ಕನ್ನಡ ಸುದ್ದಿ  /  ಮನರಂಜನೆ  /  ಕಲ್ಕಿ 2898 Ad ಚಿತ್ರದ ಬುಜ್ಜಿ ಅಂಡ್‌ ಭೈರವ ಅನಿಮೇಷನ್‌ ಸಿರೀಸ್‌ ನೋಡಿಲ್ವಾ? ಈ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ ನೋಡಿ

ಕಲ್ಕಿ 2898 AD ಚಿತ್ರದ ಬುಜ್ಜಿ ಅಂಡ್‌ ಭೈರವ ಅನಿಮೇಷನ್‌ ಸಿರೀಸ್‌ ನೋಡಿಲ್ವಾ? ಈ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ ನೋಡಿ

'ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್’ ಪ್ರಭಾಸ್‍ ಅಭಿನಯದ ‘ಕಲ್ಕಿ 2898 AD’ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರ. ಈವರೆಗೂ ಯಾರು ಮಾಡಿರದ ವಿನೂತನ ಪ್ರಯೋಗಕ್ಕೆ ಈ ಚಿತ್ರತಂಡ ಮುಂದಾಗಿದೆ‌. ಒಟಿಟಿಯಲ್ಲಿ ಅನಿಮೇಟೆಡ್‌ ಸಿರೀಸ್‌ವೊಂದನ್ನು ಬಿಡುಗಡೆ ಮಾಡಿ, ಪ್ರಚಾರ ಕೆಲಸ ಆರಂಭಿಸಿದೆ.

ಕಲ್ಕಿ 2898 AD ಚಿತ್ರದ ಬುಜ್ಜಿ ಅಂಡ್‌ ಭೈರವ ಅನಿಮೇಷನ್‌ ಸಿರೀಸ್‌ ನೋಡಿಲ್ವಾ? ಈ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ ನೋಡಿ
ಕಲ್ಕಿ 2898 AD ಚಿತ್ರದ ಬುಜ್ಜಿ ಅಂಡ್‌ ಭೈರವ ಅನಿಮೇಷನ್‌ ಸಿರೀಸ್‌ ನೋಡಿಲ್ವಾ? ಈ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ ನೋಡಿ

Kalki 2898 AD Animation Series: ಕಲ್ಕಿ 2898 AD ಸಿನಿಮಾ ಹತ್ತು ಹಲವು ವಿಚಾರಕ್ಕೆ ಸದ್ದು ಮಾಡುತ್ತಿದೆ. ಇನ್ನೇನು ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳುತ್ತಿರುವ ಈ ಕಲ್ಕಿ, ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೂಪರ್‌ ಹೀರೋ ಪರಿಕಲ್ಪನೆಯ ಸಿನಿಮಾ. ಇಂಥ ಸಿನಿಮಾವನ್ನು ಚಿತ್ರತಂಡ ವಿಶೇಷವಾಗಿಯೇ ಪ್ರಚಾರ ಮಾಡುತ್ತಿದೆ. ಆ ಪೈಕಿ ಭಾರತೀಯ ಸಿನಿಮಾ ಇತಿಹಾಸದಲ್ಲಿ ಯಾರೂ ಮಾಡದ ಸಾಹಸಕ್ಕೆ ಇಳಿದಿದೆ ಸಿನಿಮಾ ಟೀಮ್. ಸಿನಿಮಾದ ಝಲಕ್‌ಅನ್ನು ಟ್ರೇಲರ್‌ ರೂಪದಲ್ಲಿ ಹೊರತರುವುದಕ್ಕೂ ಮುನ್ನ, ಅನಿಮೇಟೆಡ್‌ ಸಿರೀಸ್‌ ರಿಲೀಸ್‌ ಮಾಡಿ ನೋಡುಗರ ಗಮನಸೆಳೆಯುತ್ತಿದೆ.

