‘ನಿನ್ನ ಜೊತೆ ನನ್ನ ಕಥೆ’ ಸೀರಿಯಲ್‌ ಮೂಲಕ ಮತ್ತೆ ಕನ್ನಡಕ್ಕೆ ಮರಳಿದ ನಟ ನಿರಂಜನ್;‌ ಸ್ಟಾರ್‌ ಸುವರ್ಣದಲ್ಲಿ ಹೊಸ ಧಾರಾವಾಹಿ-television news star suvarna serials ninna jote nanna kathe new serial starts from september 30th on star suvarna mnk ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  ‘ನಿನ್ನ ಜೊತೆ ನನ್ನ ಕಥೆ’ ಸೀರಿಯಲ್‌ ಮೂಲಕ ಮತ್ತೆ ಕನ್ನಡಕ್ಕೆ ಮರಳಿದ ನಟ ನಿರಂಜನ್;‌ ಸ್ಟಾರ್‌ ಸುವರ್ಣದಲ್ಲಿ ಹೊಸ ಧಾರಾವಾಹಿ

‘ನಿನ್ನ ಜೊತೆ ನನ್ನ ಕಥೆ’ ಸೀರಿಯಲ್‌ ಮೂಲಕ ಮತ್ತೆ ಕನ್ನಡಕ್ಕೆ ಮರಳಿದ ನಟ ನಿರಂಜನ್;‌ ಸ್ಟಾರ್‌ ಸುವರ್ಣದಲ್ಲಿ ಹೊಸ ಧಾರಾವಾಹಿ

ಸ್ಟಾರ್‌ ಸುವರ್ಣದಲ್ಲಿ ಹೊಸ ಧಾರಾವಾಹಿ ಶುರುವಾಗುತ್ತಿದೆ. ನಿನ್ನ ಜೊತೆ ನನ್ನ ಕಥೆ ಹೆಸರಿನ ಸೀರಿಯಲ್‌ ಇದೇ ಸೋಮವಾರದಿಂದ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಸೀರಿಯಲ್‌ ಮೂಲಕ ಬಹುವರ್ಷಗಳ ಬಳಿಕ ಮತ್ತೆ ಕನ್ನಡಕ್ಕೆ ಮರಳಿದ್ದಾರೆ ನಟ ನಿರಂಜನ್.‌

‘ನಿನ್ನ ಜೊತೆ ನನ್ನ ಕಥೆ’ ಸೀರಿಯಲ್‌ ಮೂಲಕ ಮತ್ತೆ ಕನ್ನಡಕ್ಕೆ ಮರಳಿದ ನಟ ನಿರಂಜನ್;‌ ಸ್ಟಾರ್‌ ಸುವರ್ಣದಲ್ಲಿ ಹೊಸ ಧಾರಾವಾಹಿ
‘ನಿನ್ನ ಜೊತೆ ನನ್ನ ಕಥೆ’ ಸೀರಿಯಲ್‌ ಮೂಲಕ ಮತ್ತೆ ಕನ್ನಡಕ್ಕೆ ಮರಳಿದ ನಟ ನಿರಂಜನ್;‌ ಸ್ಟಾರ್‌ ಸುವರ್ಣದಲ್ಲಿ ಹೊಸ ಧಾರಾವಾಹಿ

Ninna jote Nanna Kathe Serial: ಕನ್ನಡ ಕಿರುತೆರೆಯಲ್ಲಿ ಅದೆಷ್ಟೋ ಮದುವೆ ಆಧಾರಿತ ಕಥೆಗಳು ಬಂದು ಹೋಗಿವೆ. ಆದರೆ ಇದೀಗ 'ನಿನ್ನ ಜೊತೆ ನನ್ನ ಕಥೆ' ಎಂಬ ಹೊಸ ಧಾರಾವಾಹಿಯ ಮೂಲಕ ವಿನೂತನ ಕಥೆಯನ್ನು ವೀಕ್ಷಕರಿಗೆ ಹೇಳಲು ಸಜ್ಜಾಗಿದೆ ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣ. ಈ ಸೀರಿಯಲ್‌ ಮೂಲಕ ವರ್ಷಗಳ ಬಳಿಕ ಕನ್ನಡಕ್ಕೆ ಮರಳಿದ್ದಾರೆ ನಟ ನಿರಂಜನ್. ಈ ಹಿಂದೆ ಕಮಲಿ ಸೀರಿಯಲ್‌ನಲ್ಲಿ ನಟಿಸಿ ನಾಡಿನ ಮನೆ ಮಾತಾಗಿದ್ದ ನಿರಂಜನ್‌, ತೆಲುಗು, ತಮಿಳು ಧಾರಾವಾಹಿಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಈಗ ಮತ್ತೆ ತವರಿಗೆ ಆಗಮಿಸಿದ್ದಾರೆ. ಅದೂ ನಿನ್ನ ಜೊತೆ ನನ್ನ ಕಥೆ ಸೀರಿಯಲ್‌ ಮೂಲಕ.

ಏನಿದು ಕಾಂಟ್ರ್ಯಾಕ್ಟ್‌ ಮದುವೆ ಕಥೆ?

ಕರ್ನಾಟಕದ ಸಕ್ಕರೆನಾಡು ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಈ ಕಥೆಯು ಕೇಂದ್ರೀಕೃತವಾಗಿರುತ್ತದೆ. ಸಾಮಾನ್ಯವಾಗಿ ಮನಸು- ಮನಸುಗಳ ಬೆಸುಗೆಯಿಂದ ಮದುವೆಯಾಗುತ್ತದೆ. ಆದರೆ ಇದೊಂಥರ ಡಿಫರೆಂಟ್ ಕಥೆ ಅಂತಾನೇ ಹೇಳಬಹುದು. ಕಥಾನಾಯಕಿ ಭೂಮಿ ಚಹಾ ಮಾರುವವಳು. ಆಕೆಗೆ ಪೊಲೀಸ್ ಕಾನ್ಸ್ಟೇಬಲ್ ಆಗಬೇಕೆಂಬ ಕನಸು. ಇನ್ನೊಂದು ಕಡೆ ಯಾರದ್ದೋ ಸಂಚಿಗೆ ಬಲಿಯಾಗಿ ಭೂಮಿಯ ತಾಯಿ ತಪ್ಪೇ ಮಾಡದಿದ್ರೂ ಜೈಲು ಸೇರಿರುತ್ತಾರೆ.

ಭೂಮಿ -ಆದಿ ಕಹಾನಿ

ಇನ್ನು ಈ ಕಥೆಯ ನಾಯಕ ಅಜಿತ್, ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ದು ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿರುತ್ತಾನೆ. ಮದುವೆ ಅಂದ್ರೇನೆ ಇಷ್ಟವಿರದ ಆದಿಗೆ ಮನೆಯಲ್ಲಿ ಮದುವೆಯ ತಯಾರಿ ಮಾಡುತ್ತಿರುತ್ತಾರೆ. ಮುಂದೆ, ಅನಿವಾರ್ಯ ಕಾರಣಗಳಿಂದಾಗಿ ಭೂಮಿ ಹಾಗೂ ಆದಿ ಇಬ್ಬರು ಪರಸ್ಪರ ಷರತ್ತುಗಳಿಗೆ ಒಪ್ಪಿಕೊಂಡು ಒಂದು ವರ್ಷದ ಕಾಂಟ್ರಾಕ್ಟ್ ಜತೆಗೆ ಮದುವೆಯಾಗ್ತಾರೆ. ಕಾಂಟ್ರಾಕ್ಟ್ ಮದುವೆಯಿಂದ ಒಂದಾದ ಈ ಜೀವಗಳ ಮನಸುಗಳು ಮುಂದೆ ಹೇಗೆ ಒಂದಾಗುತ್ತೆ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ಸೆ. 30ರಿಂದ ಸ್ಟಾರ್‌ ಸುವರ್ಣದಲ್ಲಿ

ಈ ಕಥೆಯ ನಾಯಕನ ಪಾತ್ರದಲ್ಲಿ ನಟಿಸುತ್ತಿರುವ ನಟ ನಿರಂಜನ್ ವರ್ಷಗಳ ಬಳಿಕ ನಿನ್ನ ಜೊತೆ ನನ್ನ ಕಥೆ ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಗೆ ಮರಳುತ್ತಿದ್ದಾರೆ. ನಾಯಕಿಯಾಗಿ ನಟಿ ನಿರುಷ ಗೌಡ ನಟಿಸುತ್ತಿದ್ದು ಕಥೆಯು ಅದ್ಬುತ ತಾರಾಬಳಗವನ್ನು ಹೊಂದಿದೆ. ಈ ಹೊಚ್ಚ ಹೊಸ ನಿನ್ನ ಜೊತೆ ನನ್ನ ಕಥೆ ಧಾರಾವಾಹಿ ಇದೇ ಸೋಮವಾರದಿಂದ (ಸೆ. 30) ರಾತ್ರಿ 8 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

mysore-dasara_Entry_Point