Bhadra Upper project: ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಪ್ರಧಾನಿ ಮೋದಿ ಸರ್ಕಾರ ರಾಜ್ಯಕ್ಕೆ ಭಾರಿ ಗಿಫ್ಟ್ ನೀಡಿದೆ. ಭದ್ರಾ ಮೇಲ್ದಂಡ ಯೋಜನೆಗೆ 5,300 ಕೋಟಿ ನೀಡಿದೆ.
ಬೆಂಗಳೂರು: ಚುನಾವಣೆಯ ಹೊಸ್ತಿಲಿನಲ್ಲಿರುವ ರಾಜ್ಯಕ್ಕೆ ಕೇಂದ್ರದ ಮೋದಿ ಸರ್ಕಾರ ಬಜೆಟ್ ನಲ್ಲಿ ಬಂಪರ್ ಕೊಡುಗೆಗಳನ್ನು ನೀಡಲಿದೆ.
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಪ್ರಧಾನಿ ಮೋದಿ ಸರ್ಕಾರ ರಾಜ್ಯಕ್ಕೆ ಭಾರಿ ಗಿಫ್ಟ್ ನೀಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ನೀಡಿದೆ. ಈ ಯೋಜನೆಯಿಂದ ರೈತರಿಗೆ ಭಾರಿ ಅನೂಕುಲವಾಗಲಿದೆ.
ಕೇಂದ್ರ ಸರ್ಕಾರ ಈ ಮಹತ್ವದ ಯೋಜನೆಗೆ ಅನುದಾನ ಘೋಷಣೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ಶ್ರೀಮತಿ @nsitharaman ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಿ ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯಡಿ ಒಟ್ಟು 29.90 ಟಿ ಎಂಸಿ ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ (2,25,515 ಹೆಕ್ಟೇರ್) ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ.