ಕನ್ನಡ ಸುದ್ದಿ  /  Karnataka  /  Amit Shah To Visit Puttur In Karnataka On Feb 11 Check Program Details

Amit Shah: ಪುತ್ತೂರಿಗೆ ಅಮಿತ್‌ ಶಾ; ಫೆ.11ರಂದು ವಿವಿಧ ಕಾರ್ಯಕ್ರಮದಲ್ಲಿ ಭಾಗಿ

Amit Shah to visit Puttur: ವಿಧಾನ ಸಭಾ ಚುನಾವಣಾ ಪೂರ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಇದು ಅಮಿತ್‌ ಶಾ ಅವರ ಮೊದಲ ಭೇಟಿ. ಅವರು ಫೆ.11ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅಮಿತ್‌ ಶಾ (ಸಂಗ್ರಹ ಚಿತ್ರ)
ಅಮಿತ್‌ ಶಾ (ಸಂಗ್ರಹ ಚಿತ್ರ) (PTI)

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಫೆ.11ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಚುನಾವಣಾ ಪೂರ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಇದು ಅಮಿತ್‌ ಶಾ ಅವರ ಮೊದಲ ಭೇಟಿ.

ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಸಂಭ್ರಮ ಕಾರ್ಯಕ್ರಮ ಆ ದಿನ ನಡೆಯಲಿದೆ. ಸಹಕಾರಿ ಸಂಸ್ಥೆಯ ಸುವರ್ಣ ಸಂಭ್ರಮವಾದ ಕಾರಣ ಬೃಹತ್‌ ಸಹಕಾರಿ ಸಮಾವೇಶ ಆಯೋಜಿಸಲಾಗುತ್ತಿದೆ. ಅಮಿತ್‌ ಶಾ ಅವರು ಸಹಕಾರಿ ಸಚಿವರೂ ಆಗಿರುವ ಕಾರಣ, ಬಿಜೆಪಿ ಕಾರ್ಯಕರ್ತರು ಈ ಸಮಾವೇಶದ ಯಶಸ್ಸಿಗಾಗಿ ಕೆಲಸ ಮಾಡುತ್ತಿದ್ದಾರೆ. ಸಮಾವೇಶದಲ್ಲಿ ಒಂದು ಲಕ್ಷ ಸಹಕಾರಿಗಳನ್ನು ಸೇರಿಸುವ ಪ್ರಯತ್ನ ಶುರುವಾಗಿದೆ.

ಈ ಸಹಕಾರಿ ಸಮಾವೇಶವು ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿದೆ. ಅಮಿತ್‌ ಶಾ ಅವರು ಫೆಬ್ರವರಿ 11ರಂದು ಅಪರಾಹ್ನ 2.30ಕ್ಕೆ ಪುತ್ತೂರಿಗೆ ಆಗಮಿಸಲಿದ್ದಾರೆ. ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಯ ಮೈದಾನದಲ್ಲಿ ನಡೆಯುವ ಬೃಹತ್‌ ಸಹಕಾರಿ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಬಳಿಕ ಕ್ಯಾಂಪ್ಕೋ ಚಾಕಲೇಟ್‌ ಕಾರ್ಖಾನೆಗೆ ಭೇಟಿ ನೀಡಲಿದ್ದು, ಅಲ್ಲಿ ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆ ಸಂಬಂಧದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 5.30ಕ್ಕೆ ನಿರ್ಗಮಿಸಲಿದ್ದಾರೆ.

ಅಮಿತ್‌ ಶಾ ಅವರು ಮಂಗಳೂರಿಗೆ ವಿಮಾನದಲ್ಲಿ ಬಂದು, ಅಲ್ಲಿಂದ ಹನುಮಗಿರಿಗೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಅಲ್ಲಿಂದ ರಸ್ತೆ ಮಾರ್ಗವಾಗಿ ತೆಂಕಿಲಕ್ಕೆ ಬರಬಹುದು ಎಂದು ಮೂಲಗಳು ತಿಳಿಸಿವೆ.

ಪುತ್ತೂರು ತಾಲೂಕಿನಲ್ಲಿ ಬಿಜೆಪಿಯ ಸಂಕಲ್ಪ ಅಭಿಯಾನ

ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಪುತ್ತೂರು ತಾಲೂಕಿನಾದ್ಯಂತ ಬಿಜಪಿ ಸಂಕಲ್ಪ ಅಭಿಯಾನ ಶುರುಮಾಡಿದ್ದು, ಪ್ರಗತಿಯಲ್ಲಿದೆ. ಇದೇ ಸಂದರ್ಭದಲ್ಲಿ ಸಹಕಾರಿ ಸಮಾವೇಶದ ವಿಚಾರವನ್ನೂ ಮನೆ ಮನೆಗೆ ತಿಳಿಸಿ, ಕಾರ್ಯಕ್ರಮಕ್ಕೆ ಆಹ್ವಾನಿಸುವ ಕೆಲಸವೂ ನಡೆದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯ ವೇಳೆ ಎಂಟು ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತ್ತು.

ಗಮನಿಸಬಹುದಾದ ಸುದ್ದಿಗಳು

Cyber fraud: ಆರೋಪಿಗಳು ಅಕ್ರಮ ಪ್ರೀ-ಹೋಸ್ಟೆಡ್‌ ಗೇಮಿಂಗ್‌ ವೆಬ್‌ಸೈಟ್‌ ಮೂಲಕ ದೇಶಾದ್ಯಂತ ವಂಚನೆ ಎಸಗುತ್ತಿದ್ದರು. ಆರೋಪಿಗಳನ್ನು ಶ್ರೀಯಾನ್ಶ್‌ ಚಂದ್ರಶೇಖರ್‌, ಆಯುಷ್‌ ದೇವಾಂಗನ್‌, ಯಶ್‌ ಗಣವೀರ್‌ ಎಂದು ಗುರುತಿಸಲಾಗಿದೆ. ಇವರು ರಾಯ್‌ಪುರ ಮತ್ತು ಬೆಂಗಳೂರು ಕೇಂದ್ರಿತವಾಗಿ ಈ ವಂಚನಾ ಕೃತ್ಯಗಳನ್ನು ಎಸಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

ಹದಿಹರೆಯದಲ್ಲಿ ಹೊಂಗನಸುಗಳು ಸಹಜ. ಮನಸ್ಸಿನ ಭಾವನೆಗಳು ಬಹಳ ಸೂಕ್ಷ್ಮವಾಗಿರುತ್ತವೆ. ಅದರಲ್ಲೂ ಹದಿಹರೆಯದಲ್ಲಿ ಹುಡುಗರಿಗೆ ಹುಡುಗಿಯರನ್ನು ಕಂಡಾಗ, ಹುಡುಗಿಯರಿಗೆ ಹುಡುಗರನ್ನು ಕಂಡಾಗ ಉಂಟಾಗುವ ಭಾವನಾ ವ್ಯತ್ಯಾಸಗಳು ಸೂಕ್ಷ್ಮವಾದವು. ಅಂತಹ ಸನ್ನಿವೇಶದಲ್ಲಿ ಒಂದು ಪರೀಕ್ಷಾ ಕೊಠಡಿಯಲ್ಲಿ 50 ವಿದ್ಯಾರ್ಥಿನಿಯರು, ಅವರ ನಡುವೆ ಒಬ್ಬನೇ ಒಬ್ಬ ವಿದ್ಯಾರ್ಥಿ! ವಿವರ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

IPL_Entry_Point