ಚಿಕಿತ್ಸೆ ನೆಪದಲ್ಲಿ ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲೇ ಬಿಟ್ಟು ನಾಪತ್ತೆಯಾಗುವ ಮಕ್ಕಳಿಗೆ ಅಪ್ಪ, ಅಮ್ಮನ ಆಸ್ತಿ ಇಲ್ಲ; ಸರ್ಕಾರದ ಎಚ್ಚರಿಕೆ
ಕನ್ನಡ ಸುದ್ದಿ  /  ಕರ್ನಾಟಕ  /  ಚಿಕಿತ್ಸೆ ನೆಪದಲ್ಲಿ ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲೇ ಬಿಟ್ಟು ನಾಪತ್ತೆಯಾಗುವ ಮಕ್ಕಳಿಗೆ ಅಪ್ಪ, ಅಮ್ಮನ ಆಸ್ತಿ ಇಲ್ಲ; ಸರ್ಕಾರದ ಎಚ್ಚರಿಕೆ

ಚಿಕಿತ್ಸೆ ನೆಪದಲ್ಲಿ ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲೇ ಬಿಟ್ಟು ನಾಪತ್ತೆಯಾಗುವ ಮಕ್ಕಳಿಗೆ ಅಪ್ಪ, ಅಮ್ಮನ ಆಸ್ತಿ ಇಲ್ಲ; ಸರ್ಕಾರದ ಎಚ್ಚರಿಕೆ

Abandoning Parents: ಕರ್ನಾಟಕದ ವಿವಿಧ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೆಪದಲ್ಲಿ ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲೇ ಬಿಟ್ಟು ನಾಪತ್ತೆಯಾಗುವ ಮಕ್ಕಳ ಪ್ರಕರಣ ಹೆಚ್ಚಾಗಿದೆ. ಇಂತಹ ಮಕ್ಕಳಿಗೆ ಅಪ್ಪ, ಅಮ್ಮನ ಆಸ್ತಿ ಇಲ್ಲ ಎಂದು ಸಚಿವ ಶರಣ ಪ್ರಕಾಶ ಪಾಟೀಲ್ ಎಚ್ಚರಿಸಿದ್ದಾರೆ.

ಚಿಕಿತ್ಸೆ ನೆಪದಲ್ಲಿ ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲೇ ಬಿಟ್ಟು ನಾಪತ್ತೆಯಾಗುವ ಮಕ್ಕಳಿಗೆ ಅಪ್ಪ, ಅಮ್ಮನ ಆಸ್ತಿ ಇಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಎಚ್ಚರಿಸಿದ್ದಾರೆ.
ಚಿಕಿತ್ಸೆ ನೆಪದಲ್ಲಿ ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲೇ ಬಿಟ್ಟು ನಾಪತ್ತೆಯಾಗುವ ಮಕ್ಕಳಿಗೆ ಅಪ್ಪ, ಅಮ್ಮನ ಆಸ್ತಿ ಇಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಎಚ್ಚರಿಸಿದ್ದಾರೆ.

ಬೆಂಗಳೂರು: ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡು ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುವ ಪ್ರಕರಣಗಳು ಕರ್ನಾಟಕದಲ್ಲಿ ಹೆಚ್ಚಾಗುತ್ತಿವೆ. ಈ ರೀತಿ ತೊಂದರೆಗೆ ಒಳಗಾದ ಪಾಲಕರು ತಮ್ಮ ಮಕ್ಕಳ ಪರವಾಗಿ ಮಾಡಿರುವ ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವುದಕ್ಕೆ ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಉನ್ನತ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ವೃದ್ಧ ಪಾಲಕರಿಗೆ ನೆರವಾಗುವಂತೆ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗಳ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದಾರೆ.

ಚಿಕಿತ್ಸೆ ನೆಪದಲ್ಲಿ ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲೇ ಬಿಟ್ಟು ನಾಪತ್ತೆಯಾಗುವ ಮಕ್ಕಳು

ಚಿಕಿತ್ಸೆ ನೆಪದಲ್ಲಿ ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲೇ ಬಿಟ್ಟು ಮಕ್ಕಳು ನಾಪತ್ತೆಯಾದ ಪ್ರಕರಣ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲೇ 150ಕ್ಕೂ ಇವೆ. ಇತರೆ ವೈದ್ಯಕೀಯ ಸಂಸ್ಥೆಗಳಲ್ಲೂ ಇಂತಹ 100ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಕಳವಳ ವ್ಯಕ್ತಪಡಿಸಿದ ಸಚಿವ ಶರಣ ಪ್ರಕಾಶ್ ಪಾಟೀಲ್, ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಮಕ್ಕಳ ಅಮಾನವೀಯ ಕೃತ್ಯಗಳಿಗೆ ತಡೆ ಹಾಕಬೇಕು ಎಂದು ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗಳ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಸದಸ್ಯರ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಮ್ಮ ಬಗ್ಗೆ ಕಾಳಜಿ ವಹಿಸದೇ ಮಕ್ಕಳು ನಮ್ಮನ್ನು ತೊರೆದು ಹೋಗಿದ್ದಾರೆ. ಕೆಲವರು ಆರ್ಥಿಕ ಸಂಕಷ್ಟಗಳಿಂದ ಬಿಟ್ಟು ಹೋಗಿದ್ದು, ಆಸ್ತಿಗಳನ್ನು ಅವರ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ. ಸರ್ಕಾರಿ ಆಸ್ಪತ್ರೆ ಗಳಲ್ಲಿ ಊಟ, ವಸತಿ, ಆಶ್ರಯ ಉಚಿತವಾಗಿದೆ ಎಂಬ ಕಾರಣಕ್ಕೆ ಹೀಗೆ ಮಾಡಿದ್ದಾರೆ ಎಂದು ಅನೇಕ ಪಾಲಕರು ಅಹವಾಲು ತೋಡಿಕೊಂಡಿದ್ದಾರೆ ಎಂದು ಬಿಐಎಂಎಸ್ ಅಧಿಕಾರಿಗಳು ಸಚಿವರಿಗೆ ಹೇಳಿದರು.

ಪಾಲಕರನ್ನು ನೋಡಿಕೊಳ್ಳದ ಮಕ್ಕಳಿಗೆ ಅಪ್ಪ, ಅಮ್ಮನ ಆಸ್ತಿ ಇಲ್ಲ; ಹಿರಿಯ ನಾಗರಿಕರ ಕಾಯ್ದೆಯಡಿ ಕ್ರಮ

ಚಿಕಿತ್ಸೆ ನೆಪದಲ್ಲಿ ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲೇ ಬಿಟ್ಟು ನಾಪತ್ತೆಯಾಗುವ ಮಕ್ಕಳ ಪ್ರಕರಣಗಳು ಕಂಡುಬಂದ ತತ್‌ಕ್ಷಣವೇ ಸಂಬಂಧಪಟ್ಟ ಕಂದಾಯ ಉಪ ವಿಭಾಗಾಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ನಿರ್ದೇಶಕರು ದೂರು ನೀಡಬೇಕು. ಪೋಷಕರು ಕೂಡ ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್‌ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಬೇಕು ಎಂದು ಸಚಿವ ಶರಣ ಪ್ರಕಾಶ ಪಾಟೀಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

  • ವೃದ್ಧ ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ– 2007ರ ಅಡಿಯಲ್ಲಿ ಉಪ ವಿಭಾಗಾಧಿಕಾರಿಗಳು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ದೂರು ಸಲ್ಲಿಸಬಹುದು.

ಇದನ್ನೂ ಓದಿ| ಮದುವೆ ಭಾಗ್ಯ ಕರುಣಿಸು ಮಾದಪ್ಪ; ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡ ಮಂಡ್ಯಅವ್ವೇರಹಳ್ಳಿಯ ಅವಿವಾಹಿತ ರೈತ ಮಕ್ಕಳು

  • ಹಿರಿಯ ನಾಗರಿಕರ ಸಂಕಷ್ಟದಲ್ಲಿರುವಾಗ ಮಕ್ಕಳು ಅಥವಾ ಸಂಬಂಧಿಕರು ಆರ್ಥಿಕ ಮತ್ತು ವೈದ್ಯಕೀಯ ಬೆಂಬಲ ನೀಡಬೇಕೆಂಬ ನಿಯಮವಿದೆ. ನಿಯಮ ಉಲ್ಲಂಘಿಸಿದರೆ ತಮ್ಮ ಮಕ್ಕಳ ಪರವಾಗಿ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕನ್ನು ಪಾಲಕರು ಹೊಂದಿರುತ್ತಾರೆ.
  • ಆನುವಂಶಿಕವಾಗಿ ಆಸ್ತಿಯನ್ನು ಪಡೆದ ನಂತರ ಮಕ್ಕಳು ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ಮಾಲೀಕತ್ವವನ್ನು ಮರು ಪಡೆಯಲು ಈ ಕಾಯ್ದೆಯ ಸೆಕ್ಷನ್ 23ರ ಅಡಿ ವಯಸ್ಸಾದ ಪಾಲಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಎಂದು ಸಚಿವ ಶರಣ ಪ್ರಕಾಶ ಪಾಟೀಲ್ ವಿವರಿಸಿದರು.

ಇದನ್ನೂ ಓದಿ| ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು: ಕರ್ನಾಟಕ ವಿಧಾನ ಸಭೆಯಲ್ಲಿ ಬಿಸಿಬಿಸಿ ಚರ್ಚೆ, ಗದ್ದಲ, ವಿಡಿಯೋ

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner