ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್; ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ ವಿರುದ್ಧ ದೂರು
Brundavana Serial Actor Varun Aradya: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಬೃಂದಾವನ ಸೀರಿಯಲ್ ನಟ ವರುಣ್ ಆರಾಧ್ಯ ವಿರುದ್ಧ ಕೇಸ್ ದಾಖಲಾಗಿದೆ. ಯುವತಿಯೊಬ್ಬರ ಖಾಸಗಿ ಫೋಟೋಗಳನ್ನಿಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದಾರೆ ನಟ ವರುಣ್.
Varun Aradya: ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿ, ಅಲ್ಲಿಂದ ಬೃಂದಾವನ ಸೀರಿಯಲ್ ಮೂಲಕ ಕಿರುತೆರೆಗೆ ಕಾಲಿಟ್ಟಿದ್ದ ನಟ ವರುಣ್ ಆರಾಧ್ಯ ವಿರುದ್ಧ ಇದೀಗ ಕೇಸ್ ದಾಖಲಾಗಿದೆ. ಈ ಸಂಬಂಧ ಯುವತಿಯೊಬ್ಬರು ಬೆಂಗಳೂರಿನ ಬಸವೇಶ್ವರ ಸೆನ್ ಪೊಲೀಸ್ ಠಾಣೆಯಲ್ಲಿ ವರುಣ್ ವಿರುದ್ಧ ದೂರು ದಾಖಲಿಸಿದ್ದಾರೆ.
ಯುವತಿಯ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನಿಟ್ಟುಕೊಂಡು ಬ್ಲಾಕ್ ಮೇಲ್ ಮಾಡೋದಾಗಿ ಹೆದರಿಸಿದ್ದ ಆರೋಪದಡಿ ವರುಣ್ ಆರಾಧ್ಯ ವಿರುದ್ಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಖಾಸಗಿ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡೋದಾಗಿ ವರುಣ್ ಬೆದರಿಸಿದ್ದಾರೆ ಎಂದು ದೂರಿನಲ್ಲಿ ಯುವತಿ ನಮೂದಿಸಿದ್ದಾಳೆ.
ಯುವತಿ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವರುಣ್ ಆರಾಧ್ಯ, ಇನ್ನೊಬ್ಬ ಯುವತಿಯ ಜತೆಗೆ ಅಫೇರ್ ಹೊಂದಿದ್ದರು. ಅದನ್ನು ಪ್ರಶ್ನೆ ಮಾಡಿದ್ದಕ್ಕೆ, ನಿಶ್ಚಿತಾರ್ಥವಾದ ಯುವತಿಯ ಕೆಲ ಖಾಸಗಿ ಫೋಟೋಗಳನ್ನಿಟ್ಟುಕೊಂಡು ವರುಣ್ ಹೆದರಿಸಿದ್ದ. ಸುಮ್ಮನಿದ್ದರೆ ಸರಿ ಇಲ್ಲದಿದ್ದರೆ, ಆ ಫೋಟೋಗಳನ್ನು ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಸಿದ್ದ.
ಮುಂದೆ ಬೇರೆ ಯಾರನ್ನಾದರೂ ಮದುವೆ ಆದರೆ, ಅವರನ್ನು ಸಾಯಿಸಿ, ನಿನ್ನನ್ನು ಸಾಯಿಸುವೆ ಎಂದು ಹೆದರಿಸಿದ್ದ. ಜತೆಗೆ ಅವಾಚ್ಯ ಪದಗಳಿಂದಲೂ ನಿಂದಿಸಿದ್ದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರ ಠಾಣೆ ಪೊಲೀಸರು, ಕ್ರಮಕ್ಕೆ ಮುಂದಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಪ್ರೀತಿಯಲ್ಲಿದ್ದ ವರುಣ್ ಆರಾಧ್ಯ ಮತ್ತು ಯುವತಿ, ಕಳೆದ ವರ್ಷವಷ್ಟೇ ನಾಲ್ಕು ವರ್ಷದ ಪ್ರೀತಿಯಿಂದ ಬ್ರೇಕ್ ಅಪ್ ಮಾಡಿಕೊಂಡು ಹೊರಬಂದಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರ ಪೋಸ್ಟ್ ಹಂಚಿಕೊಂಡು ದೂರವಾಗುತ್ತಿದ್ದೇವೆ ಎಂದಿದ್ದರು.