ಕನ್ನಡ ಸುದ್ದಿ  /  Karnataka  /  2 Stabbed After 2 Groups Clash As Ram Navami Procession Hassan

Hassan News: ಹಾಸನದಲ್ಲಿ ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಭೆ, ಇಬ್ಬರಿಗೆ ಚಾಕು ಇರಿತ

ಮಸೀದಿ ಮುಂದೆ ಮೆರವಣಿಗೆ ಹಾದು ಹೋಗುತ್ತಿರುವ ಸಂದರ್ಭದಲ್ಲಿ ಅನ್ಯಕೋಮಿನ ಇಬ್ಬರು ದುಷ್ಕರ್ಮಿಗಳು ಮೆರವಣಿಗೆಯ ನಡುವೆ ಸೇರಿಕೊಂಡು ನಾಲ್ವರಿಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ.

Hassan News: ಹಾಸನದಲ್ಲಿ ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಭೆ, ಇಬ್ಬರಿಗೆ ಚಾಕು ಇರಿತ
Hassan News: ಹಾಸನದಲ್ಲಿ ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಭೆ, ಇಬ್ಬರಿಗೆ ಚಾಕು ಇರಿತ

ಹಾಸನ: ರಾಮನವಮಿ ಪ್ರಯುಕ್ತ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಸೀದಿ ಮುಂದೆ ಮೆರವಣಿಗೆ ಸಾಗುತ್ತಿರುವಾಗ ಎರಡು ಗುಂಪುಗಳ ನಡುವೆ ಮಾರಾಮಾರಿ ಸಂಭವಿಸಿ ಹಿಂಸಾಚಾರಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಇಬ್ಬರಿಗೆ ಚೂರಿ ಇರಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಟ್ಟು ನಾಲ್ಕು ಜನರಿಗೆ ಗಾಯವಾಗಿದೆ. ಅವರಲ್ಲಿ ಮೂವರನ್ನು ಮುರುಳಿ ಹರ್ಷ ಮತ್ತು ರಾಖಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಿಗುವಿನ ವಾತಾವರಣವಿದೆ.

ಹಿಂದು ಸಂಘಟನೆಗಳ ಕಾರ್ಯಕರ್ತರು ರಾಮನವಮಿ ಮೆರವಣಿಗೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಮಸೀದಿ ಮುಂದೆ ಮೆರವಣಿಗೆ ಹಾದು ಹೋಗುತ್ತಿರುವ ಸಂದರ್ಭದಲ್ಲಿ ಅನ್ಯಕೋಮಿನ ಇಬ್ಬರು ದುಷ್ಕರ್ಮಿಗಳು ಮೆರವಣಿಗೆಯ ನಡುವೆ ಸೇರಿಕೊಂಡು ನಾಲ್ವರಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಚನ್ನರಾಯಪಟ್ಟಣದ ಬಳಿ ಭಜರಂಗದಳ ಕಾರ್ಯಕರ್ತರು ರಾಮನವಮಿ ಮೆರವಣಿಗೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೆರವಣಿಗೆ ಬೇಗೂರು ರಸ್ತೆಯಲ್ಲಿರುವ ಮಸೀದಿ ಹತ್ತಿರ ತಲುಪಿದಾಗ ಇಬ್ಬರು ಬಜರಂಗದಳದ ಕಾರ್ಯಕರ್ತರೊಂದಿಗೆ ವಾಗ್ವಾದ ನಡೆಸಿ ನಾಲ್ವರಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮೀಯಾ ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗುತ್ತಿದ್ದ ವೇಳೆ ಎರಡು ಕೋಮಿನ ಯುವಕರ ಜಗಳ ನಡೆದಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮೆರವಣಿಗೆಯಲ್ಲಿದ್ದ ಯುವಕರ ಹೊಟ್ಟೆ ಮತ್ತು ಕುತ್ತಿಗೆ ಭಾಗಕ್ಕೆ ದುಷ್ಕರ್ಮಿಗಳು ಇರಿದ್ದಾರೆ.

ಘಟನೆ ನಡೆದ ತಕ್ಷಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಸಂಬಂಧ ದೂರು ಪ್ರತಿದೂರು ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಸನ ಜಿಲ್ಲೆಯ ವಿವಿಧ ಭಾಗಗಳಿಂದ ಪೊಲೀಸರನ್ನು ನಿಯೋಜಿಸಲಾಗಿದೆ.

ಮೆಟ್ಟಿಲುಬಾವಿ ಕುಸಿದು ಸಾವು

ರಾಮ ನವಮಿಯಂದೇ ಮಧ್ಯಪ್ರದೇಶದ ಇಂದೋರ್‌ನ ದೇವಸ್ಥಾನವೊಂದರಲ್ಲಿ ನಿನ್ನೆ ದುರಂತವೊಂದು ಸಂಭವಿಸಿತ್ತು. ಇಂದೋರ್‌ನ ಬೆಲೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 13 ಮಂದಿ ಮೃತಪಟ್ಟಿದ್ದರು. ಈ ದೇವಸ್ಥಾನದಲ್ಲಿರುವ ಪುರಾತನ ಮೆಟ್ಟಿಲುಬಾವಿ ಇದಾಗಿದೆ. ಮೃತಪಟ್ಟ 13 ಜನರಲ್ಲಿ 10 ಮಂದಿ ಮಹಿಳೆಯರಾಗಿದ್ದಾರೆ. ಒಟ್ಟು 19 ಮಂದಿಯನ್ನು ರಕ್ಷಿಸಲಾಗಿದ್ದು, ಇವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್​ ಮಿಶ್ರಾ ಮಾಹಿತಿ ನೀಡಿದ್ದಾರೆ. ಪುರಾತನ ಬಾವಿಯ ಮೇಲ್ಛಾವಣಿಯ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಭಾರವನ್ನು ತಡೆಯಲು ಸಾಧ್ಯವಾಗದೆ ಮೇಲ್ಛಾವಣಿ ಕುಸಿದಿದೆ ಎಂದು ಪಿಟಿಐ ವರದಿ ಮಾಡಿದೆ. ಈ ಕುರಿತ ವರದಿ ಇಲ್ಲಿದೆ ಓದಿ.