ಹುಬ್ಬಳ್ಳಿಯ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಂದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ
ಕನ್ನಡ ಸುದ್ದಿ  /  ಕರ್ನಾಟಕ  /  ಹುಬ್ಬಳ್ಳಿಯ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಂದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ

ಹುಬ್ಬಳ್ಳಿಯ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಂದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ

ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. 5 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ ಅಪಹರಿಸಿ ಕೊಂದಿದ್ದಾನೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಹುಬ್ಬಳ್ಳಿಯ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಂದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ
ಹುಬ್ಬಳ್ಳಿಯ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಂದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ (ಪ್ರಾತಿನಿಧಿಕ ಚಿತ್ರ - Canva)

ಹುಬ್ಬಳ್ಳಿ: ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. 5 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ ಅಪಹರಿಸಿ ಕೊಂದಿದ್ದಾನೆ ಎಂದು ಸ್ಥಳೀಯ ನಿವಾಸಿಗಳು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ನ್ಯಾಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಯಾವುದೇ ಅಧಿಕೃತ ಮಾಹಿತಿಯೂ ಲಭ್ಯವಾಗದೇ ಈ ಬಗ್ಗೆ ಸತ್ಯಾಸತ್ಯತೆಯನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲದ ಕಾರಣ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದರು. ಅದೇ ರೀತಿ ಸಿಸಿಟಿವಿ ದೃಶ್ಯಗಳನ್ನು ಸಹ ಪರಿಶೀಲಿಸಿದ್ದರು.

ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯ ಪತ್ತೆ

ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಜನರ ಒತ್ತಡವೂ ಅಷ್ಟೇ ಇತ್ತು. ಈ ಸಂದರ್ಭದಲ್ಲಿ ತನಿಖೆಗೆ ಇಳಿದ ಪೊಲೀಸರಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಇರುವ ಜಾಗವನ್ನು ಪತ್ತೆ ಮಾಡಿದ್ದರು. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾದರು. ಆದರೆ ಪೊಲೀಸರ ಮೇಲೆ ರಿತೇಶ್ ಕುಮಾರ್ ಹಲ್ಲೆಗೆ ಯತ್ನಿಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು ಎಂದು ಕನ್ನಡಪ್ರಭ ಜಾಲತಾಣ ವರದಿ ಮಾಡಿದೆ.

ಪೊಲೀಸರು ಹಾರಿಸಿದ ಗುಂಡುಗಳು ಆರೋಪಿಯ ಕಾಲು ಮತ್ತು ಎದೆಯ ಭಾಗಕ್ಕೆ ತಗುಲಿದೆ. ಆ ಕಾರಣಕ್ಕೆ ಆರೋಪಿ ಅಲ್ಲೆ ಕುಸಿದುಬಿದ್ದನು. ಆರೋಪಿಯನ್ನು ರಕ್ಷಿಸುವ ಸಲುವಾಗಿ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದರು ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಈ ಹಿಂದೆ ಆಗಿದ್ದೇನು?

ಬಾಲಕಿಯ ತಂದೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿತ್ತು. ಬಾಲಕಿ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದು ಹೊರೆಗೆ ಮಗು ಆಟವಾಡುತ್ತಿತ್ತು. ಇದನ್ನು ಗಮನಿಸಿದ ರಿತೇಶ್ ಕುಮಾರ್ ಚಾಕಲೇಟ್ ಕೊಡುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ ಎಂದು ಹೇಳಲಾಗುತ್ತಿದೆ. ಆರೋಪಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮಗಳು ಕಾಣೆಯಾಗಿದ್ದಾಳೆಂದು ತಾಯಿಗೆ ತಿಳಿದಾಗ, ಆಕೆ ಸ್ಥಳೀಯರೊಂದಿಗೆ ಸೇರಿ ಆಕೆಗಾಗಿ ಹುಡುಕಾಟ ಆರಂಭಿಸಿದ್ದಳು.

ಆಕೆಯ ತಾಯಿ ಮನೆ ಕೆಲಸದಾಕೆಯಾಗಿ ಮತ್ತು ಬ್ಯೂಟಿ ಪಾರ್ಲರ್‌ನಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ತಂದೆ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ನ್ಯಾಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಆದರೆ ಇದೀಗ ಆರೋಪಿ ಮೃತಪಟ್ಟಿದ್ದಾನೆ.

Suma Gaonkar

eMail
Whats_app_banner