ಕಲ್ಕಿ 2898 ಎಡಿ ಟ್ರೇಲರ್‌ ಬಿಡುಗಡೆ; ಹಾಲಿವುಡ್‌ ಸಿನಿಮಾಗಳೂ ಇದ್ರ ಮುಂದೆ ಚಿಂದಿ ಗುರೂ, ಜೂನ್‌ 27ಕ್ಕೆ ಚಿತ್ರಮಂದಿರಗಳಲ್ಲಿ ರಿಲೀಸ್‌-tollywood news kalki 2898 trailer released prabhas amitabh bachchan kamal hassan deepika padukone pcp ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  ಕಲ್ಕಿ 2898 ಎಡಿ ಟ್ರೇಲರ್‌ ಬಿಡುಗಡೆ; ಹಾಲಿವುಡ್‌ ಸಿನಿಮಾಗಳೂ ಇದ್ರ ಮುಂದೆ ಚಿಂದಿ ಗುರೂ, ಜೂನ್‌ 27ಕ್ಕೆ ಚಿತ್ರಮಂದಿರಗಳಲ್ಲಿ ರಿಲೀಸ್‌

ಕಲ್ಕಿ 2898 ಎಡಿ ಟ್ರೇಲರ್‌ ಬಿಡುಗಡೆ; ಹಾಲಿವುಡ್‌ ಸಿನಿಮಾಗಳೂ ಇದ್ರ ಮುಂದೆ ಚಿಂದಿ ಗುರೂ, ಜೂನ್‌ 27ಕ್ಕೆ ಚಿತ್ರಮಂದಿರಗಳಲ್ಲಿ ರಿಲೀಸ್‌

ಬಹುನಿರೀಕ್ಷಿತ ಕಲ್ಕಿ 2898 ಎಡಿ ಟ್ರೇಲರ್‌ ಬಿಡುಗಡೆಯಾಗಿದೆ. ಈ ಸಿನಿಮಾ ಇದೇ ಜೂನ್‌ 27ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಪ್ರಭಾಸ್‌, ಅಮಿತಾಬ್‌ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಕಲ್ಕಿ 2898 ಎಡಿ ಟ್ರೇಲರ್‌ ಬಿಡುಗಡೆ
ಕಲ್ಕಿ 2898 ಎಡಿ ಟ್ರೇಲರ್‌ ಬಿಡುಗಡೆ

ಬೆಂಗಳೂರು: ಹಾಲಿವುಡ್‌ ಸಿನಿಮಾಗಳನ್ನು ನೆನಪಿಸುವಂತಹ ಸಿನಿಮಾವೊಂದು ಟಾಲಿವುಡ್‌ನಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಪ್ರಭಾಸ್‌ ನಟನೆಯ ಕಲ್ಕಿ 2898 ಎಡಿ ಸಿನಿಮಾದ ಟ್ರೇಲರ್‌ ನೋಡಿದರೆ ಇದು ಹಾಲಿವುಡ್‌ನ ಸೈನ್ಸ್‌ ಫಿಕ್ಷನ್‌ ಸಿನಿಮಾಗಳಿಗಿಂತ ಯಾವುದೇ ರೀತಿಯಲ್ಲಿ ಕಡಿಮೆಯಿಲ್ಲದಂತೆ ಕಾಣಿಸುತ್ತದೆ. ಭವಿಷ್ಯದ ಯಾವುದೋ ಜಗತ್ತಿಗೆ ನಮ್ಮನ್ನು ನಿರ್ದೇಶಕ ನಾಗ್‌ ಅಶ್ವಿನ್‌ ಕೊಂಡೊಯ್ಯುವ ಸೂಚನೆಯಿದೆ.

ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ 'ಕಲ್ಕಿ 2898 AD' ಚಿತ್ರದ ಟ್ರೈಲರ್ ನಿನ್ನೆ ರಾತ್ರಿ ಬಿಡುಗಡೆಯಾಗಿದೆ. ಅಮೆಜಾನ್ ಪ್ರೈಮ್‌ನಲ್ಲಿ ಬಿ&ಬಿ ಬುಜ್ಜಿ ಮತ್ತು ಭೈರವ ಮುನ್ನುಡಿ ಬಿಡುಗಡೆಯಾದ ಬಳಿಕ, ಅಭಿಮಾನಿಗಳು ಈ ಚಿತ್ರದ ಟ್ರೇಲರ್‌ಗಾಗಿ ಕಾತುರದಿಂದ ಕಾದಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಟ್ರೇಲರ್‌ ರಿಲೀಸ್‌ ಮಾಡಲಾಗಿದೆ.

ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ 'ಕಲ್ಕಿ 2898 AD' ಚಿತ್ರದ ಎರಡು ನಿಮಿಷ ಮತ್ತು ಐವತ್ತೊಂದು ಸೆಕೆಂಡ್‌ಗಳ ಟ್ರೇಲರ್‌ ರಿಲೀಸ್‌ ಆಗಿದೆ. ವಿಎಫ್‌ಎಕ್ಸ್‌ನಿಂದಲೇ ನೋಡುಗರ ಗಮನ ಸೆಳೆದ ಈ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇದೀಗ ಟ್ರೇಲರ್‌ ಸಹ ಎಲ್ಲ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ.

“ಇಂದು ನನ್ನ ಹೃದಯವು ಹಲವು ಮಿಕ್ಸ್‌ಡ್‌ ಭಾವನೆಗಳಿಂದ ತುಂಬಿದೆ. ಒಬ್ಬ ಚಲನಚಿತ್ರ ನಿರ್ದೇಶಕನಾಗಿ, ನಾನು ಯಾವಾಗಲೂ ಭಾರತೀಯ ಪುರಾಣ ಮತ್ತು ವೈಜ್ಞಾನಿಕ ಕಾದಂಬರಿಗಳಿಂದ ಆಕರ್ಷಿತನಾಗಿದ್ದೇನೆ. ‘ಕಲ್ಕಿ 2898 AD’ ಚಿತ್ರದಲ್ಲಿ ಈ ಎರಡು ಅಂಶಗಳನ್ನು ವಿಲೀನಗೊಳಿಸಿದ್ದೇವೆ. ನಮ್ಮ ಕಲಾವಿದರು ಮತ್ತು ತಂಡದ ಅಸಾಧಾರಣ ಪ್ರತಿಭೆ ಮತ್ತು ಸಮರ್ಪಣಾ ಮನೋಭಾವದಿಂದ ಕನಸೊಂದು ನನಸಾಗಿದೆ" ಎಂದು ಚಿತ್ರದ ಟ್ರೇಲರ್ ಕುರಿತು ಮಾತನಾಡಿದ ನಿರ್ದೇಶಕ ನಾಗ್ ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಕಲ್ಕಿ 2898 AD’ ಪಾತ್ರವಾಗಿದೆ. ಈ ಸಿನಿಮಾದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಈ ಟ್ರೇಲರ್‌ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಈ ಟ್ರೇಲರ್‌ನಲ್ಲಿ ಕಮಲ್‌ ಹಾಸನ್‌ ಪ್ರಮುಖ ಹೈಲೈಟ್‌ ಎಂದು ಫ್ಯಾನ್ಸ್‌ ಹೇಳುತ್ತಿದ್ದಾರೆ. ಉಳಿದಂತೆ ಪ್ರಭಾಸ್‌ ಅಭಿಮಾನಿಗಳು ಟ್ರೇಲರ್‌ ಅನ್ನು ಹಾಡಿ ಹೊಗಳಿದ್ದಾರೆ. ಅಮಿತಾಬ್‌, ದೀಪಿಕಾ ಪಡುಕೋಣೆ ಪಾತ್ರಗಳೂ ಗಮನ ಸೆಳೆದಿವೆ.