Allu Arjun Arrested: ಪುಷ್ಪ 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತ, ಸಾವು ಪ್ರಕರಣ; ಪೊಲೀಸರಿಂದ ನಟ ಅಲ್ಲು ಅರ್ಜುನ್ ವಿಚಾರಣೆ
ಕನ್ನಡ ಸುದ್ದಿ  /  ಮನರಂಜನೆ  /  Allu Arjun Arrested: ಪುಷ್ಪ 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತ, ಸಾವು ಪ್ರಕರಣ; ಪೊಲೀಸರಿಂದ ನಟ ಅಲ್ಲು ಅರ್ಜುನ್ ವಿಚಾರಣೆ

Allu Arjun Arrested: ಪುಷ್ಪ 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತ, ಸಾವು ಪ್ರಕರಣ; ಪೊಲೀಸರಿಂದ ನಟ ಅಲ್ಲು ಅರ್ಜುನ್ ವಿಚಾರಣೆ

'ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಹೈದರಾಬಾದ್‌ನ ಚಿತ್ರಮಂದಿರದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಿಚಾರಣೆಗೆ ಠಾಣೆಗೆ ಕರೆಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ನಟ ಅಲ್ಲು ಅರ್ಜುನ್ ಬಂದನ
ನಟ ಅಲ್ಲು ಅರ್ಜುನ್ ಬಂದನ

ಹೈದರಾಬಾದ್: ‘ಪುಷ್ಪ ದಿ ರೂಲ್’ ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ (ಡಿ 13) ಅಲ್ಲು ಅರ್ಜುನ್ ಅವರನ್ನು ಅವರ ನಿವಾಸದಿಂದ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

‘ಪುಷ್ಪ ದಿ ರೂಲ್’ ಸಿನಿಮಾ ಪ್ರದರ್ಶನದ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಡಿ 4 ರಂದು ಹೈದರಾಬಾದ್‌ನ ಥಿಯೇಟರ್‌ನಲ್ಲಿ ನಡೆದ ಪ್ರೀಮಿಯರ್ ಶೋನಲ್ಲಿ ಕಾಲ್ತುಳಿತ ಉಂಟಾಗಿತ್ತು. ಇದೇ ಸಂದರ್ಭ ಒಂದು ಮಗು ಸಹ ಗಾಯಗೊಂಡಿತ್ತು.

ಅಂದು ಏನಾಗಿತ್ತು?
ಪುಷ್ಪ 2; ದಿ ರೂಲ್‌ ಚಿತ್ರ ಡಿ 5ರ ಗುರುವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಅದಕ್ಕೂ ಮುನ್ನ ನಡೆದ ಪ್ರೀಮಿಯರ್‌ ಶೋ ನೋಡಲು ಹೈದರಾಬಾದ್‌ನ ಕುಟುಂಬ ಚಿತ್ರಮಂದಿರಕ್ಕೆ ಭೇಟಿ ನೀಡಿತ್ತು. ಅದೇ ಸಂದರ್ಭದಲ್ಲಿ ಕಾಲ್ತುಳಿತ ಕೂಡ ಉಂಟಾಗಿತ್ತು. ಮೃತ ಮಹಿಳೆಯನ್ನು 39 ವರ್ಷದ ರೇವತಿ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ಅವರ 9 ವರ್ಷದ ಮಗ ಶ್ರೀತೇಜಾನನ್ನು ಆಂಬ್ಯುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿತ್ತು.

ಹೈದರಾಬಾದ್‌ನ ದಿಲ್‌ಸುಖ್‌ನಗರ ನಿವಾಸಿಯಾದ ರೇವತಿ ಅವರು ಪತಿ ಭಾಸ್ಕರ್ ಮತ್ತು ಮಗು ಶ್ರೀತೇಜಾ ಜೊತೆಗೆ ಆರ್‌ಟಿಸಿ ಕ್ರಾಸ್‌ ರೋಡ್‌ನಲ್ಲಿರುವ ಸಂಧ್ಯಾ ಥಿಯೇಟರ್‌ಗೆ ಬಂದಿದ್ದರು. ರಾತ್ರಿ 10.30 ರ ಸುಮಾರಿಗೆ ಕುಟುಂಬದೊಂದಿಗೆ ಥಿಯೇಟರ್‌ನಿಂದ ಹೊರಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿತ್ತು.