ಕನ್ನಡ ಸುದ್ದಿ  /  Karnataka  /  50 Crore Rupees Sanctioned For Construction Of Two New Bridges In Thirthahalli Taluk

Thirthahalli bridge: ತೀರ್ಥಹಳ್ಳಿ ತಾಲೂಕಿನ ಎರಡು ಹೊಸ ಸೇತುವೆಗಳ ನಿರ್ಮಾಣಕ್ಕೆ 50 ಕೋಟಿ ರೂಪಾಯಿ ಮಂಜೂರು

ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಸುಮಾರು 50 ಕೋಟಿ ರೂಪಾಯಿಗಳ ವೆಚ್ಚದ ಎರಡು ಸೇತುವೆಗಳ ಕಾಮಗಾರಿಗೆ ರಾಜ್ಯ ಆರ್ಥಿಕ ಇಲಾಖೆ ಹಸಿರು ನಿಶಾನೆ ತೋರಿದೆ.

ತೀರ್ಥಹಳ್ಳಿಯ ಸೇತುವೆ
ತೀರ್ಥಹಳ್ಳಿಯ ಸೇತುವೆ

ಶಿವಮೊಗ್ಗ: ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಸುಮಾರು 50 ಕೋಟಿ ರೂಪಾಯಿಗಳ ವೆಚ್ಚದ ಎರಡು ಸೇತುವೆಗಳ ಕಾಮಗಾರಿಗೆ ರಾಜ್ಯ ಆರ್ಥಿಕ ಇಲಾಖೆ ಹಸಿರು ನಿಶಾನೆ ತೋರಿದೆ.

ಟ್ರೆಂಡಿಂಗ್​ ಸುದ್ದಿ

ರಾಜ್ಯ ಆರ್ಥಿಕ ಇಲಾಖೆಯು, ತೀರ್ಥಹಳ್ಳಿ ತಾಲೂಕಿನ ತೂದೂರು - ಮುಂಡುವಳ್ಳಿ ಗ್ರಾಮಗಳ ನಡುವೆ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ ಕಾಮಗಾರಿಗೆ 25.65 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.

ಹಾಗೆಯೇ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು, ಕಾರಣಗಿರಿ - ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರಿನ ಬಿಲ್ಸಾಗರ ದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ 24.36 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಒಪ್ಪಿಗೆ ದೊರೆತಿದ್ದು, ಶೀಘ್ರವಾಗಿ ಯೋಜನೆ ಅನುಷ್ಠಾನಕ್ಕೆ ಟೆಂಡರ್ ಕರಯಲಾಗುವುದು.

ಕ್ಷೇತ್ರದ ಶಾಸಕರೂ ಹಾಗೂ ರಾಜ್ಯ ಗೃಹ ಸಚಿವರೂ ಆದ ಶ್ರೀ ಆರಗ ಜ್ಞಾನೇಂದ್ರ ರವರು ಈ ಎರಡು ಯೋಜನೆಗಳ ಮಂಜೂರಾತಿಗೆ ಬೇಡಿಕೆ ಮಂಡಿಸಿ ಪ್ರಸ್ತಾವನೆ ಸಲ್ಲಿಸಿದ್ದರು.

ತೂದೂರು- ಮುಂಡುವಳ್ಳಿ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಯೋಜನೆ ಕಾರ್ಯಗತ ಗೊಳಿಸಬೇಕೆಂದು ದಶಕಗಳಿಂದ ಬೇಡಿಕೆ ಇದ್ದರೂ ಇದುವರೆಗೆ ಮಾನ್ಯತೆ ದೊರೆತಿರಲಿಲ್ಲ. ಈ ಎರಡೂ ಕಾಮಗಾರಿಗಳನ್ನು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ ವತಿಯಿಂದ ಕಾರ್ಯಗತ ಗೊಳಿಸಲಾಗುವುದು.

ಗಮನಿಸಬಹುದಾದ ಇತರ ಸುದ್ದಿಗಳು

ಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ: ಸಿಎಂ ಬೊಮ್ಮಾಯಿ

ಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬೆಳಗಾವಿ ರಾಜ್ಯದ ಆರ್ಥಿಕ ಬೆಳವಣಿಗೆಗೆ ಹಾಗೂ ಕೈಗಾರಿಕಾ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಜಿಲ್ಲೆಯಾಗಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಉದ್ಯಮ ಸ್ಥಾಪನೆಯಿಂದ ಕೈಗಾರಿಕಾ ಅಭಿವೃದ್ಧಿ ಇನ್ನಷ್ಟು ವೇಗವಾಗಿ ಆಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ವಿವರ ಓದಿಗೆ ಇಲ್ಲಿ ಕ್ಲಿಕ್ಕಿಸಿ

ಒಂದು ವರ್ಷದೊಳಗೆ ಕರ್ನಾಟಕದ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್

ಮುಂದಿನ ವರ್ಷದೊಳಗೆ ರಾಜ್ಯದ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್ (Health Card Karnataka) ನೀಡಲಾಗುವುದು. ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ ಕ್ಷೇತ್ರದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿವರ ಓದಿಗೆ ಇಲ್ಲಿ ಕ್ಲಿಕ್ಕಿಸಿ

ವಿಭಾಗ