Actor Vishal: ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್; ಜಾರಂದಾಯ ದೈವದ ಬಳಿ ಆರೋಗ್ಯಕ್ಕಾಗಿ ಪ್ರಾರ್ಥನೆ
ಕನ್ನಡ ಸುದ್ದಿ  /  ಮನರಂಜನೆ  /  Actor Vishal: ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್; ಜಾರಂದಾಯ ದೈವದ ಬಳಿ ಆರೋಗ್ಯಕ್ಕಾಗಿ ಪ್ರಾರ್ಥನೆ

Actor Vishal: ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್; ಜಾರಂದಾಯ ದೈವದ ಬಳಿ ಆರೋಗ್ಯಕ್ಕಾಗಿ ಪ್ರಾರ್ಥನೆ

ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಮಂಗಳೂರು ಹೊರವಲಯದ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮದಲ್ಲಿ ಪಾಲ್ಗೊಂಡಿದ್ದಾರೆ.

ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್
ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್

ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಮಂಗಳೂರು ಹೊರವಲಯದ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು,ಅಲ್ಲಿ ಜಾರಂದಾಯ ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ನೋಡಿದ್ದಾರೆ. ಇತ್ತೀಚೆಗೆ ವಿಶಾಲ್ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು,ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ್ದು ಅದಕ್ಕೆ ವಿಶಾಲ್ ಅವರು ಒಪ್ಪಿದ್ದಾರೆ.

ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್

ತಮಿಳು ಸೂಪರ್ ಸ್ಟಾರ್ ವಿಶಾಲ್ ಅವರು ಇತ್ತೀಚೆಗೆ ಅನಾರೋಗ್ಯ ಬಳಲುತ್ತಿಸದ್ದರು. ಸಿನಿಮಾ ಪ್ರಚಾರದ ಸಂದರ್ಭದಲ್ಲೂ ಅವರ ಕೈ ನಡುಗಿ ವೇದಿಕೆಯಲ್ಲೇ ಎಲ್ಲರಿಗೂ ಆತಂಕ ಉಂಟಾಗಿತ್ತು. ಅವರ ಮುಖದಲ್ಲೂ ಸಾಕಷ್ಟು ಬದಲಾವಣೆಯಾಗಿದೆ ಎಂದು ಚರ್ಚೆಯಾಗುತ್ತಲೆ ಇತ್ತು. ಅದೇ ರೀತಿ ಅವರು ತಮ್ಮ ಆರೋಗ್ಯದ ಬಗ್ಗೆ ದೈವದ ಬಳಿ ಬೇಡಿಕೊಳ್ಳಲು ಬಂದ ವಿಚಾರ ಹೊರಬಂದಿದೆ. ನೇಮಕ್ಕೆ ಬಂದು ಬೇಡಿಕೊಂಡ ವಿಡಿಯೋ ಲಭ್ಯವಾಗಿದೆ.

ಮದ ಗಜ ರಾಜ ಸಿನಿಮಾದ ಪ್ರಚಾರದ ವೇಳೆ ಅವರು ಮಾತನಾಡುತ್ತಿರುವ ಸಂದರ್ಭದಲ್ಲಿ ಅವರ ಕೈ ನಡುಗುತ್ತಿತ್ತು, ಆಗ ಅವರಿಗೆ ಜ್ವರ ಬಂದಿತ್ತು, ಆ ಕಾರಣಕ್ಕಾಗಿಯೇ ಕೈ ನಡುಗಿದೆ ಎಂದು ಹೇಳಲಾಗಿತ್ತು. ಅದಾದ ನಂತರ ಅವರ ಆರೋಗ್ಯದ ಬಗ್ಗೆ ಅಪ್‌ಡೇಟ್‌ ಸಿಕ್ಕಿರಲಿಲ್ಲ. ಆದರೆ ಈಗ ಅವರು ಕರ್ನಾಟಕಕ್ಕೆ ಕಾಲಿಟ್ಟಿದ್ದಾರೆ. ದಕ್ಷಿಣ ಕನ್ನಡದ ತುಳು ದೈವದಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಮೂಲ್ಕಿ ತಾಲೂಕಿನ ಹರಿಪಾದೆಯ ಧರ್ಮದೈವ ಜಾರಂದಾಯ ದೈವಸ್ಥಾನಕ್ಕೆ ಭೇಟಿ ನೀಡಿ ಬೇಡಿಕೊಂಡಿದ್ದಾರೆ.

ನಟ ವಿಶಾಲ್ ದೈವದ ಮುಂದೆ ನಿಂತು ಬೇಡಿಕೊಂಡಿದ್ದಾರೆ. ಅವರ ಜತೆ ಇನ್ನೊಂದಷ್ಟು ಜನ ಬಂದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಅವರು ಬೇಡಿಕೊಂಡಿದ್ದಾರೆ. ಇದೇ ರೀತಿ ಹಲವು ಸ್ಟಾರ್‍‌ ನಟರು ಈ ಹಿಂದೆಯೂ ನೇಮವನ್ನು ನೋಡಿ ಆಶಿರ್ವಾದ ಪಡೆಯಲು ಬಂದಿದ್ದರು. ನಟ ವಿಶಾಲ್ ಅಭಿಮಾನಿಗಳೂ ಸಹ ಈ ವಿಚಾರ ತಿಳಿದಾಗಿನಿಂದ ಅವರ ಸಮಸ್ಯೆಗೆ ಪರಿಹಾರ ಸಿಗಲಿ ಎಂದು ಬೇಡಿಕೊಳ್ಳುತ್ತಿದ್ಧಾರೆ.

ಜಾರಂದಾಯ ದೈವದ ಬಳಿ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡಿದ ನಟ ವಿಶಾಲ್
ಜಾರಂದಾಯ ದೈವದ ಬಳಿ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡಿದ ನಟ ವಿಶಾಲ್

Suma Gaonkar

eMail
Whats_app_banner