ಸೋಡಿಯಂ ಬಾಂಬ್ ಸ್ಫೋಟಿಸಿ ಸಂಕಷ್ಟಕ್ಕೆ ಸಿಲುಕಿದ್ದ ಡ್ರೋನ್ ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
ಕೃಷಿ ಹೊಂಡದಲ್ಲಿ ಸ್ಫೋಟಕ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಗ್ ಬಾಸ್ ಸೀಸನ್ 10ರ ರನ್ನರ್ ಅಪ್ ಡ್ರೋನ್ ಪ್ರತಾಪ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋರ್ಟ್ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
Drone Prathap: ಕೃತಕ ಕೃಷಿ ಹೊಂಡದಲ್ಲಿ ಸೋಡಿಯಂ ಸ್ಪೋಟಕ ಸಿಡಿಸಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಕಳೆದ ಬಿಗ್ ಬಾಸ್ ಸೀಸನ್ 10ರಲ್ಲಿ ರನ್ನರ್ ಅಪ್ ಆಗಿದ್ದ ಪ್ರತಾಪ್, ಇತ್ತೀಚೆಗಷ್ಟೇ ಮಧುಗಿರಿ ತಾಲೂಕಿನ ಜನಕಲೋಟಿ ಬಳಿಯ ಕೃಷಿ ಹೊಂಡದಲ್ಲಿ ಸೋಡಿಯಂ ಬಾಂಬ್ ಸ್ಫೋಟಿಸಿ ಸುದ್ದಿಯಾಗಿದ್ದರು. ತಕ್ಷಣಕ್ಕೆ ಅವರ ವಿರುದ್ಧ ದೂರು ಸಹ ದಾಖಲಾಗಿತ್ತು.
ಸ್ಫೋಟ ಪ್ರಕರಣ ಸಂಬಂಧ ಡ್ರೋನ್ ಪ್ರತಾಪ್ ಅವರ ವಿರುದ್ಧ ಮಿಡಿಗೇಶಿ ಠಾಣೆ ಪೊಲೀಸರು ಬಿಎನ್‌ಸಿ ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇದೀಗ ಡಿಸೆಂಬರ್ 26ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿ ಮಧುಗಿರಿ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಸ್ಫೋಟಕ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಮಾತ್ರವಲ್ಲದೆ, ಅವರ ಜತೆಗಿದ್ದ ಸ್ಫೋಟವನ್ನು ಚಿತ್ರೀಕರಣ ಮಾಡಿದ್ದ ಇಬ್ಬರು ಸ್ನೇಹಿತರಾದ ವಿನಯ್ ಮತ್ತು ಪ್ರಜ್ವಲ್‌ನಲ್ಲಿ ಮಿಡಿಗೇಶಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫಾರ್ಮ್ ಹೌಸ್ ಮಾಲೀಕ, ಜೀತೇಂದ್ರ ಜೈನ್ ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.