Kannada News  /  Entertainment  /  Vamana Movie Complete Shooting And Start Post Production
'ವಾಮನ' ಶೂಟಿಂಗ್‌ ಮುಗಿಸಿದ ಚಿತ್ರತಂಡ
'ವಾಮನ' ಶೂಟಿಂಗ್‌ ಮುಗಿಸಿದ ಚಿತ್ರತಂಡ

Vamana Movie Update: 'ವಾಮನ'ನಾಗಿ ಬರುತ್ತಿರುವ ಧನ್ವೀರ್‌ ಗೌಡ..ಶೂಟಿಂಗ್‌ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್‌ ಆರಂಭಿಸಿದ ಚಿತ್ರತಂಡ

06 February 2023, 19:40 ISTHT Kannada Desk
06 February 2023, 19:40 IST

ಉತ್ತಮ ಕಂಟೆಂಟ್, ಕಥೆ, ಒಂದೊಳ್ಳೆ ತಂಡದ ಜೊತೆ, ನಿರ್ಮಾಣ ಸಂಸ್ಥೆ ಜೊತೆ ಕೆಲಸ ಮಾಡಿರುವುದು ತುಂಬಾ ಖುಷಿ ಇದೆ. ಈ ಕಥೆ ಮೂಲಕ ಕರ್ನಾಟಕ ಜನತೆಯನ್ನು ರಂಜಿಸಲು ಬರುತ್ತಿದ್ದೇವೆ. ಚಿತ್ರದಲ್ಲಿ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದೇನೆ.

ಧನ್ವೀರ್ ಗೌಡ ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಎಂಟರ್ಟೈನ್ಮೆಂಟ್ 'ವಾಮನ' ಸಿನಿಮಾ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಆರಂಭಿಸಿದೆ. ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ಧನ್ವೀರ್ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ 'ವಾಮನ' ಸಿನಿಮಾ ತಂಡ ಇಂಟ್ರೊಡಕ್ಷನ್ ಹಾಡಿನ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ ಒಡೆದಿದೆ. ಈ ಸಮಯದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್ ರಾಮನ್ ''ಇದು ನನ್ನ ಮೊದಲ ಸಿನಿಮಾ. ಹಲವು ಸಿನಿಮಾದಲ್ಲಿ ರೈಟರ್ ಆಗಿ ಕೆಲಸ ಮಾಡಿದ್ದೇನೆ. 'ವಾಮನ' ಸಿನಿಮಾ ಸತತ ಒಂದು ವರ್ಷದ ಜರ್ನಿ. ಇಂದು ಹೀರೋ ಇಂಟ್ರೊಡಕ್ಷನ್ ಹಾಡನ್ನು ಸೆರೆ ಹಿಡಿಯಲಾಗಿದೆ. ಈ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ ಒಡೆಯುತ್ತಿದ್ದೇವೆ. 72 ದಿನಗಳ ಕಾಲ ಶೂಟ್ ಮಾಡಿದ್ದೇವೆ. ಕಲಾವಿದರು, ತಾಂತ್ರಿಕ ಬಳಗ ಬಹಳ ಬೆಂಬಲ ನೀಡಿದೆ. ಇದು ಪಕ್ಕಾ ಕಮರ್ಷಿಯಲ್‌ ಸಿನಿಮಾ.''

''ಪ್ರತಿಯೊಬ್ಬ ಮನುಷ್ಯನಲ್ಲೂ ಒಳ್ಳೆಯವನು ಕೆಟ್ಟವನು ಇರ್ತಾನೆ. ಒಳ್ಳೆಯವನಾಗಬೇಕಾ..? ಕೆಟ್ಟವನಾಗಬೇಕಾ ಎನ್ನುವುದನ್ನು ನಾವೇ ಆಯ್ಕೆ ಮಾಡಿಕೊಳ್ಳಬೇಕು. ಒಳ್ಳೆಯವನು, ಕೆಟ್ಟದರ ನಡುವಿನ ಭಿನ್ನತೆಯಲ್ಲಿ ಆತ ಯಾರೇ ಆಗಿದ್ದರೂ ಆತನಿಗೆ ಸಲ್ಲಬೇಕಾದದ್ದು ಸಲ್ಲುತ್ತದೆ ಎಂಬುದನ್ನು ಇಟ್ಟುಕೊಂಡು ಈ ಚಿತ್ರದ ಕಥೆ ಹೆಣೆಯಲಾಗಿದೆ. ನಿರ್ಮಾಪಕ ಚೇತನ್ ಗೌಡ ಅವರ ಸಹಕಾರದಿಂದ ಈ ಸಿನಿಮಾವನ್ನು ಇಲ್ಲಿವರೆಗೆ ಸುಸೂತ್ರವಾಗಿ ನಡೆಸಿಕೊಂಡು ಬರಲು ಸಾಧ್ಯವಾಗಿದೆ. ಅವರಿಗೆ ಧನ್ಯವಾದ ತಿಳಿಸಲು ಬಯಸುತ್ತೇನೆ.'' ಚಿತ್ರದಲ್ಲಿ ನಾಲ್ಕು ಹಾಡುಗಳು, ನಾಲ್ಕು ಫೈಟ್ ಇದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

