ಇದು ಕಪ್ಪು ಕಲ್ಲಿನ ಕಥೆ! ಕಾಲಾಪತ್ಥರ್ ಮೂಲಕ ಬರ್ತಿದ್ದಾರೆ ‘ಕೆಂಡಸಂಪಿಗೆ’ ಸಿನಿಮಾ ಖ್ಯಾತಿಯ ವಿಕ್ಕಿ ವರುಣ್‌
ಕನ್ನಡ ಸುದ್ದಿ  /  ಮನರಂಜನೆ  /  ಇದು ಕಪ್ಪು ಕಲ್ಲಿನ ಕಥೆ! ಕಾಲಾಪತ್ಥರ್ ಮೂಲಕ ಬರ್ತಿದ್ದಾರೆ ‘ಕೆಂಡಸಂಪಿಗೆ’ ಸಿನಿಮಾ ಖ್ಯಾತಿಯ ವಿಕ್ಕಿ ವರುಣ್‌

ಇದು ಕಪ್ಪು ಕಲ್ಲಿನ ಕಥೆ! ಕಾಲಾಪತ್ಥರ್ ಮೂಲಕ ಬರ್ತಿದ್ದಾರೆ ‘ಕೆಂಡಸಂಪಿಗೆ’ ಸಿನಿಮಾ ಖ್ಯಾತಿಯ ವಿಕ್ಕಿ ವರುಣ್‌

ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗಿಯೂ ನಟಿಸಿರುವ ಕಾಲಾಪತ್ಥರ್ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಧನ್ಯಾ ರಾಮ್‌ಕುಮಾರ್‌ ನಾಯಕಿಯಾಗಿ ನಟಿಸಿದ್ದಾರೆ.

ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ಕಾಲಾಪತ್ಥರ್ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ.
ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ಕಾಲಾಪತ್ಥರ್ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ.

Kaala Patthar Kannada Movie: ಕೆಂಡಸಂಪಿಗೆ ಸಿನಿಮಾ ಮೂಲಕ ಕರುನಾಡ ಜನತೆಗೆ ಪರಿಚಿತರಾದವರು ನಟ ವಿಕ್ಕಿ ವರುಣ್.‌ ಅದಾದ ಬಳಿಕ ಕಾಲೇಜ್‌ಕುಮಾರ್‌ ಸಿನಿಮಾದಲ್ಲಿಯೂ ನಟಿಸಿ ಸೈ ಎನಿಸಿಕೊಂಡರು. ಇದೀಗ ಇದೇ ವಿಕ್ಕಿ, ಸೆಪ್ಟೆಂಬರ್‌ನಲ್ಲಿ ಚಿತ್ರಮಂದಿರಗಳಿಗೆ ಆಗಮಿಸುತ್ತಿದ್ದಾರೆ. ಅದೂ ಕಪ್ಪು ಕಲ್ಲು ಹಿಡಿದುಕೊಂಡು! ಅಂದರೆ, ವಿಕ್ಕಿ ವರುಣ್ ಅವರೇ ನಿರ್ದೇಶಿಸಿ ನಾಯಕನಾಗಿಯೂ ನಟಿಸಿರುವ ಕಾಲಾಪತ್ಥರ್ ಸಿನಿಮಾ ಸೆಪ್ಟೆಂಬರ್‌ನಲ್ಲಿ ತೆರೆಗೆ ಬರಲಿದೆ. ಈ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಇಡೀ ತಂಡ.

ಭುವನ್ ಮೂವೀಸ್ ಬ್ಯಾನರ್‌ನಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ಕಾಲಾಪತ್ಥರ್ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ. ಹಿರಿಯ ಪತ್ರಕರ್ತ ಕೆ.ಎಸ್. ವಾಸು ಕಾಲಾಪತ್ಥರ್ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದರು.

ಇದು ಕಪ್ಪು ಕಲ್ಲಿನ ಕಥೆ

ನಟ, ನಿರ್ದೇಶಕ ವಿಕ್ಕಿ ವರುಣ್‌ ಮಾತನಾಡಿ, "ನಾನು ಕನ್ನಡ ಚಿತ್ರರಂಗಕ್ಕೆ ಬಂದು ಹದಿನೈದು ವರ್ಷಗಳಾಯಿತು. ಸೆಪ್ಟೆಂಬರ್‌ಗೆ ಸೂರಿ ಅವರ ನಿರ್ದೇಶನದಲ್ಲಿ ನಾನು ನಾಯಕನಾಗಿ ನಟಿಸಿದ್ದ ಕೆಂಡಸಂಪಿಗೆ ಚಿತ್ರ ತೆರೆಕಂಡು ಒಂಭತ್ತು ವರ್ಷಗಳಾಗುತ್ತಿದೆ. ನಾನು ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ಕಾಲಾಪತ್ಥರ್ ಚಿತ್ರ ಕೂಡ ಸೆಪ್ಟೆಂಬರ್‌ನಲ್ಲೇ ಬಿಡುಗಡೆಯಾಗುತ್ತಿರುವುದು ಖುಷಿಯ ಸಂಗತಿ. ಕಾಲಾಪತ್ಥರ್, ಕಪ್ಪುಕಲ್ಲಿಗೆ ಸಂಬಂಧಿಸಿದ ಕಥೆ. ಸತ್ಯಪ್ರಕಾಶ್ ಅವರು ಕಥೆ ಬರೆದಿದ್ದಾರೆ" ಎಂದರು.

ಉತ್ತರ ಕರ್ನಾಟಕದಲ್ಲಿ ಬಹುತೇಕ ಶೂಟಿಂಗ್‌

ಮುಂದುವರಿದು ಮಾತನಾಡಿ, "ಉತ್ತರ ಕರ್ನಾಟಕದ ವಿಜಯಪುರದ ಬಳಿ ಈ ಸಿನಿಮಾ ಹೆಚ್ಚು ಚಿತ್ರೀಕರಣವಾಗಿದೆ. ಆಲಮಟ್ಟಿಯ ಹಿನ್ನೀರಿನ ಜೈನಾಪುರ ಎಂಬ ಸ್ಥಳದಲ್ಲಿ ಚಿತ್ರೀಕರಣ ನಡೆದಿದ್ದು, ನಮ್ಮ ಚಿತ್ರದ ಚಿತ್ರೀಕರಣವಾಗಿ ಕೆಲವೇ ತಿಂಗಳಲ್ಲೇ ಈ ಹಳ್ಳಿ ನೀರಿನಲ್ಲಿ ಮುಳುಗಡೆಯಾಯಿತು. ನಮ್ಮ ಚಿತ್ರವನ್ನು ಮಾರ್ಟಿನ್ ಚಿತ್ರದ ನಿರ್ಮಾಪಕರಾದ ಉದಯ್ ಕೆ ಮೆಹ್ತಾ ವಿತರಣೆ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ದೇಶಕ ಹಾಗೂ ನಾಯಕ ವಿಕ್ಕಿ ವರುಣ್‌.

ನಾಯಕಿ ಧನ್ಯಾ ಏನಂದ್ರು?

ಇನ್ನು ಈ ಚಿತ್ರದಲ್ಲಿ ನಾಯಕಿಯಾಗಿ ದೊಡ್ಮನೆ ಕುಡಿ, ರಾಮ್‌ಕುಮಾರ್‌ ಪೂರ್ಣಿಮಾ ದಂಪತಿಯ ಮಗಳು ಧನ್ಯಾ ರಾಮ್‌ಕುಮಾರ್‌ ನಟಿಸಿದ್ದಾರೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅವರು, ನನ್ನದು ಈ ಚಿತ್ರದಲ್ಲಿ ಶಿಕ್ಷಕಿಯ ಪಾತ್ರ. ಗಂಗ ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಚಿತ್ರ ಎರಡು ಚೆನ್ನಾಗಿದೆ. ನನಗೆ ಈಗಷ್ಟೇ ವಿಕ್ಕಿ ಅವರು ಚಿತ್ರದ ತುಣುಕು ತೋರಿಸಿದ್ದರು. ಅದನ್ನು ನೋಡಿದ ಮೇಲೆ ನಾನಂತೂ ಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದೇನೆ ಎಂದರು ನಾಯಕಿ ಧನ್ಯ ರಾಮಕುಮಾರ್.

ಆರಂಭದಿಂದಲೂ ತಾವು ನಮ್ಮ ಚಿತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹಕ್ಕೆ ನಾವು ಆಭಾರಿ. ಈಗ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇನ್ನು ಮುಂದೆ ನಿಮ್ಮ ಪ್ರೋತ್ಸಾಹ ಹೆಚ್ಚು ಬೇಕು ಎಂದರು ನಿರ್ಮಾಪಕ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲನಕೋಟೆ. ಸಂದೀಪ್ ಈ ಚಿತ್ರದ ಛಾಯಾಗ್ರಾಹಕರು.

Whats_app_banner