Sanju Weds Geetha 2: ನಾಳೆ ಬಿಡುಗಡೆಯಾಗಲಿದೆ ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಅಭಿನಯದ 'ಸಂಜು ವೆಡ್ಸ್ ಗೀತಾ 2' ಸಿನಿಮಾ
ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಅಭಿನಯದ ಸಿನಿಮಾ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ನಾಳೆ (ಜನವರಿ 17) ರಂದು ಬಿಡುಗಡೆಯಾಗಲಿದೆ.

ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಹಿಂದಿನ ವಾರವೇ ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ಒಂದು ವಾರ ತಡವಾಗಿ ಬಿಡುಗಡೆಯಾಗುತ್ತದೆ. ಕಾರಣ ಈ ಸಿನಿಮಾಕ್ಕೆ ತಡೆಯಾಜ್ಞೆ ಘೋಷಿಸಲಾಗಿತ್ತು. ಕೆಲ ದಿನಗಳ ಹಿಂದೆ ನ್ಯಾಯಾಲಯದಿಂದ ಚಿತ್ರದ ಬಿಡುಗಡೆಗೆ ಅನುಮತಿ ಸಿಕ್ಕಿತ್ತು. ಆ ಕಾರಣದಿಂದ ಈಗ ಮತ್ತೆ 'ಸಂಜು ವೆಡ್ಸ್ ಗೀತಾ 2' ಸಿನಿಮಾದ ಬಿಡುಗಡೆ ದಿನಾಂಕ ಮತ್ತೆ ನಿಗದಿಯಾಗಿದೆ. ನಾಳೆ (ಜನವರಿ 17) ಈ ಸಿನಿಮಾ ಥಿಯೇಟರ್‍ಗಳಲ್ಲಿ ಬಿಡುಗಡೆಯಾಗಲಿದೆ.
2011ರಲ್ಲಿ ಬಿಡುಗಡೆಯಾಗಿತ್ತು ‘ಸಂಜು ವೆಡ್ಸ್ ಗೀತಾ’ ಚಿತ್ರ
‘ಸಂಜು ವೆಡ್ಸ್ ಗೀತಾ’ ಚಿತ್ರವು 2011ರಲ್ಲಿ ಬಿಡುಗಡೆಯಾಗಿತ್ತು. ಸಂಜು ಮತ್ತು ಗೀತಾ ಎಂಬ ಯುವ ಪ್ರೇಮಿಗಳ ದುರಂತಕಥೆಯಾದ ‘ಸಂಜು ವೆಡ್ಸ್ ಗೀತಾ’ ದೊಡ್ಡ ಯಶಸ್ಸು ಕಂಡಿತ್ತು. ಆ ಚಿತ್ರದ ಹಾಡುಗಳು ಈಗಲೂ ಸಾಕಷ್ಟು ಜನಪ್ರಿಯವಾಗಿವೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ ನಮ್ಮ ಮಣ್ಣಿನ ಪ್ರೇಮಿಗಳ ಪ್ರೇಮಕಾವ್ಯವನ್ನು ನಾಗಶೇಖರ್ ಈ ಚಿತ್ರದಲ್ಲಿ ಹೇಳಹೊರಟಿದ್ದಾರಂತೆ.
ಪಾತ್ರವರ್ಗ
ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ನಿರ್ಮಿಸಿರುವ ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಶ್ರೀಧರ್ ಸಂಭ್ರಮ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿದೆ.
ಸಿನಿಮಾ ಬಿಡುಗಡೆ ತಡವಾಗಲು ಇಲ್ಲಿದೆ ಕಾರಣ
ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಶುಕ್ರವಾರ (ಜನವರಿ 10) ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರದ ಬಿಡುಗಡೆಗೆ ಹೈದರಾಬಾದ್‍ನ ವ್ಯಕ್ತಿಯೊಬ್ಬರು ತಡೆಯಾಜ್ಞೆ ತಂದಿದ್ದರು. ಹಾಗಾಗಿ, ಚಿತ್ರವನ್ನು ಬಿಡುಗಡೆ ಮಾಡದಿರುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಚಿತ್ರತಂಡ
‘ಸಂಜು ವೆಡ್ಸ್ ಗೀತಾ 2’ ಚಿತ್ರವನ್ನು ಪವಿತ್ರ ಇಂಟರ್ ನ್ಯಾಷನಲ್ ಮೂವೀ ಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಒಂದು ಸುಂದರ ಪ್ರೇಮಕಥೆ ಮತ್ತೆ ನಿಮ್ಮ ಮುಂದೆ ಬರಲಿದೆ. ಶ್ರೀನರ್ ಕಿಟ್ಟಿ ಹಾಗೂ ರಚಿತಾ ರಾಮ್ ಈ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಟ್ರೇಲರ್ ಕೂಡ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಸಂಜು ವೆಡ್ಸ್ ಗೀತಾ ಸಿನಿಮಾ ನೋಡಿದ ಎಲ್ಲರಿಗೂ ಭಾಗ 2 ಯಾವ ರೀತಿ ಮೂಡಿ ಬರಲಿದೆ? ಎಂಬ ಕುತೂಹಲ ಇದ್ದೇ ಇರುತ್ತದೆ. ಇನ್ನು ರಚಿತಾ ರಾಮ್ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದು, ಎಲ್ಲರೂ ಸಿನಿಮಾ ಬಿಡುಗಡೆಗಾಗಿ ಕಾದಿದ್ದಾರೆ.
