ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ; ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಎಚ್ಚತ್ತ ಸರ್ಕಾರ-after tirupati temple controversy karnataka government ordered use nandini ghee in temples prasad prs ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ; ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಎಚ್ಚತ್ತ ಸರ್ಕಾರ

ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ; ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಎಚ್ಚತ್ತ ಸರ್ಕಾರ

Muzrai Department: ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ವಿವಾದದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ, ತನ್ನ ವ್ಯಾಪ್ತಿಗೆ ಬರುವ ದೇವಸ್ಥಾನಗಳ ಪ್ರಸಾದದಲ್ಲಿ ನಂದಿನಿ ತುಪ್ಪವನ್ನೇ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ.

ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ; ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಎಚ್ಚತ್ತ ಸರ್ಕಾರ
ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ; ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಎಚ್ಚತ್ತ ಸರ್ಕಾರ

ಬೆಂಗಳೂರು: ಆಂಧ್ರ ಪ್ರದೇಶದ ತಿರುಪತಿ ದೇವಾಲಯದಲ್ಲಿ ನೀಡುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಚರ್ಬಿ ಮಿಶ್ರಣವಾಗುತ್ತಿರುವ ಸುದ್ದಿ ಸ್ಫೋಟಗೊಂಡ ಬೆನ್ನಲ್ಲೇ ಕರ್ನಾಟಕ ಸರ್ಕಾರ ಎಲ್ಲಾ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಬಳಸುವಂತೆ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ಶುದ್ದ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ. ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದ್ದಾರೆ. ಹಾಗೆಯೇ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆಯೂ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಧಾರ್ಮಿ ದತ್ತಿ ಇಲಾಖೆಯ ಸಹಾಯಕ ಆಯುಕ್ತರು, ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸುತ್ತೋಲೆ ಪ್ರತಿಯನ್ನು ಕಳುಹಿಸಲಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ತಿರುಪತಿಗೆ ರಾಜ್ಯದ ನಂದಿನಿ ತುಪ್ಪ ಸರಬರಾಜಾಗುತ್ತಿಲ್ಲ. ಈ ಟೆಂಡರ್‌ ಖಾಸಗಿ ಕಂಪನಿಗಳ ಪಾಲಾಗಿದೆ. ಇಡೀ ದೇಶದಲ್ಲಿ ನಂದಿನಿ ತುಪ್ಪ ಶುದ್ದ ಎಂಬ ಖ್ಯಾತಿಗೆ ಪಾತ್ರವಾಗಿದೆ.

ದೇಶಾದ್ಯಂತ ಸದ್ದು ಮಾಡ್ತಿದೆ ಲಡ್ಡು ವಿವಾದ

ಹಿಂದಿನ ವೈಎಸ್​ಆರ್​​ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿಯಲ್ಲಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು ಎಂದು ಈಗಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗುರುವಾರ ಸ್ಫೋಟಕ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಈ ವಿಷಯ ಕುರಿತು ಟಿಡಿಪಿ ಮತ್ತು ವೈಎಸ್​​ಆರ್‌ ಕಾಂಗ್ರೆಸ್‌ ನಾಯಕರ ನಡುವೆ ಜಟಾಪಟಿ ಆರಂಭವಾಗಿದೆ.

ತಾವು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಚಂದ್ರಭಾಬು ನಾಯ್ಡು ಅವರು ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹಿಂದಿನ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಆರೋಪಿಸಿದ್ದಾರೆ. ತಿರುಮಲ ತಿರುಪತಿ ದೇವಾಲಯದಲ್ಲಿ ಕಲಬೆರಕೆ ಪರೀಕ್ಷಾ ಸೌಲಭ್ಯಗಳಿಲ್ಲ. ಈ ಆಂಶವನ್ನೇ ದುರುಪಯೋಗ ಮಾಡಿಕೊಂಡ ತುಪ್ಪ ಪೂರೈಕೆ ಮಾಡುತ್ತಿದ್ದ ಕಂಪನಿ ಕಲಬೆರಕೆ ತುಪ್ಪವನ್ನು ಸರಬರಾಜು ಮಾಡುತ್ತಿದೆ ಎಂದು ಟಿಟಿಡಿ ಮುಖ್ಯಸ್ಥರು ಆರೋಪ ಮಾಡಿದ್ದಾರೆ.

ಪ್ರಯೋಗಾಲಯದ ವರದಿಯಲ್ಲಿ ಲಡ್ಡುವಿನಲ್ಲಿ ಮೀನಿನ ಎಣ್ಣೆ, ಗೋಮಾಂಸದ ಚರ್ಬಿ, ಹಂದಿಯ ಕೊಬ್ಬಿನ ಅಂಶಗಳು ಪತ್ತೆಯಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಂಧ್ರಪ್ರದೇಶ ಸರ್ಕಾರವನ್ನು ಆಗ್ರಹಪಡಿಸಿದ್ದಾರೆ. ಸಿಬಿಐ ತನಿಖೆ ನಡೆಸುವಂತೆ ಆಂಧ್ರಪ್ರದೇಶ ಅಧ್ಯಕ್ಷೆ ವೈ ಎಸ್‌ ಶರ್ಮೀಳಾ ಒತ್ತಾಯಿಸಿದ್ದಾರೆ.

mysore-dasara_Entry_Point