Veda Stream in OTT: ಶಿವಣ್ಣ ಅಭಿನಯದ 'ವೇದ' ಸಿನಿಮಾ ಮಿಸ್ ಮಾಡ್ಕೊಂಡ್ರಾ...ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ ನೋಡಿ
ಈ ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಇದು ಸೆಂಚುರಿ ಸ್ಟಾರ್ ವೃತ್ತಿ ಜೀವನದಲ್ಲಿ 125ನೇ ಸಿನಿಮಾ ಅನ್ನೋದು ಒಂದೆಡೆ ಆದರೆ ಚಿತ್ರವನ್ನು ಶಿವಣ್ಣ ಪತ್ನಿ ಗೀತಾ ಶಿವರಾಜ್‌ಕುಮಾರ್ ನಿರ್ಮಿಸಿರುವುದು ಮತ್ತೊಂದು ವಿಶೇಷ.
ಕಳೆದ ಡಿಸೆಂಬರ್‌ನಲ್ಲಿ ತೆರೆ ಕಂಡಿದ್ದ ಶಿವರಾಜ್‌ಕುಮಾರ್ ಅಭಿನಯದ 'ವೇದ' ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದು ಶಿವಣ್ಣ ಅಭಿನಯದ 125ನೇ ಸಿನಿಮಾವಾಗಿದ್ದು ಚಿತ್ರದಲ್ಲಿ ಶಿವರಾಜ್‌ಕುಮಾರ್ ಜೊತೆ ಗಾನವಿ ಲಕ್ಷ್ಮಣ್ ನಟಿಸಿದ್ದು ಅವರ ಅಭಿನಯಕ್ಕೆ ಕೂಡಾ ಜನರು ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಸಿನಿಮಾ ಒಟಿಟಿಗೆ ಬರಲು ಸಿದ್ಧವಿದೆ.
ಟ್ರೆಂಡಿಂಗ್ ಸುದ್ದಿ
ಈ ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಇದು ಸೆಂಚುರಿ ಸ್ಟಾರ್ ವೃತ್ತಿ ಜೀವನದಲ್ಲಿ 125ನೇ ಸಿನಿಮಾ ಅನ್ನೋದು ಒಂದೆಡೆ ಆದರೆ ಚಿತ್ರವನ್ನು ಶಿವಣ್ಣ ಪತ್ನಿ ಗೀತಾ ಶಿವರಾಜ್‌ಕುಮಾರ್ ನಿರ್ಮಿಸಿರುವುದು ಮತ್ತೊಂದು ವಿಶೇಷ. ಜೊತೆಗೆ ಇದು, ನಿರ್ದೇಶಕ ಎ. ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್‌ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ. ಹೀಗೆ ಸಾಕಷ್ಟು ವಿಶೇಷತೆಯೊಂದಿಗೆ ತೆರೆಕಂಡ ಈ ಚಿತ್ರ ಅಭಿಮಾನಿಗಳ ಮನಸ್ಸು ಗೆದ್ದಿತ್ತು. ಇನ್ನು ಮೂರು ದಿನಗಳಲ್ಲಿ ಈ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ. ಇದು ಕೆಲವರಿಗೆ ಖುಷಿ ಆದರೆ, ಬಿಡುಗಡೆಯಾಗಿ ಒಂದು ತಿಂಗಳು ಕಳೆಯುತ್ತಿದ್ದಂತೆ ಈ ಚಿತ್ರ ಒಟಿಟಿಯಲ್ಲಿ ಸ್ಟ್ರೀಮ್ ಆಗ್ತಿರೋದು ಕೆಲವರಿಗೆ ಬೇಸರವಾಗಿದೆ. ಒಟ್ಟಿನಲ್ಲಿ ಸಿನಿಮಾ ನೋಡದವರಿಗೆ, ಈ ಚಿತ್ರವನ್ನು ಮನೆಯಲ್ಲೇ ಕುಳಿತು ನೋಡುವ ಅವಕಾಶ ದೊರೆತಿದೆ.
'ವೇದ' ಸಿನಿಮಾ ಫೆಬ್ರವರಿ 10 ರಂದು ಜೀ 5ನಲ್ಲಿ ಪ್ರಸಾರವಾಗುತ್ತಿದೆ. ಎ. ಹರ್ಷ ಹಾಗೂ ಶಿವಣ್ಣ ಹಿಟ್ ಕಾಂಬಿನೇಶನ್ ಮತ್ತೊಮ್ಮೆ ತೆರೆ ಮೇಲೆ ಮೋಡಿ ಮಾಡುವಲ್ಲಿ ಯಶಸ್ವಿಯಾಗಿದೆ. ಸಿನಿಮಾ ನೋಡಲು ಒಟಿಟಿ ಮಂದಿ ಕಾಯುತ್ತಿದ್ದಾರೆ. ಬಾಕ್ಸ್ ಆಫೀಸಿನಲ್ಲೂ ಸೂಪರ್ ಸಕ್ಸಸ್ ಕಂಡಿದ್ದು ಹಿಟ್ ಲಿಸ್ಟ್ ಸೇರಿರುವ ಈ ಸಿನಿಮಾ ಇದೀಗ ಒಟಿಟಿ ಪ್ರೇಕ್ಷಕರ ಮನಗೆಲ್ಲಲು ಸಿದ್ಧವಾಗುತ್ತಿದೆ. ವೇದ ಚಿತ್ರದಲ್ಲಿ ಶಿವರಾಜ್‌ಕುಮಾರ್, ಗಾನವಿ ಲಕ್ಷ್ಮಣ್, ಶ್ವೇತ ಚೆಂಗಪ್ಪ, ಉಮಾಶ್ರೀ, ಅದಿತಿ ಸಾಗರ್, ವೀಣಾ ಪೊನ್ನಪ್ಪ, ಕುರಿ ಪ್ರತಾಪ್, ಲಾಸ್ಯ ನಾಗರಾಜ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಇದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸ್ವಾಮಿ ಜೆ ಗೌಡ ಛಾಯಾಗ್ರಹಣ, ದೀಪು.ಎಸ್. ಕುಮಾರ್ ಸಂಕಲನ ಈ ಚಿತ್ರಕ್ಕಿದೆ.
'ಘೋಸ್ಟ್' ಚಿತ್ರದಲ್ಲಿ ಬ್ಯುಸಿ ಇರುವ ಶಿವರಾಜ್‌ಕುಮಾರ್
ಶಿವಣ್ಣ ಕೈಯಲ್ಲಿ ಸಾಲು ಸಾಲು ಸಿನಿಮಾಗಳು ಇವೆ. ಸದ್ಯಕ್ಕೆ 'ಘೋಸ್ಟ್' ಚಿತ್ರೀಕರಣ ತನ್ನ ವಿಶೇಷತೆಗಳಿಂದಲೇ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಶಿವಣ್ಣ ಗ್ಯಾಂಗ್‌ಸ್ಟರ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದಲ್ಲಿ ಸಿದ್ಧವಾಗಲಿರುವ ಈ ಸಿನಿಮಾ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಿಗೂ ಡಬ್ ಆಗಲಿದೆ. ಆ ಕಾರಣಕ್ಕೆ ಬೇರೆ ಬೇರೆ ಭಾಷೆಯ ಕಲಾವಿದರನ್ನು ಈ ಸಿನಿಮಾಗಾಗಿ ನಿರ್ದೇಶಕರು ಕರೆ ತಂದಿದ್ದಾರೆ.
ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ, 'ಘೋಸ್ಟ್' ಸಿನಿಮಾ ಈಗಾಗಲೇ ಒಂದಷ್ಟು ಭಾಗದ ಶೂಟಿಂಗ್ ಮುಗಿಸಿಕೊಂಡಿದೆ. ಇತ್ತೀಚೆಗಷ್ಟೇ ಮೈಸೂರಿನಲ್ಲಿ ಎರಡನೇ ಹಂತದ ಶೂಟಿಂಗ್ ಮುಗಿಸಿತ್ತು. ಶೀಘ್ರದಲ್ಲೇ ಮೂರನೇ ಹಂತದ ಶೂಟಿಂಗ್ ಆರಂಭವಾಗಲಿದೆ. ನಿರ್ದೇಶಕ ಶ್ರೀನಿ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದ್ದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ ಈ ಚಿತ್ರಕ್ಕಿದೆ. ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.