ಟ್ರೆಂಡಿಂಗ್​ ಸುದ್ದಿ

'ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್’ ಪ್ರಭಾಸ್‍ ಅಭಿನಯದ ‘ಕಲ್ಕಿ 2898 AD’ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರ. ಈವರೆಗೂ ಯಾರು ಮಾಡಿರದ ವಿನೂತನ ಪ್ರಯೋಗಕ್ಕೆ ಈ ಚಿತ್ರತಂಡ ಮುಂದಾಗಿದೆ‌. ಪ್ರಭಾಸ್ ಈ ಚಿತ್ರದಲ್ಲಿ ಭೈರವನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಭೈರವನ ನಂಬಿಕಸ್ಥ ಗೆಳೆಯನಾಗಿ ಬುಜ್ಜಿ (ವಿಶೇಷ ಕಾರ್)ಪಾತ್ರವಿದೆ‌. ಈ ಎರಡು ಪಾತ್ರಗಳನ್ನಿಟ್ಟುಕೊಂಡು ಚಿತ್ರತಂಡ B&B ಎಂಬ ಹದಿನೈದು ಹದಿನೈದು ನಿಮಿಷಗಳ ಎರಡು ಅನಿಮೇಷನ್‌ ಸಿರೀಸ್ ಬಿಡುಗಡೆ ಮಾಡಿದೆ.

ಇಂದಿನಿಂದ (ಮೇ 31) ಸ್ಟ್ರೀಮಿಂಗ್‌

ಈ ಬಗ್ಗೆ ನಿರ್ದೇಶಕ ನಾಗ್‌ ಅಶ್ವಿನ್‌ ಹೇಳುವುದೇನೆಂದರೆ, "ದೇಶದ ಪ್ರಮುಖ ನಗರಗಳ ಚಿತ್ರಮಂದಿರಗಳಲ್ಲಿ ಈ ಅನಿಮೇಷನ್‌ ಸಿರೀಸ್ ಏಕಕಾಲಕ್ಕೆ ಬಿಡುಗಡೆಯಾಗಿದೆ‌. ಈ ಎರಡು ಭಾಗಗಳು ಮೇ 31ರಿಂದ ಅಮೇಜಾನ್ ಪ್ರೈಮ್‌ನಲ್ಲಿ ನೋಡಲು ಲಭ್ಯವಿದೆ. ಈ ಅನಿಮೇಷನ್‌ ಸೀರಿಸ್‌ನಲ್ಲಿರುವ ಭೈರವ ಹಾಗೂ ಬುಜ್ಜಿಯ ಜುಗಲ್ ಬಂದಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಇದು ಚಿತ್ರದ ಪ್ರಚಾರಕಷ್ಟೇ ಮಾಡಿರುವ ಅನಿಮೇಷನ್‌ ಸಿರೀಸ್. ಚಿತ್ರದ ಕಥೆಯೆ ಬೇರೆ. ಇದೇ ಬೇರೆ ಎಂದಿದ್ದಾರೆ.

ಇಂಗ್ಲಿಷ್ ಮತ್ತು ತೆಲುಗಿನಲ್ಲಿ ಬಿಡುಗಡೆ

ಕಳೆದ ಅರ್ಧ ಶತಕದಿಂದ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ವೈಜಯಂತಿ ಮೂವೀಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಿದ್ದು, ಹೆಸರಾಂತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಮಾಡುತ್ತಿದೆ. ಬೆಂಗಳೂರಿನಲ್ಲೂ ಕಲ್ಕಿ 2898 AD ಚಿತ್ರದ ಅನಿಮೇಷನ್‌ ಸಿರೀಸ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕೆ.ವಿ.ಎನ್ ಪ್ರೊಡಕ್ಷನ್‌ನ ಸುಪ್ರೀತ್ ಮಾತನಾಡಿ, ಈ ಅನಿಮೇಷನ್‌ ಸಿರೀಸ್ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಲಾಗಿದೆ‌‌. ಎರಡು ಭಾಗಗಳಲ್ಲಿ ಇಂಗ್ಲೀಷ್ ಹಾಗೂ ತೆಲುಗು ಭಾಷೆಗಳಲ್ಲಿ ಮೂಡಿಬಂದಿರುವ ಈ ಅನಿಮೇಷನ್‌ ಸಿರೀಸ್ ಅನ್ನು ಅಮೇಜಾನ್ ಪ್ರೈಮ್ ನಲ್ಲಿ ವೀಕ್ಷಿಸಬಹುದು ಎಂದರು.

ಜೂನ್‌ 27ರಂದು ವಿಶ್ವದಾದ್ಯಂತ ಬಿಡುಗಡೆ

ಈ ವರ್ಷದ ಬಹು ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಟಿ20 ವರ್ಲ್ಡ್‌ಕಪ್ 2024