Threat to Sudeep: ನಟ ಸುದೀಪ್‌ಗೆ ಬೆದರಿಕೆ ಪತ್ರ.. ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರು
ಸುದೀಪ್ ಅವರ ಆಪ್ತ, ನಿರ್ಮಾಪಕ ಜ್ಯಾಕ್ ಮಂಜು, ಸುದೀಪ್ ಪರವಾಗಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ಧಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದು ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಬೆದರಿಕೆ ಒಡ್ಡಿದವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ.
ಇಂದು ( ಏ.5) ಮಧ್ಯಾಹ್ನ ಸ್ಯಾಂಡಲ್‌ವುಡ್ ನಟ ಸುದೀಪ್ ಬಿಜೆಪಿ ಪಕ್ಷ ಸೇರಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸುದೀಪ್ ಮಾತ್ರವಲ್ಲದೆ ದರ್ಶನ್ ಕೂಡಾ ಇಂದೇ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ. ಈ ನಡುವೆ ಸುದೀಪ್ ಅವರಿಗೆ 2 ಬೆದರಿಕೆ ಪತ್ರಗಳು ಬಂದಿದ್ದು ಈ ಸಂಬಂಧ ಪುಟ್ಟೇನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದೀಪ್ ಅವರ ಹೆಸರಿಗೆ 2 ಪತ್ರಗಳು ಬಂದಿದ್ದು ಆ ಪತ್ರಗಳಲ್ಲಿ ಕಿಚ್ಚನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಲಾಗಿದೆ. ಜೊತೆಗೆ ಬೆದರಿಕೆ ಕೂಡಾ ಒಡ್ಡಿದ್ಧಾರೆ ಎನ್ನಲಾಗಿದೆ. ನಿಮ್ಮ ಖಾಸಗಿ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಪತ್ರದಲ್ಲಿ ಬರೆಯಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಸಂಬಂಧ ಸುದೀಪ್ ಅವರ ಆಪ್ತ, ನಿರ್ಮಾಪಕ ಜ್ಯಾಕ್ ಮಂಜು, ಸುದೀಪ್ ಪರವಾಗಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ಧಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದು ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಬೆದರಿಕೆ ಒಡ್ಡಿದವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ನೀಡಿದ್ದಾರೆ. ಪತ್ರದಲ್ಲಿ ಸುದೀಪ್ ಅವರ ಇಮೇಜ್ ಹಾಳು ಮಾಡುವ ಪ್ರಯತ್ನ ಮಾಡಲಾಗಿದ್ದು ಅವರ ಮಾನಹಾನಿ ಆಗುವಂತ ಪದಗಳನ್ನು ಬಳಸಲಾಗಿದೆ ಎಂದು ತಿಳಿದುಬಂದಿದೆ. ಸಿಸಿಬಿ ಪೊಲೀಸರು ತನಿಖೆ ಕೈಗೊಂಡು ಪತ್ರ ಬರೆದ ವ್ಯಕ್ತಿಯನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ಧಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಮನರಂಜನೆ ಸುದ್ದಿಗಳು
ಇಂದು ಬಿಜೆಪಿಗೆ ಕಿಚ್ಚ ಸುದೀಪ್, ದರ್ಶನ್ ತೂಗುದೀಪ್ ಸೇರ್ಪಡೆ ಸಾಧ್ಯತೆ: ಬೊಮ್ಮಾಯಿಗೆ ಸಿನಿ ತಾರೆಗಳ ಬಲ
ಸಿನಿಮಾ ಮಂದಿ ರಾಜಕೀಯಕ್ಕೆ ಸೇರಿ ಶಾಸಕ, ಸಂಸದ, ಸಚಿವರಾಗಿ ಗುರುತಿಸಿಕೊಂಡಿರುವ ಅನೇಕ ಉದಾಹರಣೆಗಳಿವೆ. ವಿಧಾನಸಭೆ ಚುನಾವಣೆ ದಿನಾಂಕ ನಿಗದಿ ಆಗಿದೆ. ಈ ವೇಳೆ ರಾಜಕೀಯ ಪಕ್ಷಗಳು ಸಿನಿಮಾ ತಾರೆಯರನ್ನು ಪಕ್ಷಕ್ಕೆ ಸೆಳೆಯಲು ಕಸರತ್ತು ಮಾಡುತ್ತಿವೆ. ಈ ಹಿನ್ನೆಲೆ ಇಂದು ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಕೂಡಾ ರಾಜಕೀಯಕ್ಕೆ ಸೇರಲಿದ್ಧಾರೆ ಎನ್ನಲಾಗುತ್ತಿದೆ. ಮತ್ತೊಂದು ಮೂಲಗಳ ಪ್ರಕಾರ ಸುದೀಪ್ ಮಾತ್ರವಲ್ಲ ದರ್ಶನ್ ಕೂಡಾ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸಂಪೂರ್ಣ ಮಾಹಿತಿಗೆ ಈ ಲಿಂಕ್ ಒತ್ತಿ.
ಶಿಲ್ಪಾಶೆಟ್ಟಿ ವಿರುದ್ಧದ ಕೇಸ್ ವಜಾಗೊಳಿಸಿದ ಮುಂಬೈ ಸೆಷನ್ಸ್ ಕೋರ್ಟ್.. ಮುತ್ತಿನ ಕಥೆಗೆ ರಿಲೀಫ್
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಹಾಲಿವುಡ್ ನಟ ರಿಚರ್ಡ್ ಗೇರ್ ಮುತ್ತಿನ ಕಥೆಗೆ ಕೊನೆಗೂ ಫುಲ್ ಸ್ಟಾಪ್ ಬಿದ್ದಂತಾಗಿದೆ. ಕಾರ್ಯಕ್ರಮವೊಂದರಲ್ಲಿ ರಿಚರ್ಡ್ ಗೇರ್, ಶಿಲ್ಪಾ ಶೆಟ್ಟಿಗೆ ವೇದಿಕೆ ಮೇಲೆ ಮುತ್ತಿಟ್ಟ ಪ್ರಕರಣ ಭಾರೀ ಸದ್ದು ಮಾಡಿತ್ತು. ಇದೀಗ ಮುಂಬೈ ಸೆಷನ್ ಕೋರ್ಟ್, ಅಪರಾಧ ಪರಿಷ್ಕರಣೆ ಕೇಸನ್ನು ವಜಾಗೊಳಿಸಿದೆ. ಪೂರ್ತಿ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ.