಿತ್ರದ ಬಗ್ಗೆ ಒಬ್ಬರಿಂದ ಒಬ್ಬರಿಗೆ ಹೇಳುತ್ತಿರುವುದರಿಂದ ನಮ್ಮ ಚಿತ್ರ ಇಪ್ಪತ್ತೈದು ದಿನಗಳವರೆಗೂ ಪ್ರದರ್ಶನ ಕಾಣಲು ಸಾಧ್ಯವಾಗುತ್ತಿದೆ. ಚಿತ್ರದ ಗೆಲುವನ್ನು ಸಾಧ್ಯವಾಗಿಸಿದ ಪ್ರೇಕ್ಷಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ" ಎಂದು ನಿರ್ದೇಶಕ ಗಂಗಾಧರ್ ಸಾಲಿಮಠ ಹೇಳಿದ್ದಾರೆ.

"ಸಿನಿಮಾ ಮಾಡುವುದು ನನ್ನ ಕನಸ್ಸಾಗಿತ್ತು. ಅದು ನನಸ್ಸಾಗಿದೆ. ಚಿತ್ರ ಇಪ್ಪತ್ತೈದನೇ ದಿನದ ಹತ್ತಿರ ಬಂದಿರುವುದು ಮತ್ತಷ್ಟು ಸಂತೋಷವಾಗಿದೆ‌. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ" ಎಂದು ನಿರ್ಮಾಪಕ ಆನಂದ್ ಮುಗದ್ ಹೇಳಿದ್ದಾರೆ.

"ನನಗೆ ಮುಹೂರ್ತ ಹಾಗೂ ಬಿಡುಗಡೆಗೆ ಮುಂಚಿನ ಕಾರ್ಯಕ್ರಮಗಳಲ್ಲಿ ಮಾತನಾಡಬೇಕಾದರೆ, ಚಿತ್ರ ತೆರೆಕಂಡು ಎರಡುವಾರಗಳು ಪ್ರದರ್ಶನ ಕಂಡ ಮೇಲೆ ಮಾತನಾಡಿದರೆ ಹೆಚ್ಚು ವಿಷಯ ಇರುತ್ತದೆ ಅನಿಸುತ್ತಿತ್ತು. ಆ ಸಂದರ್ಭ ಈಗ ಬಂದಿದೆ. "ಗ್ರೇ ಗೇಮ್ಸ್" ಅನ್ನು ಜನ ಮೆಚ್ಚಿಕೊಂಡಿದ್ದಾರೆ" ಎಂದು ನಟ ವಿಜಯ ರಾಘವೇಂದ್ರ ಹೇಳಿದ್ದಾರೆ.

"ನನ್ನ ಮಾವ ವಿಜಯ್ ರಾಘವೇಂದ್ರ ಅವರಿಂದ ನನಗೆ ಈ ಚಿತ್ರದಲ್ಲಿ ನಟಿಸಲು ಅವಕಾಶ ದೊರೆಯಿತು. ನಿರ್ದೇಶಕರು ನಟನೆ ಹೇಳಿಕೊಟ್ಟರು. ನಿರ್ಮಾಪಕರು ಅವಕಾಶ ನೀಡಿದರು ಈ ಸಂದರ್ಭದಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಯುವ ನಟ ಜೈ ಹೇಳಿದ್ದಾರೆ. ನಟಿ ಭಾವನರಾವ್ ಸಹ ಚಿತ್ರದ ಯಶಸ್ಸಿನ ಖುಷಿಯನ್ನು ಹಂಚಿಕೊಂಡರು. ಕಾರ್ಯಕಾರಿ ನಿರ್ಮಾಪಕ ಬಸವರಾಜ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಗಂಗಾಧರ್‌ ಸಾಲಿಮಠ ನಿರ್ದೇಶನದಲ್ಲಿ ಗ್ರೇ ಗೇಮ್ಸ್‌ ಸಿನಿಮಾ ಮೂಡಿಬಂದಿದೆ. ಫ್ಯಾಮಿಲಿ ಸಸ್ಪೆನ್ಸ್‌ ಡ್ರಾಮಾ ಶೈಲಿಯ ಈ ಸಿನಿಮಾದಲ್ಲಿ ನಾಯಕನಾಗಿ ವಿಜಯ್‌ ರಾಘವೇಂದ್ರ ನಟಿಸಿದ್ದಾರೆ. ಇಲ್ಲಿ ಚಿಂತನೆಗಳ ಪ್ರಚೋದನೆ ನಡೆಯುತ್ತದೆ. ಸರಿ ತಪ್ಪುಗಳ ಗ್ರಹಿಕೆಗಳಿಗೂ ಸವಾಲೆಸೆಯುತ್ತದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಆನ್‌ಲೈನ್‌ ಗೇಮಿಂಗ್‌ ಪೈಪೂಟಿ ಜತೆಗೆ ಮೆಟಾವರ್ಸ್‌ನ ಸಂಕೀರ್ಣತೆಗಳ ಬೆಸುಗೆಯೂ ಗ್ರೇ ಗೇಮ್ಸ್‌ ಸಿನಿಮಾದ ಹೈಲೈಟ್.‌ ಮೇ 10ರಂದು ರಾಜ್ಯಾದ್ಯಂತ ಗ್ರೇ ಗೇಮ್ಸ್‌ ಸಿನಿಮಾ ಬಿಡುಗಡೆಯಾಗಿತ್ತು.

ವಿಜಯ್‌ ರಾಘವೇಂದ್ರ ಜತೆಗೆ ಭಾವನಾ ರಾವ್‌, ಶ್ರುತಿ ಪ್ರಕಾಶ್‌, ಅಪರ್ಣಾ ವಸ್ತ್ರೇಯ, ರವಿ ಭಟ್‌ ಮುಖ್ಯಭೂಮಿಕೆಯಲ್ಲಿದ್ದರೆ, ಇನ್ನುಳಿದಂತೆ ಜೈ, ಇಶಿತಾ ಸಿಂಗ್‌, ರಾಮ್‌ ಮಂಜೋನ್ನಾಥ್‌ ಬೆನ್ಸಕಾನ್‌ ಚಾಕೋ ಇನ್ನುಳಿದ ಪಾತ್ರವರ್ಗವದಲ್ಲಿದ್ದಾರೆ. ಇತ್ತೀಚೆಗೆ ಗೋವಾದಲ್ಲಿ ನಡೆದ 54ನೇ ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲೂ ಈ ಸಿನಿಮಾ ಪ್ರದರ್ಶನ ಕಂಡಿತ್ತು.

Whats_app_banner