ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ; ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು
Bank Janardhan Death: ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಹಿರಿಯ ನಟ ಬ್ಯಾಂಕ್ ಜನಾರ್ಧನ್ ಇಂದು (ಏಪ್ರಿಲ್ 14) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.

ಬೆಂಗಳೂರು: ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ಇಂದು (ಏಪ್ರಿಲ್ 14) ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಿಧಿವಶರಾಗಿದ್ದಾರೆ. 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು ಜನಾರ್ಧನ್. ಇವರಿಗೆ 79 ವರ್ಷ ವಯಸ್ಸಾಗಿತ್ತು.
ಉಪ್ರೇಂದ್ರ, ಜಗ್ಗೇಶ್ ಮುಂತಾದ ನಟ ಜೊತೆ ತೆರೆ ಹಂಚಿಕೊಂಡು ಕನ್ನಡ ಸಿನಿಮಾ ರಂಗವನ್ನ ತನ್ನ ಹಾಸ್ಯದಿಂದ ಆಳಿದ್ದ ಹಿರಿಯ ನಟ ಇಂದು ನಮ್ಮನ್ನು ಅಗಲಿದ್ದಾರೆ.
1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ್ದ ಇವರು ತಮ್ಮ ವಿಭಿನ್ನ ನಟನೆಯ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು ಬ್ಯಾಂಕ್ ಜನಾರ್ಧನ್. ಸಿನಿಮಾ ಮಾತ್ರದಲ್ಲಿ ರಂಗಭೂಮಿ ಹಾಗೂ ಕಿರುತೆರೆಯಲ್ಲೂ ನಟಿಸಿ ಹೆಸರು ಮಾಡಿದ್ದಾರೆ. ತಮ್ಮ ಡೈಲಾಗ್‌ಗಳು ಹಾಗೂ ನಟನೆಯ ವಿಭಿನ್ನತೆಯು ಇವರು ರಾಜ್ಯದಾದ್ಯಂತ ಅಭಿಮಾನಿಗಳನ್ನು ಗಳಿಸುವಂತೆ ಮಾಡಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶ್, ತರ್ಲೆ ನನ್ ಮಗ, ಗಣೇಶ ಸುಬ್ರಹ್ಮಣ್ಯ, ಕೌರವ ಸೇರಿದಂತೆ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪಾಪಾ ಪಾಂಡು ಜೋಕಾಲಿ, ರೋಬೊ ಫ್ಯಾಮಿಲಿ, ಮಾಂಗಲ್ಯ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 2023ರಲ್ಲಿ ಹೃದಯಘಾತಕ್ಕೆ ಒಳಗಾಗಿದ್ದ ಇವರು ಚೇತರಿಸಿಕೊಂಡಿದ್ದಾರೆ.
