ಪ್ರೀತಿಯ ಸೆಲೆಬ್ರಿಟಿಗಳೇ ಈ ವರ್ಷ ನನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ: ಅಭಿಮಾನಿಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಷಮೆಯಾಚನೆ
ಕನ್ನಡ ಸುದ್ದಿ  /  ಮನರಂಜನೆ  /  ಪ್ರೀತಿಯ ಸೆಲೆಬ್ರಿಟಿಗಳೇ ಈ ವರ್ಷ ನನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ: ಅಭಿಮಾನಿಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಷಮೆಯಾಚನೆ

ಪ್ರೀತಿಯ ಸೆಲೆಬ್ರಿಟಿಗಳೇ ಈ ವರ್ಷ ನನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ: ಅಭಿಮಾನಿಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಷಮೆಯಾಚನೆ

ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ. ಈ ವರ್ಷ ನನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ ತಮ್ಮ ಅಭಿಮಾನಿಗಳಿಗೆ ವಿಡಿಯೊ ಸಂದೇಶ ಕಳಿದ್ದಾರೆ.

Darshan: ಈ ಬಾರಿ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದು ನಟ ದರ್ಶನ್ ವಿಡಿಯೊ ಮೂಲಕ ತಮ್ಮ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.
Darshan: ಈ ಬಾರಿ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದು ನಟ ದರ್ಶನ್ ವಿಡಿಯೊ ಮೂಲಕ ತಮ್ಮ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.

ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಹುಟ್ಟುಹಬ್ಬ ಸಮೀಪಿಸುತ್ತಿರುವ ಬೆನ್ನಲ್ಲೇ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ. ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದು ದರ್ಶನ್ ತಮ್ಮ ಅಭಿಮಾನಿಗಳಿಗೆ ವಿಡಿಯೊ ಮೂಲಕ ತಿಳಿಸಿದ್ದಾರೆ.

ದರ್ಶನ್ ವಿಡಿಯೊದಲ್ಲಿ ಏನು ಹೇಳಿದ್ದಾರೆ

ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ. ನೀವು ತುಂಬಾ ಪ್ರೀತಿ, ಅಭಿಮಾನ ತೋರಿಸಿದ್ದೀರಿ. ಅದನ್ನು ಯಾವ ರೀತಿಯ ವಾಪಸ್ ಮಾಡುವುದೋ ಗೊತ್ತಿಲ್ಲ. ಹುಟ್ಟುಹಬ್ಬದಲ್ಲಿ ಪ್ರತಿಯೊಬ್ಬರನ್ನು ಭೇಟಿ ಮಾಡಿ ಥಾಂಕ್ಸ್ ಹೇಳಬೇಕೆಂದುಕೊಂಡಿದ್ದೆ. ಆದರೆ ಆರೋಗ್ಯದ ಕಾರಣದಿಂದ ಈ ಬಾರಿ ಅಭಿಮಾನಿಗಳನ್ನು ಭೇಟಿ ಮಾಡೋಕೆ ಸಾಧ್ಯವಾಗುತ್ತಿಲ್ಲ. ತುಂಬಾ ಹೊತ್ತು ನಿಂತುಕೊಳ್ಳೋಕೆ ಆಗಲ್ಲ. ನನಗೆ ಏನು ಸಮಸ್ಯೆ ಇದೆ ಅನ್ನೋದು ಎಲ್ಲರಿಗೂ ಗೊತ್ತಿದೆ.

ನಿಂತುಕೊಂಡು ಎಲ್ಲರಿಗೂ ವಿಷ್ ಮಾಡೋಕೆ ಆಗ್ತಿಲ್ಲ. ಆಪರೇಷನ್ ಅಂತು ಕಟ್ಟಿಟ್ಟ ಬುತ್ತಿ. ಎಲ್ಲರಿಗೂ ಗೊತ್ತು. ಅದನ್ನು ಮಾಡಿಸಲೇಬೇಕು. ಆದರೆ ಹೀಗಿರುವ ಸಿನಿಮಾ ಕೆಲಸಗಳನ್ನು ಮುಗಿಸಿಕೊಡಬೇಕು. ಅದು ಎಷ್ಟು ಸಾಧ್ಯವೋ ಅಷ್ಟು ಕೆಲಸ ಮುಗಿಸಿಕೊಡಲು ಪ್ರಯತ್ನಿಸುತ್ತೇವೆ. ಇಷ್ಟು ದಿನ ಕಾದಿರುವ ನಿರ್ಮಾಪಕರಿಗೆ ಅನ್ಯಾಯ ಆಗಬಾರದು. ಆದ್ದರಿಂದ ದಯಮಾಡಿ ನನ್ನ ಪ್ರೀತಿಯ ಸೆಲೆಬ್ರಿಟಿಗಳು ಇದೊಂದು ಸಲ ಕ್ಷಮೆ ಕೋರುತ್ತಿದ್ದೇನೆ. ನಿಮಗೆ ಸಿಕ್ಕೇ ಸಿಗುತ್ತೇವೆ. ಯಾವುದೇ ಊಹಾಪೋಹಗಳನ್ನು ಕಿವಿಗೆ ಹಾಕಿಕೊಳ್ಳಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ದರ್ಶನ್ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುವ ವಿಚಾರವಾಗಿ ಮಾತನಾಡಿ, ಇಲ್ಲೇ ಇಷ್ಟೊಂದು ಪ್ರೀತಿ ತೋರಿಸಿದ್ದಾರೆ. ಬೇರೆ ಎಲ್ಲಿಗೆ ಹೋಗಲಿ. ಸಾಯೋವರೆಗೂ ಇಲ್ಲೇ. ಇಲ್ಲಿ ಬಿಟ್ಟು ಎಲ್ಲಿಗೂ ಹೋಗೋದಿಲ್ಲ ಎಂದು ವಿಡಿಯೊ ಮೂಲಕ ತನ್ನ ಅಭಿಮಾನಿಗಳಿಗೆ ಸ್ಪಷ್ಟಪಡಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಫೆಬ್ರವರಿ 16 ರಂದು 48ನೇ ವರ್ಷಕ್ಕೆ ಕಾಲಿಡಲಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿಗೆ ಹೋಗಿ ಇದೀಗ ಜಾಮೀನನ ಮೇಲೆ ಹೊರ ಬಂದಿದ್ದಾರೆ. ಆರೋಗ್ಯದ ಸಮಸ್ಯೆಯಿಂದ ಸದ್ಯ ವಿಶ್ರಾಂತಿಯಲ್ಲಿದ್ದಾರೆ.

Whats_app_banner