ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ದಿನಗಣನೆ, ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ದಿನಗಣನೆ, ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ದಿನಗಣನೆ, ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ದ್ವಿತೀಯ ಪಿಯುಸಿ ಪರೀಕ್ಷೆ 2: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 2 ಏಪ್ರಿಲ್ 24 ರಿಂದ ಮೇ 8ರ ತನಕ ನಡೆಯಲಿದ್ದು, ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ದಿನಗಣನೆ ಶುರುವಾಗಿದೆ. ಇದಕ್ಕೆ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ದಿನಗಣನೆ ಶುರುವಾಗಿದೆ. ಇದಕ್ಕೆ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ 2: ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ 2 ಏಪ್ರಿಲ್ 24 ರಿಂದ ಮೇ 8ರ ತನಕ ನಡೆಯಲಿದೆ. ಈಗಾಗಲೇ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸಿದ್ದಪಡಿಸಲು ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ಅಣುಕು ಪರೀಕ್ಷೆಗಳನ್ನು ನಡೆಸುವುದರ ಕಡೆಗೆ ಅಧಿಕಾರಿಗಳು ಗಮನಹರಿಸಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಧಿಕಾರಿಗಳಿಗೆ ಸಚಿವರ ಸೂಚನೆ

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಸಿದ್ದತೆಗಳ ಪರಿಶೀಲನೆ ನಡೆಸುವುದಕ್ಕೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಶಿಕ್ಷಣ ಸಚಿವರು, ಪರೀಕ್ಷಾ ಸಂಬಂಧ ಕೈಗೊಗೊಳ್ಳಬೇಕಾಗಿರುವ ವಿವಿಧ ವಿಷಯಗಳ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಸುತ್ತಿದ್ದು, 2025ರ ದ್ವಿತೀಯ ಪಿಯುಸಿ ಪರೀಕ್ಷೆ - 1 ಕ್ಕೆ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ಪರೀಕ್ಷೆ-2 ಅಥವಾ ಪರೀಕ್ಷೆ-3 ಕ್ಕೆ ಮಂಡಳಿಯ ನಿಯಮಾನುಸಾರ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಮಕ್ಕಳು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಹೇಳಿದರು.

ಈಗಾಗಲೇ ಎರಡನೇ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇಲಾಖೆಯಿಂದ ವಿದ್ಯಾರ್ಥಿಗಳನ್ನು ಸಿದ್ದಪಡಿಸಲು ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ಅಣುಕು ಪರೀಕ್ಷೆಗಳನ್ನು ನೆಡಸಲಾಗುತ್ತಿದ್ದು ಇದರ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳು ಗಮನಹರಿಸಬೇಕು. ಜೊತೆಗೆ ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ವಿದ್ಯಾರ್ಥಿಗಳ ಪೋಷಕರು ಮಕ್ಕಳ ಪರೀಕ್ಷೆ ಬರೆಯಲು ಹೆಚ್ಚಿನ ಕಾಳಜಿ ವಹಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ 2 ವೇಳಾಪಟ್ಟಿ

ಏಪ್ರಿಲ್ 24: ಕನ್ನಡ, ಅರೇಬಿಕ್

ಏಪ್ರಿಲ್ 25: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ

ಏಪ್ರಿಲ್ 26: ಇತಿಹಾಸ, ಭೌತಶಾಸ್ತ್ರ

ಏಪ್ರಿಲ್ 28 : ಭೂಗೋಳಶಾಸ್ತ್ರ ಮನಃ ಶಾಸ್ತ್ರ, ರಾಸಾಯನಶಾಸ್ತ್ರ ಮೂಲಗಣಿತ

ಮೇ 2: ತರ್ಕಶಾಸ್ತ್ರ ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ

ಮೇ 3: ಸಮಾಜಶಾಸ್ತ್ರ ಭೂಗರ್ಭಶಾಸ್ತ್ರ ವಿದ್ಯುನ್ಮಾನ ಶಾಸ್ತ್ರ ಗಣಕ ವಿಜ್ಞಾನ

ಮೇ 6: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ

ಮೇ 8: ತಮಿಳು, ತೆಲುಗು, ಉರ್ದು, ಮಲಯಾಳಂ, ಮರಾಠಿ, ಸಂಸ್ಕೃತ, ಫ್ರೆಂಚ್, ಎನ್‌ಎಸ್‌ಕ್ಯೂಎಫ್‌

ದ್ವಿತೀಯ ಪಿಯುಸಿ ಪರೀಕ್ಷೆ 2 ಮತ್ತು ಪರೀಕ್ಷೆ 3 ಪುನಃ ಬರೆಯುವರಿಗೆ ಶುಲ್ಕ ವಿನಾಯಿತಿ

ವಿಶೇಷವಾಗಿ ವಲಸೆ ಕಾರ್ಮಿಕರ ಮಕ್ಕಳನ್ನು ಗಮನಹರಿಸಿ ಅವರನ್ನು ಗುರುತಿಸಿ ಕಡ್ಡಾಯವಾಗಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರುಪಡಿಸಲು ಬೇಕಾದ ಎಲ್ಲಾ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದು, ಈ ವರ್ಷದ ವಿದ್ಯಾರ್ಥಿಗಳು ಯಾವುದೇ ಶುಲ್ಕವಿಲ್ಲದೇ ಉಚಿತವಾಗಿ ಪರೀಕ್ಷೆ ಬರೆಯಬಹುದಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಲಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಿಯಾಗದಂತೆ ಕ್ರಮ ಕೈಗೊಳ್ಳಲು ನಿರ್ದೇಶಿಸಿದರು.

ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಪದವಿ ಪೂರ್ವ ನಿರ್ದೇಶಕಿ ಸಿಂಧೂ ಬಿ ರೂಪೇಶ್, ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷ ಬಸವರಾಜೇಂದ್ರ, ಡಿ.ಎಸ್.ಇ.ಆರ್.ಟಿ ನಿರ್ದೇಶಕ ಹೆಚ್.ಎನ್ ಗೋಪಾಲಕೃಷ್ಣ ಉಪಸ್ಥಿತರಿದ್ದರು.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner