Vinay Rajkumar Movie: ಸಿಂಪಲ್ ಸುನಿ-ವಿನಯ್ ರಾಜ್‌ಕುಮಾರ್ ಕಾಂಬಿನೇಶನ್‌ನ 'ಒಂದು ಸರಳ ಪ್ರೇಮಕಥೆ' ಪೋಸ್ಟರ್ ರಿಲೀಸ್
ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಮೈಸೂರಿನಲ್ಲಿ ಕೊನೆಯ ದಿನದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಸಿಂಪಲ್ ಸುನಿ ಮಾಹಿತಿ ನೀಡಿದರು.
ಸಿಂಪಲ್ ಸುನಿ ನಿರ್ದೇಶನದಲ್ಲಿ ವಿನಯ್ ರಾಜ್‌ಕುಮಾರ್ ನಟಿಸುತ್ತಿರುವ ರೊಮ್ಯಾಂಟಿಕ್ ಕಾಮಿಡಿ 'ಒಂದು ಸರಳ ಪ್ರೇಮಕಥೆ' ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರತಂಡ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿದೆ. ಮೊದಲ ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣದಲ್ಲಿ ಬ್ಯುಸಿ ಇದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ನಟ ವಿನಯ್ ರಾಜ್‌ಕುಮಾರ್, ''ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ಬಹಳ ಇಷ್ಟ. ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡಾ ಬಹಳ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು. ಈ ಚಿತ್ರದಲ್ಲಿ ಅತಿಶಯ್ ಪಾತ್ರದಲ್ಲಿ ನಟಿಸಿದ್ದೇನೆ. ಇದೊಂದು ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಅನ್ನೋದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತೆ. ಇದು ಸಿನಿಮಾದ ಒಂದು ಎಳೆ'' ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂದರು.
ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ 'ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ' ಗೆ ಇಟ್ಟ ಮೊದಲ ಟೈಟಲ್ 'ಒಂದು ಸರಳ ಪ್ರೇಮಕಥೆ'. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜ್ ಕುಮಾರ್ ಓಕೆ ಮಾಡಿದರು. ಚಿತ್ರಕ್ಕೆ ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಮೈಸೂರಿನಲ್ಲಿ ಕೊನೆಯ ದಿನದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಮಾಹಿತಿ ನೀಡಿದರು.
ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು ಎಂದು ಮಲ್ಲಿಕಾ ಸಿಂಗ್ ಮೊದಲ ಕನ್ನಡ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡರು. ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಹಾಗೂ ಇನ್ನಿತರರು 'ಒಂದು ಸರಳ ಪ್ರೇಮಕಥೆ' ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನವಿದೆ.
ಇನ್ನಷ್ಟು ಮನರಂಜನೆ ಸುದ್ದಿಗಳು
ಆನ್‌ಲೈನ್ ವಂಚನೆಗೆ ಬಲಿಯಾದ ನಗ್ಮಾ... ಮೊಬೈಲ್‌ಗೆ ಬಂದ ಲಿಂಕ್ ಕ್ಲಿಕ್ ಮಾಡಿ ಹಣ ಕಳೆದುಕೊಂಡ ನಟಿ
ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಕ್ರೈಂ ಹೆಚ್ಚು ವರದಿಯಾಗುತ್ತಿದೆ. ಎಷ್ಟೇ ಎಚ್ಚರಿಂದ ಇರುವಂತೆ ಮನವಿ ಮಾಡಿದರೂ ಜನರು ಮೋಸ ಹೋಗುತ್ತಲೇ ಇದ್ಧಾರೆ. ಇದೀಗ ಬಹುಭಾಷಾ ನಟಿ ನಗ್ಮಾ ಕೂಡಾ ತಮ್ಮ ಮೊಬೈಲ್‌ಗೆ ಬಂದ ಲಿಂಕ್‌ವೊಂದನ್ನು ಕ್ಲಿಕ್ ಮಾಡಿ ಒಂದು ಲಕ್ಷ ರೂಪಾಯಿ ಹಣ ಕಳೆದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಪೂರ್ತಿ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.
ಬೆಂಗಳೂರಿನಲ್ಲಿ ಮಹಿಳಾ ಬೈಕರ್ಸ್ ಬಳಿ ದುವರ್ತನೆ... ವಿರೋಧ ವ್ಯಕ್ತಪಡಿಸಿದ ಬಿಗ್ ಬಾಸ್ ಖ್ಯಾತಿಯ ಭೂಮಿ ಶೆಟ್ಟಿ.. ವಿಡಿಯೋ
ಮಹಿಳಾ ಬೈಕ್ ರೈಡರ್ಸ್ ಬಳಿ ವ್ಯಕ್ತಿಯೊಬ್ಬರು ಅಸಭ್ಯವಾಗಿ ನಡೆದುಕೊಂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆ ವ್ಯಕ್ತಿಯ ವರ್ತನೆಗೆ ಎಲ್ಲರಿಂದ ವಿರೋಧ ವ್ಯಕ್ತವಾಗುತ್ತಿದೆ. ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಭೂಮಿ ಶೆಟ್ಟಿ ಕೂಡಾ ಈ ವಿಡಿಯೋವನ್ನು ತಮ್ಮ ಸೋಷಿಯಲ್ ಮೀಡಿಯಾ ಸ್ಟೇಟಸ್‌ನಲ್ಲಿ ಹಂಚಿಕೊಂಡು ವಿರೋಧ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ.