ಕನ್ನಡ ಸುದ್ದಿ  /  Entertainment  /  Sandalwood News Yuva Movie Appuge Song Released By Puneeth Rajkumar Daughter Vanditha Yuva Movie March 29 Release Pcp

ಅಪ್ಪುಗೆ ಹಾಡು ಬಿಡುಗಡೆ ಮಾಡಿದ ದಿವಂಗತ ಪುನೀತ್‌ ರಾಜ್‌ಕುಮಾರ್‌ ಪುತ್ರಿ ವಂದಿತ; ಯುವ ಸಿನಿಮಾ ಮಾ 29ರಂದು ಬಿಡುಗಡೆ

Yuva Kannada Movie: ಯುವ ಸಿನಿಮಾ ಮಾರ್ಚ್‌ 29ರಂದು ರಿಲೀಸ್‌ ಆಗಲಿದೆ. ಯುವ ರಾಜ್‌ಕುಮಾರ್‌ ನಟನೆಯ ಈ ಸಿನಿಮಾದ ಅಪ್ಪುಗೆ ಹಾಡನ್ನು ಪುನೀತ್‌ ರಾಜ್‌ಕುಮಾರ್‌ ದ್ವಿತೀಯ ಪುತ್ರಿ ವಂದಿತ ಬಿಡುಗಡೆ ಮಾಡಿದ್ದಾರೆ.

ಅಪ್ಪುಗೆ ಹಾಡು ಬಿಡುಗಡೆ ಮಾಡಿದ ಪುನೀತ್‌ ರಾಜ್‌ಕುಮಾರ್‌ ಪುತ್ರಿ ವಂದಿತ
ಅಪ್ಪುಗೆ ಹಾಡು ಬಿಡುಗಡೆ ಮಾಡಿದ ಪುನೀತ್‌ ರಾಜ್‌ಕುಮಾರ್‌ ಪುತ್ರಿ ವಂದಿತ

ಬೆಂಗಳೂರು: ಇದೇ ಮಾರ್ಚ್‌ 29ರಂದು ಬಹುನಿರೀಕ್ಷಿತ ಯುವ ಸಿನಿಮಾ ಬಿಡುಗಡೆಯಾಗಲಿದೆ. ಯುವ ರಾಜ್‌ಕುಮಾರ್‌ ನಟನೆಯ ಈ ಸಿನಿಮಾವನ್ನು ಹೊಂಬಾಳೆ ಫಿಲಂಸ್‌ ನಿರ್ಮಾಣ ಮಾಡಿರುವುದರಿಂದ ಸಹಜವಾಗಿ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಈ ಚಿತ್ರದ ಅಪ್ಪುಗೆ ಎಂಬ ಹಾಡು ಇದೀಗ ಬಿಡುಗಡೆಯಾಗಿದೆ. ಯುವ ರಾಜಕುಮಾರ್ ನಟನೆಯ ಯುವ ಸಿನಿಮಾದ ಅಪ್ಪುಗೆ ಹಾಡನ್ನು ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ರಿಲೀಸ್‌ ಮಾಡಿದ್ದಾರೆ.

"ಯವ", ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ - ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ. ಪ್ರತಿಯೊಂದು ಫ್ಯಾಮಿಲಿಯಲ್ಲಿ ತಂದೆಯ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ಹಾಡು ಇದಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಅಪ್ಪನ ಕುರಿತಾದ ಹಾಡಾಗಿರುವುದರಿಂದ ಈ ಹಾಡನ್ನು ವಂದಿತ ಅವರಿಂದ ಬಿಡುಗಡೆ ಮಾಡಿಸೋಣ ಅಂದುಕೊಂಡೆವು. ಹಾಡು ಬಿಡುಗಡೆ ಮಾಡಿಕೊಟ್ಟ ವಂದಿತ ಅವರಿಗೆ ಧನ್ಯವಾದ. ಇನ್ನು, ಮಾರ್ಚ್ 21 ರಂದು "ಯುವ" ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಮಾರ್ಚ್ 23 ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ" ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು.

ಯುವ ಸಿನಿಮಾದ ಸ್ಟೋರಿಗೂ ನನ್ನ ಬದುಕಿನ ಕಥೆಗೂ ಸಾಕಷ್ಟು ಹೋಲಿಕೆ ಇದೆ ಎಂದು ಯುವ ರಾಜ್‌ಕುಮಾರ್‌ ಹೇಳಿದ್ದಾರೆ. ಅಪ್ಪ ಮತ್ತು ಮಗನ ಬಾಂಧವ್ಯ ಅಭೂತಪೂರ್ವವಾದದ್ದು. ತಂದೆಯ ಜವಾಬ್ದಾರಿ ನಮಗೆ ಅರ್ಥವಾಗುವುದೇ ಇಲ್ಲ. ನಾವು ದುಡಿಯುವುದಕ್ಕೆ ಶುರು ಮಾಡಿದಾಗ ನಮಗೆ ತಂದೆಯ ಜವಾಬ್ದಾರಿ ತಿಳಿಯುತ್ತಾ ಹೋಗುತ್ತದೆ. ಈ ಚಿತ್ರದಲ್ಲಿ ಅಚ್ಯುತಕುಮಾರ್ ಅವರು ನನ್ನ ತಂದೆ ಪಾತ್ರ ಮಾಡಿದ್ದಾರೆ. ಇವರ ಜತೆ ನಟಿಸುವಾಗ ನನಗೆ ನನ್ನ ಅಪ್ಪ ನೆನಪಾಗುತ್ತಿದ್ದರು. ಅಂತಹ ಸಂಬಂಧ ಬಣ್ಣಿಸುವ ಹಾಡು ಎಲ್ಲರಿಗೂ ಇಷ್ಟವಾಗುತ್ತದೆ" ಎಂದು ಯುವ ರಾಜ್‌ಕುಮಾರ್‌ ಹೇಳಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. "ಅಪ್ಪುಗೆ" ಮೂರನೇ ಹಾಡಾಗಿ ಬಿಡುಗಡೆಯಾಗಿದೆ. ಅಪ್ಪ - ಮಗನ ಸಂಬಂಧದ ಈ ಹಾಡು ತುಂಬಾ ಚೆನ್ನಾಗಿದೆ. ಈ ಹಾಡು ಕೇಳಿದಾಗಲ್ಲೆಲ್ಲಾ ನನಗೆ ನಮ್ಮ ತಂದೆ ನೆನಪಾಗುತ್ತಾರೆ ಎಂದು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಭಾವುಕರಾದರು.

"ಯುವ" ಚಿತ್ರದ ಆಡಿಯೋ ಹಕ್ಕನ್ನು ನಮ್ಮ ಆನಂದ್ ಆಡಿಯೋ ಸಂಸ್ಥೆಗೆ ನೀಡಿರುವುದಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸಂಸ್ಥೆ ಆರಂಭವಾಗಿ 25 ವರ್ಷಗಳಾಗುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಆನಂದ್ ಆಡಿಯೋ ಶ್ಯಾಮ್.

ಛಾಯಾಗ್ರಾಹಕ ಶ್ರೀಶ ಕುದುವಳ್ಳಿ, ಸಂಕಲನಕಾರ ಆಶಿಕ್ ಕುಸುಗೊಳ್ಳಿ ಮತ್ತು ಕಾರ್ಯಕಾರಿ ನಿರ್ಮಾಪಕ ಯೋಗಿ ಜಿ ರಾಜ್ ಸೇರಿದಂತೆ ಯುವ ಟಿಂನ ಹಲವು ಸದಸ್ಯರು ಉಪಸ್ಥಿತರಿದ್ದರು.