ಪಿಯುಸಿ ಫಲಿತಾಂಶ 2025: ದ್ವಿತೀಯ ಪಿಯುಸಿ ಪರೀಕ್ಷೆ 2ರ ರಿಸಲ್ಟ್ ಪ್ರಕಟ, 60692 ವಿದ್ಯಾರ್ಥಿಗಳು ಪಾಸ್, ಫಲಿತಾಂಶ ನೋಡುವ ನೇರ ಲಿಂಕ್ ಇಲ್ಲಿದೆ
ದ್ವಿತೀಯ ಪಿಯುಸಿ ಫಲಿತಾಂಶ 2025: ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ ಬರೆದ 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಪಾಸ್ ಆಗಿರುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ 2025: ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1ರಲ್ಲಿ ಫಲಿತಾಂಶ ಪೂರ್ಣಗೊಂಡಿರದ 1,53,620 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆದಿದ್ದರು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿದ್ದ 1.70 ಲಕ್ಷ ವಿದ್ಯಾರ್ಥಿಗಳಲ್ಲಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ 2ಕ್ಕೆ ನೋಂದಾಯಿಸಿಕೊಂಡಿದ್ದರು. ಪರೀಕ್ಷಾ ಶುಲ್ಕ ಇಲ್ಲದೇ ನೋಂದಣಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ನೀಡಿದ ಕಾರಣ ಶೇ 92.4ರಷ್ಟು ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. 71,964 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗೆ ಹಾಜರಾಗಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆ 2ರ ರಿಸಲ್ಟ್ ಪ್ರಕಟ, 60,692 ವಿದ್ಯಾರ್ಥಿಗಳು ಪಾಸ್
ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1ರಲ್ಲಿ ಫಲಿತಾಂಶ ಪೂರ್ಣಗೊಂಡಿರದ ಹಾಗೂ ಹೊಸದಾಗಿ 1,53,620 ವಿದ್ಯಾರ್ಥಿಗಳು ಮರುಪರೀಕ್ಷೆ ಬರೆದಿದ್ದು, ಈ ಪೈಕಿ 41,719 ಉತ್ತೀರ್ಣರಾಗಿದ್ದಾರೆ. ಇನ್ನುಳಿದಂತೆ, 71,964 ವಿದ್ಯಾರ್ಥಿಗಳು ಅಂಕ ಸುಧಾರಿಸುವುದಕ್ಕಾಗಿ ಪರೀಕ್ಷೆ ಬರೆದಿದ್ದು, ಈ ಪೈಕಿ 41,719 ಅಂಕ ಸುಧಾರಿಸಿಕೊಂಡಿರುವುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ ವೃದ್ಧಿ
ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರಲ್ಲಿ ಫಲಿತಾಂಶವೂ ಹೆಚ್ಚಳವಾಗಿದ್ದು ಈಗ ಒಟ್ಟು ಶೇಕಡ 81.94 ಆಗಿದೆ. ಪರೀಕ್ಷೆ 1 ರಲ್ಲಿ ಹೊಸಬರು 4,68,439 ವಿದ್ಯಾರ್ಥಿಗಳು, ಪರೀಕ್ಷೆ 2 ರಲ್ಲಿ 54,168 ವಿದ್ಯಾರ್ಥಿಗಳು ಸೇರಿ 5,22,607 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇನ್ನು, ಪುನರಾವರ್ತಿತರು ಹಾಗೂ ಖಾಸಗಿ ವಿದ್ಯಾರ್ಥಿಗಳನ್ನು ಒಳಗೊಂಡ ಫಲಿತಾಂಶ ಗಮನಿಸುವುದಾದರೆ, ಒಟ್ಟು ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ 6,88,678. ಈ ಪೈಕಿ ಪರೀಕ್ಷೆ 1 ರಲ್ಲಿ 4,76,256 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಪರೀಕ್ಷೆ 2ರಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು ಉತ್ತೀರ್ಣರಾದವರು 5,36,948 ಮತ್ತು ಉತ್ತೀರ್ಣ ಪ್ರಮಾಣ ಶೇಕಡ 77.96 ಎಂದು ಸಚಿವ ಮಧು ಬಂಗಾರಪ್ಪ ವಿವರಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ 2 ಫಲಿತಾಂಶ ನೋಡುವುದು ಹೇಗೆ
ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದೆ. ಈ ಫಲಿತಾಂಶ ನೋಡುವುದು ಹೇಗೆ ಎಂಬ ಸಂದೇಹಕ್ಕೆ ಇಲ್ಲಿದೆ ಉತ್ತರ.
1) ಶಿಕ್ಷಣ ಇಲಾಖೆಯ ಅಧಿಕೃತ ಫಲಿತಾಂಶ ಪ್ರಕಟವಾಗುವ ತಾಣ https://karresults.nic.in/ ಗೆ ಭೇಟಿ ನೀಡಿ.
2) ಅದರಲ್ಲಿ, “2025 ದ್ವಿತೀಯ ಪಿಯುಸಿ ಪರೀಕ್ಷೆ - 2 ರ ಫಲಿತಾಂಶ ಪ್ರಕಟಣೆ / II PUC EXAM-2 RESULT 2025 announced on 16/05/2025” ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ
3) ಹೊಸ ಪುಟ ತೆರೆದುಕೊಳ್ಳುತ್ತದೆ. ಅದರಲ್ಲಿ “Enter Reg No” ಎಂಬ ಉಲ್ಲೇಖದ ಕೆಳಗೆ ಇರುವ ಚೌಕಟ್ಟಿನೊಳಗೆ ರಿಜಿಸ್ಟರ್ ನಂಬರ್ ನಮೂದಿಸಿ.
4) ನಂತರ “Subject” ಯಾವುದು ಎಂಬುದನ್ನು ಆಯ್ಕೆ ಮಾಡಿ. ಅದರಲ್ಲಿ ಸೈನ್ಸ್, ಆರ್ಟ್ಸ್ ಮತ್ತು ಕಾಮರ್ಸ್ ಎಂಬ ಉಲ್ಲೇಖವಿದೆ.
5) ನಂತರ “Submit” ಬಟನ್ ಕ್ಲಿಕ್ ಮಾಡಿ. ನಿಮ್ಮ ಫಲಿತಾಂಶ ಪರದೆ ಮೇಲೆ ಪ್ರಕಟವಾಗುತ್ತದೆ. ಅದನ್ನು ಡೌನ್‌ಲೋಡ್ ಮಾಡಿಟ್ಟುಕೊಳ್ಳಿ, ಅಗತ್ಯಗಳಿಗಾಗಿ ಮುದ್ರಿಸಿ ಹಾರ್ಡ್ ಕಾಪಿಯನ್ನೂ ಇಟ್ಟುಕೊಳ್ಳಿ.
ದ್ವಿತೀಯ ಪಿಯುಸಿ ಪರೀಕ್ಷೆ 2 ಫಲಿತಾಂಶದ ಡೈರೆಕ್ಟ್ ಲಿಂಕ್ ಇಲ್ಲಿದೆ.