Mangalore Innovation Hub: ಮಂಗಳೂರಿನಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ ಇನ್ನೋವೇಶನ್ ಹಬ್: ಅಶ್ವತ್ಥನಾರಾಯಣ ಘೋಷಣೆ
ಕನ್ನಡ ಸುದ್ದಿ  /  ಕರ್ನಾಟಕ  /  Mangalore Innovation Hub: ಮಂಗಳೂರಿನಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ ಇನ್ನೋವೇಶನ್ ಹಬ್: ಅಶ್ವತ್ಥನಾರಾಯಣ ಘೋಷಣೆ

Mangalore Innovation Hub: ಮಂಗಳೂರಿನಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ ಇನ್ನೋವೇಶನ್ ಹಬ್: ಅಶ್ವತ್ಥನಾರಾಯಣ ಘೋಷಣೆ

ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಯನ್ನು ಉತ್ತೇಜಿಸಲು ನಗರದಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ 'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲಾಗುವುದು. ಜತೆಗೆ ಮಂಗಳೂರು ಔದ್ಯಮಿಕ ಕ್ಲಸ್ಟರ್ ಗೆ 25 ಕೋಟಿ ರೂಪಾಯಿಗಳ ಬೀಜನಿಧಿ ಕೊಡಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಶನಿವಾರ ಘೋಷಿಸಿದ್ದಾರೆ.

ಮಂಗಳೂರು ಟೆಕ್ನೋವಾನ್ಜಾ
ಮಂಗಳೂರು ಟೆಕ್ನೋವಾನ್ಜಾ (‌HT)

ಮಂಗಳೂರು: ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಯನ್ನು ಉತ್ತೇಜಿಸಲು ನಗರದಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ 'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲಾಗುವುದು. ಕಿಯೋನಿಕ್ಸ್ ಮೂಲಕ ಇದನ್ನು ನಿರ್ಮಿಸಲಾಗುವುದು. ಜತೆಗೆ ಮಂಗಳೂರು ಔದ್ಯಮಿಕ ಕ್ಲಸ್ಟರ್ ಗೆ 25 ಕೋಟಿ ರೂಪಾಯಿಗಳ ಬೀಜನಿಧಿ ಕೊಡಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಶನಿವಾರ ಘೋಷಿಸಿದ್ದಾರೆ.

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮಂಗಳೂರು ಕ್ಲಸ್ಟರ್ ವತಿಯಿಂದ ಆಯೋಜಿಸಲಾಗಿರುವ ಮಂಗಳೂರು ಟೆಕ್ನೋವಾನ್ಜಾ ಅಂಗವಾಗಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಮಾತನಾಡಿದರು.

ಇನ್ಫೋಸಿಸ್ ಮತ್ತು ಇತರ ಕಂಪನಿಗಳ ಸಹಕಾರ ಪಡೆದು 2 ಲಕ್ಷ ಚದರಡಿ ವಿಸ್ತೀರ್ಣದ ಜಾಗದ ವ್ಯವಸ್ಥೆ ಮಾಡಿಕೊಂಡು 'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲು ಅನುವು ಮಾಡಿಕೊಡಲಾಗುವುದು. ಇದು ದಕ್ಷಿಣ ಕನ್ನಡ ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಗೆ ಇಂಬು ನೀಡಲಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ದಕ್ಷಿಣ ಕನ್ನಡ ಭಾಗವು ಮೊದಲಿನಿಂದಲೂ ಬ್ಯಾಂಕಿಂಗ್ ಚಟುವಟಿಕೆಗಳಿಗೆ ಹೆಸರಾಗಿದೆ.‌ ಅದಕ್ಕೆ ಪೂರಕವಾದ ಕಾರ್ಯ ಪರಿಸರ ಇಲ್ಲಿದೆ.‌ ಇದನ್ನು ಗಮನದಲ್ಲಿರಿಸಿಕೊಂಡು ಮಂಗಳೂರು ವಲಯವನ್ನು ಫಿನ್ ಟೆಕ್ ಹಬ್ ಆಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ವಿವರಿಸಿದರು.

ಮಂಗಳೂರು ಕ್ಲಸ್ಟರ್ ನಲ್ಲಿ 50 ಫಿನ್ಟೆಕ್ ಕಂಪನಿಗಳನ್ನು ಸ್ಥಾಪಿಸಬೇಕು ಎನ್ನುವುದು ಸರಕಾರದ ಗುರಿ ಆಗಿದೆ. ಈ ಮೂಲಕ 2030ರ ವೇಳೆಗೆ ರಾಜ್ಯವು ನಡೆಸಲು ಉದ್ದೇಶಿಸಿರುವ 500 ಬಿಲಿಯನ್ ಡಾಲರ್ ವಹಿವಾಟಿನಲ್ಲಿ ಅರ್ಧದಷ್ಟು ಕೊಡುಗೆ ಈ ಭಾಗದ ಉದ್ದಿಮೆಗಳಿಂದಲೇ ಬರುವಂತೆ ಆಗಬೇಕು ಎಂದು ಅಶ್ವತ್ಥ ನಾರಾಯಣ ಇದೇ ವೇಳೆ ಆಶಿಸಿದರು.

ಬೆಂಗಳೂರು ನಗರವು ದೇಶದ ಸಿಲಿಕಾನ್ ವ್ಯಾಲಿ ಎಂದು ಹೆಸರಾಗಿರುವಂತೆ, ಮಂಗಳೂರು ನಗರವು ದೇಶದ 'ಸಿಲಿಕಾನ್ ಬೀಚ್' ಎಂದು ಹೆಸರಾಗಬೇಕೆಂದು ಇದೇ ಸಂದರ್ಭದಲ್ಲಿ ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಆಶಿಸಿದರು.

ಇದೇ ಸಂದರ್ಭದಲ್ಲಿ ಸರ್ಕಾರವು ವಿವಿಧ ಕಂಪನಿಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕಿತು. ಜತೆಗೆ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಕ್ಯಾಶ್ ಫ್ರೀ ಕಂಪನಿಯ ಮಂಗಳೂರು ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಇದ್ದರು.

ಹಾಗೆಯೇ ಐಟಿ-ಬಿಟಿ ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ ವಿ ರಮಣ ರೆಡ್ಡಿ, ಉದ್ಯಮಿ ಮೋಹನ್ ದಾಸ್ ಪೈ, ಕೆಡಿಇಎಂ ಅಧ್ಯಕ್ಷ ಬಿ ವಿ ನಾಯ್ಡು, ರಾಜ್ಯ ಸರ್ಕಾರದ ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಐಟಿ ನಿರ್ದೇಶಕ ಡಾ.ಶಿವಶಂಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇಂದಿನ ಪ್ರಮುಖ ಸುದ್ದಿಗಳು

Bengaluru BMTC: ಹೊಸದಾಗಿ 921 ಎಲೆಕ್ಟ್ರಿಕ್ ಬಸ್‌ಗಳ ಖರೀದಿಗೆ ಬಿಎಂಟಿಸಿ ಒಪ್ಪಂದ

ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆ, ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್, ಲೋ-ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳನ್ನು ಪೂರೈಸಲಿದೆ. ಅಲ್ಲದೆ ಮುಂದಿನ 12 ವರ್ಷಗಳ ಅವಧಿಗೆ ನಗರದಲ್ಲಿ ಅವುಗಳ ಓಡಾಟದ ಕಾರ್ಯಾಚರಣೆ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಅದಕ್ಕೆ ನೀಡಲಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

Mental health services for rural people: ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಗ್ರಾಮೀಣ ಜನರಿಗೆ ಮಾನಸಿಕ ಆರೋಗ್ಯ ಸೇವೆ: ಸುಧಾಕರ್‌

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಗ್ರಾಮೀಣ ಜನರಿಗೆ ಮಾನಸಿಕ ಆರೋಗ್ಯ ಸೇವೆಯನ್ನು ನೀಡಲಾಗುತ್ತದೆ. ಬ್ರೈನ್‌ ಹೆಲ್ತ್‌ ಇನೀಶಿಯೇಟಿವ್‌ ತಂದ ಮೊದಲ ರಾಜ್ಯ ಕರ್ನಾಟಕ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

Whats_app_banner