ನಟ ಧನ್ವೀರ್ ಗೌಡ ಮಾತನಾಡಿ ಇಂದು ಚಿತ್ರೀಕರಣ ಮುಗಿಯುತ್ತಿದೆ. ''ಉತ್ತಮ ಕಂಟೆಂಟ್, ಕಥೆ, ಒಂದೊಳ್ಳೆ ತಂಡದ ಜೊತೆ, ನಿರ್ಮಾಣ ಸಂಸ್ಥೆ ಜೊತೆ ಕೆಲಸ ಮಾಡಿರುವುದು ತುಂಬಾ ಖುಷಿ ಇದೆ. ಈ ಕಥೆ ಮೂಲಕ ಕರ್ನಾಟಕ ಜನತೆಯನ್ನು ರಂಜಿಸಲು ಬರುತ್ತಿದ್ದೇವೆ. ಚಿತ್ರದಲ್ಲಿ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದೇನೆ. ಇದು ನನ್ನ ಮೂರನೇ ಸಿನಿಮಾ. ಎಲ್ಲರ ಆಶೀರ್ವಾದ ನಮ್ಮ ಚಿತ್ರದ ಮೇಲೆ ಇರಲಿ'' ಎಂದು ಮನವಿ ಮಾಡಿದರು.

ನಿರ್ಮಾಪಕ ಚೇತನ್ ಗೌಡ ಮಾತನಾಡಿ ''ಇದು ಈಕ್ವಿನಾಕ್ಸ್ ಗ್ಲೋಬಲ್ ಸಂಸ್ಥೆಯ ಮೊದಲ ಸಿನಿಮಾ. ಸತತ 72 ದಿನಗಳ ಚಿತ್ರೀಕರಣ ಇಂದು ಮುಕ್ತಾಯಗೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಕೂಡಾ ನಡೆಯುತ್ತಿದೆ. ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಲಿದ್ದೇವೆ'' ಎಂದು ತಮ್ಮ ಚಿತ್ರದ ಬಗ್ಗೆ ಮಾಹಿತಿ ನೀಡಿದರು.

'ವಾಮನ' ಸಿನಿಮಾವನ್ನು ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿ ಚೇತನ್ ಗೌಡ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಲವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಷಿಯಲ್ ಸಿನಿಮಾವಾಗಿರುವ ಈ ಚಿತ್ರದಲ್ಲಿ ಸಂಪತ್, ಆದಿತ್ಯ ಮೆನನ್, ಅಚ್ಯುತ್ ಕುಮಾರ್, ಅವಿನಾಶ್, ತಾರಾ, ಶಿವರಾಜ್. ಕೆ. ಆರ್. ಪೇಟೆ, ಪೆಟ್ರೋಲ್ ಪ್ರಸನ್ನ, ಕಾಕ್ರೋಚ್ ಸುಧಿ, ಜ್ಯೂನಿಯರ್ ಸಲಗ ಶ್ರೀಧರ್, ಸಚ್ಚಿದಾನಂದ, ಅರುಣ್ ಹಾಗೂ ಇನ್ನಿತರರು ನಟಿಸಿದ್ದಾರೆ. ಚಿತ್ರದ ಹಾಡುಗಳಿಗೆ ಬಿ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜು, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆಕ್ಷನ್, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ. ನೃತ್ಯ ನಿರ್ದೇಶಕ ಭೂಷಣ್, ನೃತ್ಯ ಸಂಯೋಜನೆ ಜೊತೆಗೆ ಧನ್ವೀರ್ ಸ್ನೇಹಿತನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.