ಕನ್ನಡ ಸುದ್ದಿ  /  Entertainment  /  Tollywood Movie News Pavitra Lokesh And Naresh Starrer Matte Maduve Movie Released In Kannada On June 09 Mnk

Pavitra Lokesh: ಮತ್ತೆ ಮದುವೆಗೆ ಕನ್ನಡದಲ್ಲಿ ನಾನೇ ಡಬ್‌ ಮಾಡಿದ್ದೇನೆ, ಕನ್ನಡಿಗರು ಸ್ವೀಕರಿಸುತ್ತೀರಿ ಎಂದುಕೊಂಡಿದ್ದೇನೆ; ನರೇಶ್‌

ತೆಲುಗಿನಲ್ಲಿ ಕಳೆದ ವಾರ ಬಿಡುಗಡೆಯಾದ ಮಳ್ಳಿ ಪೆಳ್ಳಿ ಚಿತ್ರವೀಗ ಕನ್ನಡದಲ್ಲಿ ಮತ್ತೆ ಮದುವೆ ಹೆಸರಿನಲ್ಲಿ ಬಿಡುಗಡೆ ಆಗುತ್ತಿದೆ. ಇದೇ ಜೂನ್‌ 9ರಂದು ಕರ್ನಾಟಕದಲ್ಲಿ ಈ ಸಿನಿಮಾ ರಿಲೀಸ್‌ ಆಗಲಿದೆ.

ಮತ್ತೆ ಮದುವೆಗೆ ಕನ್ನಡದಲ್ಲಿ ನಾನೇ ಡಬ್‌ ಮಾಡಿದ್ದೇನೆ, ಕನ್ನಡಿಗರು ಸ್ವೀಕರಿಸುತ್ತೀರಿ ಎಂದುಕೊಂಡಿದ್ದೇನೆ; ನರೇಶ್‌
ಮತ್ತೆ ಮದುವೆಗೆ ಕನ್ನಡದಲ್ಲಿ ನಾನೇ ಡಬ್‌ ಮಾಡಿದ್ದೇನೆ, ಕನ್ನಡಿಗರು ಸ್ವೀಕರಿಸುತ್ತೀರಿ ಎಂದುಕೊಂಡಿದ್ದೇನೆ; ನರೇಶ್‌

Pavitra Lokesh- Naresh: ಕಳೆದ ಕೆಲ ತಿಂಗಳಿಂದ ನಿತ್ಯ ಒಂದಲ್ಲ ಒಂದು ಸುದ್ದಿಯಲ್ಲಿರುವ ನರೇಶ್‌ ಮತ್ತು ಪವಿತ್ರಾ ಲೋಕೇಶ್‌ ಜೋಡಿ ಇದೀಗ ಮತ್ತೆ ಮದುವೆ ಮೂಲಕ ಕರ್ನಾಟಕಕ್ಕೆ ಬಂದಿದೆ. ಅಂದರೆ, ಕಳೆದ ವಾರವಷ್ಟೇ ತೆಲುಗಿನಲ್ಲಿ ಬಿಡುಗಡೆಯಾಗಿದ್ದ ಮಳ್ಳಿ ಪೆಳ್ಳಿ ಸಿನಿಮಾ ಇದೀಗ ಕರುನಾಡಲ್ಲಿ ರಿಲೀಸ್‌ ಆಗಲಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ಬಗ್ಗೆ ಮಾಹಿತಿ ನೀಡಲು ಈ ಜೋಡಿ ಬೆಂಗಳೂರಿಗೆ ಬಂದಿತ್ತು. ಸಿನಿಮಾ ಬಗ್ಗೆಯೂ ಮಾಹಿತಿ ಹಂಚಿಕೊಂಡಿದೆ.

ನಟ ನರೇಶ್ ಮಾತನಾಡಿ, ಈಗಾಗಲೇ ತೆಲುಗಿನಲ್ಲಿ ಮಳ್ಳಿ ಪೆಳ್ಳಿ ಸಿನಿಮಾ ಬಿಡುಗಡೆಯಾಗಿ ಸಿನಿ ಪ್ರೇಕ್ಷಕರನ್ನು ರಂಜಿಸಿದೆ. ಮತ್ತೆ‌ ಮದುವೆ ಒಳ್ಳೆಯ ಕಂಟೆಂಟ್ ಇರುವ, ಸದ್ಯ ಸಮಾಜದಲ್ಲಿ ಗಂಡ, ಹೆಂಡತಿ ಸಂಬಂಧಗಳ ಕುರಿತ ಕಥಾಹಂದರವನ್ನು ಹೊಂದಿದೆ. ಈ ಸಿನಿಮಾ ನೋಡಿದವರೆಲ್ಲ ಚೆನ್ನಾಗಿದೆ ಎಂದು ಒಳ್ಳೆಯ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅಷ್ಟೇ ಸಾಕು ಎಂದು ಹೇಳಿದರು ಈಗ ಕನ್ನಡದಲ್ಲಿ ಜೂನ್ 9ರಂದು ಮತ್ತೆ ಮದುವೆ ಸಿನಿಮಾ ಬಿಡುಗಡೆ ಆಗುತ್ತಿದೆ ಎಂದರು.

ಇದನ್ನೂ ಓದಿ: ಹಿರಣ್ಯ ರಾಜವರ್ಧನನ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ; ಯುವನಟಿ ರಿಹಾನಾ ಫಸ್ಟ್‌ ಲುಕ್‌ ರಿಲೀಸ್‌

ನಾನೇ ಡಬ್‌ ಮಾಡಿದ್ದೇನೆ ಎಂದ ನರೇಶ್

ಮುಂದುವರಿದು, ರಂಗಸ್ಥಳಂ ಹಾಗೂ RRR, ಪುಷ್ಪ ಅಂತಹ ಪರಭಾಷೆಯ ಸಿನಿಮಾಗಳಿಗೆ ಕನ್ನಡದಲ್ಲಿ ಡಬ್ಬಿಂಗ್ ಜೊತೆಗೆ ಹಾಡುಗಳನ್ನ ಬರೆದಿರುವ ವರದರಾಜ್ ಚಿಕ್ಕಬಳ್ಳಾಪುರ ಮತ್ತೆ ಮದುವೆ ಸಿನಿಮಾಗೆ ಬಹಳ ಅಚ್ಚುಕಟ್ಟಾಗಿ ಡಬ್ಬಿಂಗ್ ಜೊತೆಗೆ ಅದ್ಭುತ ಹಾಡುಗಳನ್ನ ಕನ್ನಡದಲ್ಲಿ ಬರೆದಿದ್ದಾರೆ. ಇವರ ಸಹಾಯದಿಂದ ಮತ್ತೆ ಮದುವೆ ಚಿತ್ರದ ನನ್ನ ಪಾತ್ರಕ್ಕೆ ನಾನೇ ಡಬ್ಬಿಂಗ್ ಮಾಡಿದ್ದೇನೆ. ಕನ್ನಡಿಗರು ನೀವು ಚಿತ್ರವನ್ನು ಸ್ವೀಕರಿಸುತ್ತೀರಿ ಎಂದುಕೊಂಡಿದ್ದೇನೆ ಎಂದರು.

ಸಂದೇಶ ನೀಡುವ ಚಿತ್ರವಿದು ಎಂದ ಪವಿತ್ರಾ ಲೋಕೇಶ್

ವಿಜಯ್ ಕೃಷ್ಣ ಮೂವೀಸ್ ಮತ್ತೆ ಲಾಂಚ್ ಮಾಡಿ ಒಳ್ಳೆ ಸಿನಿಮಾ ಮಾಡಬೇಕು. ಈ ಬ್ಯಾನರ್ ನಲ್ಲಿ ಹಿಂದೆ ಬಂದ ಸಿನಿಮಾಗಳು ಮೆಸೇಜ್ ಓರಿಯೆಂಟೆಡ್ ಆಗಿತ್ತು. ಸಮಾಜಕ್ಕೆ ಒಳ್ಳೆ ವಿಷಯ ತಲುಪಿಸುವ ಕೆಲಸ ಮಾಡಿದ್ದರು. ವಿಜಯ್ ಕೃಷ್ಣ ಮೂವೀಸ್ ನಡಿ ಮತ್ತೊಂದು ಮೆಸೇಜ್ ಕೊಡುವಂತಹ ಸ್ಟ್ರಾಂಗ್ ಸಿನಿಮಾ ಮಾಡಬೇಕು ಎಂಬುವುದು ನರೇಶ್ ಅವರ ಉದ್ದೇಶವಾಗಿತ್ತು. ಮತ್ತೆ ಮದುವೆ ಕಥೆಯನ್ನು ಎಂ ಎಸ್ ರಾಜು ಅವರು ತಂದಾಗ ಕನ್ನಡದಲ್ಲಿಯೂ ಮಾಡಬೇಕು ಎಂದು ತೀರ್ಮಾನ ಮಾಡಿದೆವು. ತೆಲುಗು ಕನ್ನಡ ಎರಡು ಭಾಷೆಯಲ್ಲಿಯೂ ಒಟ್ಟಿಗೆ ಪ್ರಚಾರ ಮಾಡಲು ಕಷ್ಟವಾಗುತ್ತದೆ ಎಂದು ಮೊದಲು ತೆಲುಗಿನಲ್ಲಿ ಸಿನಿಮಾ ರಿಲೀಸ್ ಮಾಡಿದೆವು. ಜೂನ್ 9ಕ್ಕೆ ಕನ್ನಡದಲ್ಲಿ ಸಿನಿಮಾ ರಿಲೀಸ್ ಆಗ್ತಿದೆ. ಒಳ್ಳೊಳ್ಳೆ ಸಾಂಗ್ಸ್ ಇದೆ. ಒಳ್ಳೆ ಮೆಸೇಜ್ ಇದೆ ಎಂದರು.

ಇದನ್ನೂ ಓದಿ: ಪಾಪ, ಪುಣ್ಯ, ಕರ್ಮದ ಕಥೆಯಲ್ಲಿ ರಿಷಿ; ರುದ್ರ ಗರುಡ ಪುರಾಣ ಚಿತ್ರಕ್ಕೆ ನೀನಾಸಂ ಸತೀಶ್ ಹಾರೈಕೆ

ಮತ್ತೆ ಮದುವೆ ಸಿನಿಮಾವನ್ನು ನರೇಶ್ ಅವರೇ ನಿರ್ಮಾಣ ಮಾಡಿದ್ದಾರೆ. ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ 'ಸೂಪರ್ ಸ್ಟಾರ್‌' ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಇದೀಗ ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದಾರೆ.

ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಿದ್ದಾರೆ.‌

IPL_Entry_Point