Veda Movie: ಒಟಿಟಿಯಲ್ಲಿ ಹೊಸ ದಾಖಲೆ ಬರೆದ 'ವೇದ'.. ಸಂತೋಷ್ ಥಿಯೇಟರ್ ಬಳಿ ಅಭಿಮಾನಿಗಳಿಂದ ಸಂಭ್ರಮಾಚರಣೆ
ಸಾಕಷ್ಟು ನಿರೀಕ್ಷೆಯೊಂದಿಗೆ ಕಳೆದ ವರ್ಷ ಡಿಸೆಂಬರ್ 23ರಂದು ಈ ಸಿನಿಮಾ ಬಿಡುಗಡೆಗೊಂಡಿತ್ತು. ಇದು ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ಆಗಿದೆ. ಜೊತೆಗೆ ಶಿವರಾಜ್‌ಕುಮಾರ್ ಅಭಿನಯದ 125ನೇ ಸಿನಿಮಾ ಅನ್ನೋದು ವಿಶೇಷ.
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ 125ನೇ ಸಿನಿಮಾ 'ವೇದ' ಚಿತ್ರಮಂದಿರದಲ್ಲಿ ರೆಕಾರ್ಡ್ ಕ್ರಿಯೇಟ್ ಮಾಡಿದ್ದು ಗೊತ್ತೇ ಇದೆ. ಥಿಯೇಟರ್‌ಗಳಲ್ಲಿ ಸೂಪರ್ ಸಕ್ಸಸ್ ಕಂಡ ಸಿನಿಮಾ ಫೆಬ್ರವರಿ 10 ರಂದು ZEE5ನಲ್ಲಿ ಬಿಡುಗಡೆಗೊಂಡಿದ್ದು, ಇದೀಗ ಈ ಸಿನಿಮಾ ಒಟಿಟಿಯಲ್ಲಿ ಕೂಡಾ ಹೊಸ ದಾಖಲೆ ಬರೆದಿದೆ. ಕೆಲವೇ ದಿನದಲ್ಲಿ125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ಕಂಡು ರೆಕಾರ್ಡ್ ಕ್ರಿಯೇಟ್ ಮಾಡಿದೆ.
ವೇದ ಸಿನಿಮಾ ಹೀಗೆ ರೆಕಾರ್ಡ್ ಕ್ರಿಯೇಟ್ ಮಾಡಿದ ಖುಷಿಗೆ ಶಿವಣ್ಣ ಅಭಿಮಾನಿಗಳು ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ಸಂಭ್ರಮ ಆಚರಿಸಿದ್ದಾರೆ. ಸಂತೋಷ್ ಚಿತ್ರಮಂದಿರದಲ್ಲಿ ಅಭಿಮಾನಿಗಳು 'ವೇದ' ಚಿತ್ರದ ಶಿವಣ್ಣ ಕಟೌಟ್ ನಿಲ್ಲಿಸಿ ಸಂಭ್ರಮಿಸಿದೆ. ಒಟಿಟಿಯಲ್ಲಿ ಅತಿ ಕಡಿಮೆ ಅವಧಿಯಲ್ಲಿ 125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ಕಂಡಿದ್ದು ZEE5 ನಲ್ಲಿ ದಾಖಲೆ ಬರೆದಿದೆ. ಈ ಮೂಲಕ ಚಿತ್ರಮಂದಿರದ ಜೊತೆಗೆ ZEE5 ಒಟಿಟಿಯಲ್ಲೂ ಸಿನಿಮಾ ಹೊಸ ದಾಖಲೆಯನ್ನು ತನ್ನದಾಗಿಸಿಕೊಂಡಿದೆ. 'ವೇದ' ಸಿನಿಮಾ ನಿರ್ದೇಶಕ ಎ. ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್ ನಲ್ಲಿ ಮೂಡಿ ಬಂದಿರುವ ನಾಲ್ಕನೇ ಸಿನಿಮಾ. ಸಾಕಷ್ಟು ನಿರೀಕ್ಷೆಯೊಂದಿಗೆ ಕಳೆದ ವರ್ಷ ಡಿಸೆಂಬರ್ 23ರಂದು ಈ ಸಿನಿಮಾ ಬಿಡುಗಡೆಗೊಂಡಿತ್ತು. ಇದು ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ಆಗಿದೆ. ಜೊತೆಗೆ ಶಿವರಾಜ್‌ಕುಮಾರ್ ಅಭಿನಯದ 125ನೇ ಸಿನಿಮಾ ಅನ್ನೋದು ವಿಶೇಷ.
ವೇದ ಚಿತ್ರದಲ್ಲಿ ಗಾನವಿ ಲಕ್ಷ್ಮಣ್, ಶ್ವೇತಾ ಚೆಂಗಪ್ಪ, ಉಮಾಶ್ರೀ, ಅದಿತಿ ಸಾಗರ್, ವೀಣಾ ಪೊನ್ನಪ್ಪ, ಕುರಿ ಪ್ರತಾಪ್, ಲಾಸ್ಯ ನಾಗರಾಜ್ ಸೇರಿದಂತೆ ಬಹುದೊಡ್ಡ ತಾರಾಗಣ ಇದೆ. ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.
ರಿಯಲ್ ಸ್ಟಾರ್ ಜೊತೆ ಸಿನಿಮಾ ಮಾಡ್ತಾರಂತೆ ಶಿವಣ್ಣ
ಇತ್ತೀಚೆಗೆ ಕಬ್ಜ ಹಾಡಿನ ರಿಲೀಸ್ ಕಾರ್ಯಕ್ರಮದಲ್ಲಿ ಶಿವರಾಜ್‌ಕುಮಾರ್ ಹಾಗೂ ಉಪೇಂದ್ರ ಒಟ್ಟಿಗೆ ಸೇರಿದ್ದರು. ಈ ವೇಳೆ ಶಿವಣ್ಣನ ಜೊತೆ ಆದಷ್ಟು ಬೇಗ ಒಂದು ಸಿನಿಮಾ ಮಾಡುತ್ತೇನೆ ಎಂದು ಉಪೇಂದ್ರ ಹೇಳಿದ್ದಾರೆ. ''ಆದಷ್ಟು ಬೇಗ ಶಿವಣ್ಣನೊಂದಿಗೆ ಸಿನಿಮಾ ಮಾಡುತ್ತೇನೆ. ಅಪ್ಪುಗೆ ಆ್ಯಕ್ಷನ್ ಕಟ್ ಹೇಳುವ ಆಸೆ ಇತ್ತು. ಅದು ಈಡೇರಲಿಲ್ಲ ಎಂದು ಮನದಾಸೆ ಹೇಳಿಕೊಂಡಿದ್ದಾರೆ. ಉಪ್ಪಿ ಮಾತಿಗೆ ಪ್ರತಿಕ್ರಿಯಿಸಿದ ಶಿವರಾಜ್‌ಕುಮಾರ್, "ನಾನು ಉಪೇಂದ್ರ ಅವರ ಅಭಿಮಾನಿ. ಅವರು 'ಓಂ' ಸಿನಿಮಾ ಮೂಲಕ ಇಡೀ ಭಾರತಕ್ಕೆ ರೌಡಿಸಂ ಚಿತ್ರ ನೀಡಿದವರು. ಅವರ ಜೊತೆ ಕೆಲಸ ಮಾಡುವುದೇ ಒಂದು ರೀತಿಯ ಖುಷಿ'' ಎಂದು ಹೇಳಿ ಉಪ್ಪಿಯ ಹೊಸ ಚಿತ್ರಕ್ಕೆ ಶುಭ ಹಾರೈಸಿದ್ದರು.